LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ನಿರಾಶ್ರಿತರಿಗೆ ಹಣ್ಣು ವಿತರಿಸಿ ಜನ್ಮ ದಿನ ಆಚರಣೆ

Advertisement
Advertisement

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ರಂಗನಾಥ್ ಜ್ಯುಯಲರ್ಸ್ ಮಾಲೀಕರು
, ಸಮಾಜ ಸೇವಕರು ಹಾಗೂ ಕೆಪಿಸಿಸಿ ಪರಿಶಿಷ್ಟ ಜಾತಿ ವಿಭಾಗದ ರಾಜ್ಯ ಸಂಚಾಲಕ ಕೆ.ಕೃಷ್ಣಪ್ಪ ಅವರು ನಿರಾಶ್ರಿತರಿಗೆ ಹಣ್ಣು ವಿತರಿಸಿ 71ನೇ ಜನ್ಮ ದಿನ ಆಚರಿಸಿಕೊಂಡರು.

ಚಿತ್ರದುರ್ಗ ತಾಲ್ಲೂಕಿನ ಗೋನೂರು ಸಮೀಪದ ಬಚ್ಚಬೋರನಹಟ್ಟಿಯ ನಿರಾಶ್ರಿತರ ಪರಿಹಾರ ಕೇಂದ್ರದಲ್ಲಿ ಶನಿವಾರ ಒಟ್ಟು 420ಕ್ಕೂ ಹೆಚ್ಚು ನಿರಾಶ್ರಿತರಿಗೆ ಹಣ್ಣು-ಹಂಪಲುಗಳನ್ನು ವಿತರಿಸುವ ಮೂಲಕ ಸರಳ ಮತ್ತು ಸಾರ್ಥಕವಾಗಿ ಜನ್ಮ ದಿನ ಆಚರಿಸಿಕೊಂಡರು.

ಈ ವೇಳೆ ಮಾತನಾಡಿದ ಕೆ.ಕೃಷ್ಣಪ್ಪ, ಮಾನವೀಯತೆ ಮತ್ತು ಕರುಣೆಯೇ ಎಲ್ಲ ಧರ್ಮಗಳ ಮೂಲವಾಗಿದೆ. ಅಸಹಾಯಕರ ಸೇವೆ ಮಾಡುವುದರಲ್ಲಿ ಸಿಗುವ ನೆಮ್ಮದಿ ಮತ್ಯಾವುದರಲ್ಲೂ ಸಿಗುವುದಿಲ್ಲ. ಇಲ್ಲಿನ ನಿರಾಶ್ರಿತರ ಕೇಂದ್ರದ ಅಧಿಕಾರಿಗಳು ಮತ್ತು ಸಿಬ್ಬಂದಿಯು ಪ್ರೀತಿಯಿಂದ ಎಲ್ಲ ನಿರಾಶ್ರಿತರನ್ನು ಆದರಿಸಲಾಗುತ್ತದೆ. ಸರ್ಕಾರದಿಂದ ಸಿಗುವ ಸೌಲಭ್ಯಗಳನ್ನು ತಲುಪಿಸುವ ಮೂಲಕ ಆಶ್ರಯ ಕಲ್ಪಿಸಿರುವುದು ಶ್ಲಾಘನೀಯ ಎಂದರು.

1955ರಲ್ಲಿ ಹಳ್ಳಿಯೊಂದರಲ್ಲಿ ಜನಿಸಿ, ನಂತರ ಚಿತ್ರದುರ್ಗ ನಗರಕ್ಕೆ ಬಂದು ನೆಲೆಸಿ, ಎಲ್ಲ ಸಮಾಜದ ಬಂಧುಗಳೊಂದಿಗೆ, ಮಠಾಧೀಶರೊಂದಿಗೆ ಬೆರೆತು ಸಮಾಜಮುಖಿ ಕೆಲಸಗಳನ್ನು ಮಾಡಿಕೊಂಡು ಬಂದಿದ್ದೇನೆ. ಸಮಾಜವು ಕೂಡ ನನ್ನನ್ನು ಗುರುತಿಸಿ ಪ್ರೋತ್ಸಾಹಿಸಿದೆ ಎಂದು ತಿಳಿಸಿದ ಅವರು, ಇಲ್ಲಿನ ನಿರಾಶ್ರಿತರಿಗೆ ಹಣ್ಣು ಹಂಚಿ ಅವರ ಆರೋಗ್ಯಕ್ಕಾಗಿ ಪ್ರಾರ್ಥಿಸಲು ಅವಕಾಶ ಸಿಕ್ಕಿರುವುದು ನನ್ನ ಸೌಭಾಗ್ಯ ಎಂದರು.

ಈ ಸಂದರ್ಭದಲ್ಲಿ ನಿರಾಶ್ರಿತರ ಪರಿಹಾರ ಕೇಂದ್ರದ ಅಧೀಕ್ಷಕ ವಿಜಯ್,  ಆಪ್ತ ಸಹಾಯಕ ಎಂ.ಮಹದೇವಯ್ಯ ಸೇರಿದಂತೆ ಎಂ.ಕೃಷ್ಣಪ್ಪ ಅವರ ಪತ್ನಿ ನಗರಸಭೆ ಮಾಜಿ ಸದಸ್ಯ ಗೌರಮ್ಮ, ಪುಷ್ಪ, ರಂಗಸ್ವಾಮಿ ಇದ್ದರು.

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಾಣಿ ವಿಲಾಸ ಸಾಗರ ಹಾಗೂ ಗಾಯತ್ರಿ ಜಲಾಶಯಗಳಿಗೆ ಪ್ರವಾಸಿಗರ ಪ್ರವೇಶ ತಾತ್ಕಾಲಿಕ ನಿರ್ಬಂಧಆಗಸ್ಟ್ 12ಕ್ಕೆ 'ಶತಮಾನದ ಖಗ್ರಾಸ ಸೂರ್ಯಗ್ರಹಣ': ಭಾರತದಲ್ಲಿ ಗೋಚರವಿಲ್ಲ, ಯಾವುದೇ ಆಚರಣೆ ಅಗತ್ಯವಿಲ್ಲರಾಣಿ ಎಲಿಜಬೆತ್ ಹೊಗಳಿದ್ದ ನಮ್ಮ ವಿಧಾನಸೌಧವೇ ನನಗೆ ಸ್ಫೂರ್ತಿ-ಟಿ.ಬಿ ಜಯಚಂದ್ರಕೆಪಿಸಿಸಿ ಅಧ್ಯಕ್ಷರ ಆಶೀರ್ವಾದ ಸಿಕ್ಕಿದೆ- ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಸಣ್ಣಚಿತ್ತಯ್ಯ ಯುವ ಜನತೆಗೆ ಯೋಗ, ವ್ಯಾಯಾಮ ಅತ್ಯಂತ ಅವಶ್ಯ:ದಿವ್ಯ ಜ್ಞಾನಾನಂದ ಶ್ರೀಎಸ್. ನಾಗೇನಹಳ್ಳಿ ಎಂಪಿಸಿಎಸ್ ನೂತನ ಅಧ್ಯಕ್ಷರಾಗಿ ಮುನಿಕೃಷ್ಣಪ್ಪ ಆಯ್ಕೆಅಪಘಾತದಲ್ಲಿ ಮೃತಪಟ್ಟ ಕೋಳಿಗಳು 'ಜೀವಸಂಪತ್ತು': ವಿಮಾ ಪರಿಹಾರ ಎತ್ತಿಹಿಡಿದ ಹೈಕೋರ್ಟ್ಸವರ್ಣೀಯ ಮುಖಂಡರಿಂದ ದಲಿತ ಅಧಿಕಾರಿಗಳಿಗೆ ಕಿರುಕುಳ-ಮಾರಸಂದ್ರ ಮುನಿಯಪ್ಪಅಂಗನವಾಡಿ ಕೇಂದ್ರದ ಮಕ್ಕಳಿಗೆ ಸಮವಸ್ತ್ರ ವಿತರಣೆಮೈಸೂರಲ್ಲಿ  'ಜೋಡೆತ್ತು' ಚಿತ್ರದ ಅದ್ದೂರಿ ಕ್ಲೈಮ್ಯಾಕ್ಸ್