Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜಾತಿಗಣತಿ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಅಭಿವೃದ್ಧಿಗೆ ಜನಗಣತಿ ಪೂರಕ - ರವಿಕುಮಾರ್ 

Advertisement
ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ದೇಶದಲ್ಲಿನ ಪ್ರತಿ ಸಮುದಾಯಗಳ  ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಅಭಿವೃದ್ಧಿಗೆ ಸಂಬಂಧಿಸಿದಂತೆ ವಾಸ್ತವಿಕ ದತ್ತಾಂಶ ಪಡೆಯುವ ನಿಟ್ಟಿನಲ್ಲಿ  ಪ್ರಧಾನಿ ನರೇಂದ್ರ ಮೋದಿ ನೇತೃತ್ವದ  ಕೇಂದ್ರ ಸರ್ಕಾರ ಜಾತಿಗಣತಿ ಮಾಡುವ ಐತಿಹಾಸಿಕ ನಿಲುವನ್ನು ಕೈಗೊಂಡಿದೆ  ಎಂದು ವಿಧಾನಪರಿಷತ್ ಸದಸ್ಯ ರವಿಕುಮಾರ್ ತಿಳಿಸಿದರು.

ನಗರದ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಶನಿವಾರ ಹಮ್ಮಿಕೊಂಡಿದ್ದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಜಾತಿ ಗಣತಿ ಕುರಿತು ಕೇಂದ್ರ ಸರ್ಕಾರ ಸಮೀಕ್ಷೆ ನಡೆಸುವ  ನಿರ್ಧಾರ ಕೈಗೊಂಡಿದೆ,1931ರಲ್ಲಿ ಬ್ರಿಟಿಷ್ ಸರ್ಕಾರ ಈ ಜಾತಿಗಣತಿ ಕಾರ್ಯಕ್ರಮವನ್ನು ಕೈಗೊಂಡಿತ್ತು.  ಆದರೆ ಸ್ವಾತಂತ್ರ್ಯ ನಂತರ ಯಾವುದೇ ಜಾತಿಗಣತಿ  ನೆಡೆದಿಲ್ಲ. ಈ ಕುರಿತಂತೆ ಕೇಂದ್ರ ಸರ್ಕಾರ ಸಾಕಷ್ಟು ಚಿಂತನೆ ನಡೆಸಿ ಜಾತಿಗಣತಿ ಮಾಡುವ ಐತಿಹಾಸಿಕ ನಿರ್ಧಾರ ಕೈಗೊಂಡಿದೆ. 140 ಕೋಟಿಗೂ ಅಧಿಕ ಜನಸಂಖ್ಯೆ ಹೊಂದಿರುವ ನಮ್ಮ ದೇಶದಲ್ಲಿ ಎಲ್ಲಾ ಕ್ಷೇತ್ರಗಳಲ್ಲಿ ಪ್ರತಿ  ಸಮುದಾಯಗಳ ಅಭಿವೃದ್ಧಿ ತಿಳಿಯುವ  ನಿಟ್ಟಿನಲ್ಲಿ ಈ ಸಮೀಕ್ಷೆ ನೆಡೆಯಲಿದೆ ಎಂದರು.

 ಕಾಂಗ್ರೆಸ್ ನವರು ಏಕೆ ಮಾಡಲಿಲ್ಲ.?
ಕಳೆದ 75 ವರ್ಷಗಳಲ್ಲಿ ಕಾಂಗ್ರೆಸ್ ಅಧಿಕಾರ ವಹಿಸಿದ್ದ ಸಂದರ್ಭದಲ್ಲಿ ಏಕೆ ಜಾತಿಗಣತಿ ಮಾಡಲಿಲ್ಲ. 2011 ರಲ್ಲಿ ಪ್ರಧಾನಿ ಮನಮೋಹನ್ ಸಿಂಗ್ ಅಧಿಕಾರದ ಅವಧಿಯಲ್ಲಿ ಮಾಡಿದ ಸಮೀಕ್ಷೆ ವರದಿ ಅಪೂರ್ಣ ಎಂದು ಮುನ್ನಲೆಗೆ ತರಲೆ ಇಲ್ಲ. ಇಂದು ಕೇಂದ್ರ ಸರ್ಕಾರ ಕೈಗೊಂಡಿರುವ ನಿರ್ಧಾರವನ್ನು ಕಾಂಗ್ರೆಸ್ ಪ್ರಮುಖರು ಪ್ರಶ್ನೆ ಮಾಡುತ್ತಿದ್ದಾರೆ.   ಪ್ರತಿ ಸಮುದಾಯಕ್ಕೂ ನ್ಯಾಯ ಕೊಡಿಸುವ ಸಲುವಾಗಿ ಈ ಜಾತಿಗಣತಿ ಸಮೀಕ್ಷೆ ನೆಡೆಯಲಿದೆ ಈ ಕಾರ್ಯಕ್ಕೆ ಕಾಂಗ್ರೆಸ್ ಬೆಂಬಲಿಸಿದರೆ ಸ್ವಾಗತಿಸುತ್ತೇವೆ ಎಂದರು .

 ಪಕ್ಷದ ಮುಖಂಡರಾದ ಲಕ್ಷ್ಮಿನಾರಾಯಣ, ರಾಜ್ಯ ಕಾರ್ಯದರ್ಶಿ ನಿಚ್ಚಿತಎಸ್.ಸಿ ಮೋರ್ಚಾ ಅಧ್ಯಮ್ಷ ಬುಳ್ಳಳ್ಳಿ ರಾಜಪ್ಪ, ಜಿಲ್ಲಾಧ್ಯಕ್ಷ ರಾಮಕೃಷ್ಣಪ್ಪ ಮತ್ತಿತ್ತರರು ಇದ್ದರು.
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ