ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ನಗರದ ಲಾವಣ್ಯ ಪದವಿ ಮತ್ತು ಪದವಿ ಪೂರ್ವ ಕಾಲೇಜಿನಲ್ಲಿ " ಶ್ರೀ ಕೃಷ್ಣಜನ್ಮಾಷ್ಠಮಿಯನ್ನು ಸಂಭ್ರಮ ಸಡಗರದಿಂದ ಆಚರಣೆ ಮಾಡಲಾಯಿತು.
ಶ್ರೀಕೃಷ್ಣ ನ ವಿಗ್ರಹ ಪ್ರತಿಷ್ಠಾಪನೆ ಮಾಡಿ ಪೂಜಾ ಕಾರ್ಯವನ್ನು ಕೈ ಗೊಳ್ಳಲಾಯಿತು. ಭಕ್ತಿ ಪೂರ್ವಕ ಕಾರ್ಯಕ್ರಮದಲ್ಲಿ ಸಂಸ್ಥೆಯ ಅದ್ಯಕ್ಷರಾದ ಯಶೋದಮ್ಮ ನವರು ಗೌರವ ಕಾರ್ಯದರ್ಶಿ ವಿಶ್ವಾಸ್ ಹನುಮಂತೇಗೌಡರು ಪದವಿ ಮತ್ತು
ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಎಂ. ಸಿ. ಮಂಜುನಾಥ್ ಬಿಎಡ್ ಪ್ರಾಂಶುಪಾಲ ಪ್ರೊ.ಜಿ. ಕೃಷ್ಣಮೂರ್ತಿ ಸೇರಿದಂತೆ ಕಾಲೇಜಿನ ಎಲ್ಲಾ ವಿಭಾಗಗಳ ಉಪನ್ಯಾಸಕರು ವಿದ್ಯಾರ್ಥಿಗಳು ಉತ್ಸಾಹದಿಂದ ಬಾಗವಹಿಸಿದ್ದರು.




