Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಂಭ್ರಮದಿಂದ ರಂಜಾನ್ ಆಚರಣೆ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯಾದ್ಯಂತ ಇಂದು ಈದ್‌ಉಲ್‌ಫಿತರ್‌(ರಂಜಾನ್‌) ಹಬ್ಬವನ್ನು ಮುಸ್ಲಿಂ ಬಂಧುಗಳೆಲ್ಲರೂ ಸೇರಿ ಸಂಭ್ರಮ - ಸಡಗರದಿಂದ ಆಚರಿಸಿದರು. ಕಳೆದ ಒಂದು ತಿಂಗಳಿನಿಂದ ಉಪವಾಸ ಆಚರಣೆ ನಡೆಸಿದ್ದ ಮುಸ್ಲಿಂ ಬಾಂಧವರು ಹೊಸ ಬಟ್ಟೆ ಧರಿಸಿ ಈದ್ಗಾ ಮೈದಾನ ಮತ್ತು ಮಸೀದಿಗಳಿಗೆ ತೆರಳಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು.


ಬಳ್ಳಾರಿ, ತುಮಕೂರು, ಚಿಕ್ಕಮಗಳೂರು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ವಿಜಯನಗರ(ಹೊಸಪೇಟೆ), ದಾವಣಗೆರೆ ಶಿವಮೊಗ್ಗ ಸೇರಿದಂತೆ ಚಿತ್ರದುರ್ಗ ಜಿಲ್ಲೆಯ ಚಿತ್ರದುರ್ಗ, ಹಿರಿಯೂರು, ಚಳ್ಳಕೆರೆ, ಮೊಳಕಾಲ್ಮೂರು, ಹೊಸದುರ್ಗ, ಹೊಳಲ್ಕೆರೆ ಸೇರಿದಂತೆ ಇತರೆ ಕಡೆ ಮುಸಲ್ಮಾನ್ ಬಾಂಧವರು ಶ್ರದ್ಧಾ ಭಕ್ತಿಯಿಂದ ಹಬ್ಬ ಆಚರಿಸಿದರು.

ರಾಜ್ಯದ ವಿವಿಧ ಈದ್ಗಾ ಮೈದಾನದಲ್ಲಿ ಸಾಮೂಹಿಕ‌ಪ್ರಾರ್ಥನೆ ಸಲ್ಲಿಕೆ ಬಳಿಕ ಪರಸ್ಪರರು ಅಪ್ಪಿಕೊಂಡು ಶುಭಾಶಯ ವಿನಿಯಮ ಮಾಡಿಕೊಂಡರು. ಬಳಿಕ ತಮ್ಮ ಮನೆಗೆ ತೆರಳಿ ಸಿಹಿ ಸೇವಿಸಿ ಸಂಭ್ರಮಿಸಿದರು. ಜೊತೆಗೆ ಸ್ನೇಹಿತರು, ಬಂಧುಗಳು ಮತ್ತು ನೆರೆ ಹೊರೆಯವರನ್ನು ಮನೆಗೆ ಆಹ್ವಾನಿಸಿ ಹಬ್ಬವನ್ನು ಆಚರಿಸಿದರು.

ಧರ್ಮ ಗುರುಗಳು ಹಬ್ಬದ ಸಂದೇಶ ಸಾರಿ, ದಾನ - ಧರ್ಮದ ಮಹತ್ವ ಕುರಿತು ಬೋಧನೆ ಮಾಡಿದರು. ಸಮಾಜದಲ್ಲಿ ಎಲ್ಲರೊಂದಿಗೂ ಸಹೋದರರಂತೆ ಬಾಳುವಂತೆ ಕರೆ ನೀಡಿದರು.ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದ ಬಳಿಕ ಪರಸ್ಪರ ಅಪ್ಪಿಕೊಂಡು ಸೋದರತ್ವ ಮೆರೆದರು. ಹಬ್ಬದ ಶುಭಾಶಯ ವಿನಿಮಯ ಮಾಡಿಕೊಂಡರು.

ಬಳ್ಳಾರಿ ಸಂಭ್ರಮ: ಬಳ್ಳಾರಿ ನಗರ ಸೇರಿದಂತೆ ಜಿಲ್ಲೆಯಾದ್ಯಂತ ಮುಸ್ಲಿಂ ಬಾಂಧವರು ಶ್ರದ್ಧಾ ಭಕ್ತಿಯೊಂದಿಗೆ ಸಂಭ್ರಮದಿಂದ ರಂಜಾನ್ ಹಬ್ಬ ಆಚರಿಸಿದರು. ಬೆಳಗ್ಗೆಯಿಂದಲೇ ನಗರದ ಎಪಿಎಂಸಿ ಬಳಿಯ ಈದ್ಗಾ ಮೈದಾನಕ್ಕೆ ತೆರಳಿದ ಬಾಂಧವರು, ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ವೃದ್ದರಿಂದ ಹಿಡಿದು ಚಿಕ್ಕಮಕ್ಕಳು ಕೂಡ ಭಾಗವಹಿಸಿದ್ದರು.

ಪ್ರಾರ್ಥನಾ ಸ್ಥಳದಲ್ಲಿ ಸಂಸದ ತುಕರಾಂ, ಶಾಸಕ ಭರತ್ ರೆಡ್ಡಿ ಭಾಗವಹಿಸಿ ಹಬ್ಬದ ಶುಭಾಶಯ ಕೋರಿದರು. ಹಬ್ಬದ ಹಿನ್ನೆಲೆ ಸ್ಥಳದಲ್ಲಿ ಬಿಗಿ ಪೊಲೀಸ್‌ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿತ್ತು.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ