Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಾರ್ಮಿಕರ ಸಂರಕ್ಷಣಾ ವೇದಿಕೆಯಿಂದ ಬಸವ ಜಯಂತಿ ಆಚರಣೆ 

Advertisement

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ :
ಕಾರ್ಮಿಕರ ಸಂರಕ್ಷಣಾ ವೇದಿಕೆಯಿಂದ ಪ್ರವಾಸಿ ಮಂದಿರದಲ್ಲಿ ಸೋಮವಾರ ಬಸವ ಜಯಂತಿ ಆಚರಿಸಲಾಯಿತು.

ದಲಿತ ಮುಖಂಡ ಬಿ.ರಾಜಪ್ಪ ಮಾತನಾಡಿ ವಿಶ್ವಕ್ಕೆ ಸಮಾನತೆಯ ಸಂದೇಶವನ್ನು ಸಾರಿದ ಹನ್ನೆರಡನೆ ಶತಮಾನದ ಬಸವಣ್ಣನವರ ಆದರ್ಶ ತತ್ವ ಸಿದ್ದಾಂತಗಳ ಪಾಲಿಸುವವರನ್ನು ಇಂದಿನ ದಿನಮಾನಗಳಲ್ಲಿ ಹುಡುಕುವಂತ ಪರಿಸ್ಥಿತಿ ನಿರ್ಮಾಣವಾಗಿದೆ. ಜಾತಿ ಅಸಮಾನತೆಯನ್ನು ಹೋಗಲಾಡಿಸುವುದಕ್ಕಾಗಿ ಅಂತರ್ಜಾತಿ ವಿವಾಹವನ್ನು ಪ್ರೋತ್ಸಾಹಿಸುತ್ತಿದ್ದ ಬಸವಣ್ಣನವರು ಸಮ ಸಮಾಜಕ್ಕೆ ಹೋರಾಡಿದ ಕ್ರಾಂತಿಕಾರಿ. ಅಂದಿನ ಅನುಭವ ಮಂಟಪವೆ ಇಂದಿನ ಪಾರ್ಲಿಮೆಂಟ್ ಎಂದು ಬಣ್ಣಿಸಿದರು.

ಕಳೆದ ೨೫-೩೦ ವರ್ಷಗಳಿಂದಲೂ ಒಳ ಮೀಸಲಾತಿಗಾಗಿ ಹೋರಾಟ ಮಾಡಿಕೊಂಡು ಬರುತ್ತಿದ್ದೇವೆ. ಬಸವಣ್ಣನವರ ಧ್ಯೇಯಗಳನ್ನು ತಪ್ಪದೆ ಜೀವನದಲ್ಲಿ ಪಾಲಿಸಬೇಕಿದೆ. ಯಾವುದೆ ಜಾತಿ ತಾರತಮ್ಯ, ಲಿಂಗ ಬೇಧವಿಲ್ಲದೆ ಸಮಾನತೆಗಾಗಿ ಶ್ರಮಿಸಿದ ಬಸವಣ್ಣನವರನ್ನು ಕೇವಲ ಒಂದು ಜಾತಿ ಧರ್ಮಕ್ಕೆ ಮೀಸಲಿಡಬಾರದು ಎಂದು ಹೇಳಿದರು.

ಪಿ.ಕುಮಾರ್ ಮಾತನಾಡುತ್ತ ಕಾಯಕವೇ ಕೈಲಾಸ ಎನ್ನುವ ತತ್ವವನ್ನು ಇಡಿ ಮನು ಕುಲಕ್ಕೆ ಸಾರಿದ ವಿಶ್ವಗುರು ಬಸವಣ್ಣನವರು ಜಾತಿ ತಾರತಮ್ಯದ ವಿರುದ್ದ ಹೋರಾಡಿ ಮಹಾ ಮಾನವತಾವಾದಿ ಎನಿಸಿಕೊಂಡಿದ್ದಾರೆ. ಪ್ರಸ್ತುತ ಸಮಾಜಕ್ಕೆ ಬಸವಣ್ಣನವರ ತತ್ವ ಸಿದ್ದಾಂತಗಳು ಅತ್ಯವಶ್ಯಕ. ಜಯಂತಿಯನ್ನು ಆಚರಿಸುವುದರ ಜೊತೆಗೆ ಅವರ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಕೊಳ್ಳುವುದು ಉತ್ತಮ ಎಂದು ನುಡಿದರು.

ಕೆ.ರಾಜಣ್ಣ ಮಾತನಾಡಿ ಸಮಾಜದ ಪರಿವರ್ತನೆಗಾಗಿ ಹೋರಾಡಿದ ಬಸವಣ್ಣನವರು ಎಲ್ಲರ ಮನದಲ್ಲಿ ಶಾಶ್ವತವಾಗಿ ಉಳಿದಿದ್ದಾರೆ. ಅಂಬೇಡ್ಕರ್, ಬುದ್ದ, ಬಸವ ಇವರುಗಳನ್ನು ಯಾರು ಮರೆಯುವಂತಿಲ್ಲ. ಎಲ್ಲರ ಗುರಿ ಸಮಾನತೆಯಾಗಿತ್ತು. ಮೂಢನಂಬಿಕೆ, ಅಸ್ಪೃಶ್ಯತೆ, ಅಸಮಾನತೆ ವಿರುದ್ದ ಹೋರಾಡಿದ ಬಸವಣ್ಣನವರು ಹನ್ನೆರಡನೆ ಶತಮಾನದಲ್ಲಿ ಅಂತರ್ಜಾತಿ ವಿವಾಹ ಮಾಡಿಸಿ ಜಾತಿ ನಿವಾರಣೆಗಾಗಿ ಹೋರಾಡಿದ ಮಹಾನ್ ಮಾನವತಾವಾದಿ ಎಂದು ಸ್ಮರಿಸಿದರು.

೨೧ ನೇ ಶತಮಾನದಲ್ಲಿ ಬಸವಣ್ಣನವರ ತತ್ವಗಳ ಪಾಲನೆಯಾಗುತ್ತಿಲ್ಲ. ಜಾತಿ ಧರ್ಮಗಳ ನಡುವೆ ಸಂಘರ್ಷ ನಡೆಯುತ್ತಿದೆ. ಶಾಂತಿಯುತ ಸಮಾಜ ನಿರ್ಮಾಣವಾಗಬೇಕಾದರೆ ಬಸವಣ್ಣವರ ಆದರ್ಶಗಳು ಆಚರಣೆಯಲ್ಲಿರಬೇಕೆಂದರು.

ಕಾರ್ಮಿಕರ ಸಂರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ನಾಗರಾಜ್, ರಾಜ್ಯ ಕಾರ್ಯದರ್ಶಿ ಪರಮೇಶಪ್ಪ, ಚಿಕ್ಕಾಲಘಟ್ಟ ರಂಗಸ್ವಾಮಿ, ತಿಪ್ಪೇಸ್ವಾಮಿ, ಓಬಕ್ಕ, ಲಲಿತಮ್ಮ, ಮಲ್ಲಿಕಾರ್ಜುನ್ ಇನ್ನು ಅನೇಕರು ಬಸವ ಜಯಂತಿಯಲ್ಲಿ ಪಾಲ್ಗೊಂಡಿದ್ದರು.

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮಾಂಗಲ್ಯ, ಜನಿವಾರ ವಿವಾದ: ಕಾಂಗ್ರೆಸ್‌ಸರ್ಕಾರದ ವಿರುದ್ಧ ಅಶೋಕ್ ತೀವ್ರ ವಾಗ್ದಾಳಿಭಕ್ತಿಭಾವದ ಶ್ರೀ ರಾಮನವಮಿ ಆಚರಣೆ; ಆರ್. ಅಶೋಕ್ ಭಾಗಿದಾವಣಗೆರೆ ವಿಶ್ವವಿದ್ಯಾಲಯದ ಬಳಿ ಸುಸಜ್ಜಿತ ಬಸ್ ನಿಲ್ದಾಣ: ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ನವೋದ್ಯಮ ಮತ್ತು ಕೈಗಾರಿಕಾ ಕ್ರಾಂತಿಯ ನಾಯಕತ್ವ: ಕರ್ನಾಟಕದ ಕಹಳೆಬಂಗಾಳದಲ್ಲಿ ಚುನಾವಣಾ ಹಿಂಸಾಚಾರ: ಬಿಜೆಪಿ ಅಭ್ಯರ್ಥಿಯ ಮೇಲೆ ಹಲ್ಲೆ;- ಸಿ.ಟಿ. ರವಿ ಆಕ್ರೋಶ"ಗ್ಯಾರಂಟಿ ಬೇಡ, ಜೀವಕ್ಕೆ ಗ್ಯಾರಂಟಿ ಕೊಡಿ": ನಿಖಿಲ್ ಕುಮಾರಸ್ವಾಮಿ ಆಗ್ರಹಶರಾವತಿ ಯೋಜನೆಗೆ ಕೇಂದ್ರದ ಅಸಹಕಾರ: ಸಿದ್ದರಾಮಯ್ಯ ತೀವ್ರ ಅಸಮಾಧಾನಗ್ರಾಮ ಪಂಚಾಯತ್ ಅನುದಾನ ಬಿಡುಗಡೆಗೆ ತಾರತಮ್ಯ: ಕೇಂದ್ರದ ವಿರುದ್ಧ ಸಿಎಂ ಆಕ್ರೋಶಕೇಂದ್ರದ ವಿರುದ್ಧ ಸಿದ್ದರಾಮಯ್ಯ ಆಕ್ರೋಶ: "ಕರ್ನಾಟಕಕ್ಕೆ ಸಿಗದ ಮೂಲಸೌಕರ್ಯ ನ್ಯಾಯ"ಬೆಂಗಳೂರು ಕೃಷಿ ತಂತ್ರಜ್ಞಾನದ ರಾಜಧಾನಿಯಾಗಲಿ: ಸಿಎಂ ಸಿದ್ದರಾಮಯ್ಯ ಆಶಯ