Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬೆಂಗಳೂರು-ಪುಣೆ ಗ್ರೀನ್‌ ಹೈವೇಗೆ ಕೇಂದ್ರದ ಒಪ್ಪಿಗೆ?

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬೆಂಗಳೂರು ಸೇರಿದಂತೆ ದೇಶದ ಹಲವು ನಗರಗಳ ಬಹುಜನರ ಬಹುದೊಡ್ಡ ಬೇಡಿಕೆಗೆ ಕೇಂದ್ರ ಸರ್ಕಾರ ಒಪ್ಪಿಗೆ ನೀಡುವ ಸಾಧ್ಯತೆ ಇದೆ.


ಬೆಂಗಳೂರು-ಪುಣೆ ಹಸಿರು ರಾಷ್ಟ್ರೀಯ ಹೆದ್ದಾರಿ (ಗ್ರೀನ್‌ಫೀಲ್ಡ್ ಎಕ್ಸ್‌ಪ್ರೆಸ್‌)ಗೆ ಕೇಂದ್ರ ಸರ್ಕಾರ ಒಪ್ಪಿಗೆ ನೀಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
2026ರಲ್ಲಿ ಕೇಂದ್ರ ಸಚಿವ ಸಂಪುಟವು ಈ ಯೋಜನೆಗೆ ಅನುಮೋದನೆ ನೀಡುವ ಸಾಧ್ಯತೆ ಇದೆ ಎಂದು ಮೂಲಗಳು ಹೇಳಿದೆ.


2023ರಲ್ಲಿ ಈ ಯೋಜನೆಗೆ ಅನುಮೋದನೆ ನೀಡಬೇಕಿತ್ತು. ಪುಣೆ-ಬೆಂಗಳೂರು NH48 ನಲ್ಲಿನ ದೀರ್ಘಕಾಲದ ದಟ್ಟಣೆ ಇದು ಬಹುದೊಡ್ಡ ಪರಿಹಾರವಾಗಲಿದೆ. ಇನ್ನು ಈ ಯೋಜನೆಗಾಗಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಹಲವು ಭಾರೀ ಚರ್ಚೆ ನಡೆಸಿದ್ದಾರೆ ಎಂದು ಹೇಳಲಾಗಿದೆ. ಆದರೆ ಯೋಜನೆಗೆ ಕೇಂದ್ರದಿಂದ ಅಂತಿಮ ಅನುಮತಿ ಇನ್ನೂ ಸಿಕ್ಕಿಲ್ಲ. ಸಚಿವ ಸಂಪುಟದ ಅನುಮೋದನೆ ನಂತರವೇ ಭೂಸ್ವಾಧೀನ ಪ್ರಕ್ರಿಯೆ ಪ್ರಾರಂಭವಾಗಬಹುದು ಎಂದು ಸಂಬಂಧಪಟ್ಟ ಅಧಿಕಾರಿಗಳು ಹೇಳಿದ್ದಾರೆ ಎನ್ನಲಾಗಿದೆ.


ಈ ಯೋಜನೆಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದ್ದೇ ಆದರೆ ಗ್ರೀನ್ ಹೈ ರಸ್ತೆಯ ಕಾರ್ಯಯೋಜನೆಯ ಪ್ರಕ್ರಿಯೆಗಾಗಿ ಸುಮಾರು ಎರಡು ವರ್ಷಗಳನ್ನು ತೆಗೆದುಕೊಳ್ಳುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.


ಪುಣೆ-ಬೆಂಗಳೂರು ಸಂಪರ್ಕಿಸುವ NH4(48)ನಲ್ಲಿ ಭಾರಿ ಸಂಚಾರ ಹೊರೆ ಇರುವುದರಿಂದ ಪ್ರಸ್ತಾವಿತ ಗ್ರೀನ್ ಕಾರಿಡಾರ್ ಬೇಕು ಎಂದು ಪರಿಗಣಿಸಲಾಗಿದೆ. ಹೆದ್ದಾರಿಯಲ್ಲಿ ನಿರಂತರ ನಿರ್ಮಾಣ ಕಾರ್ಯವು ಸಂಚಾರವನ್ನು ಮತ್ತಷ್ಟು ನಿಧಾನಗೊಳಿಸಿದೆ. ಪ್ರಯಾಣಿಕರು ಮತ್ತು ಸರಕು ಸಾಗಣೆದಾರರಿಗೆ ಪ್ರಯಾಣದ ಸಮಯವನ್ನು ಹೆಚ್ಚಿಸಿದೆ.

700 ಕಿ.ಮೀ ಉದ್ದದ, ಆರು ಪಥಗಳ ಗ್ರೀನ್‌ಫೀಲ್ಡ್ ಎಕ್ಸ್‌ಪ್ರೆಸ್‌ವೇ ನಿರ್ಮಾಣ ಮಾಡಿದ ನಂತರ ಪ್ರಯಾಣದ ಸಮಯ ಕಡಿಮೆ ಆಗುತ್ತದೆ. ಇದರಿಂದಾಗಿ ವಾಹನ ಚಾಲಕರು ಪುಣೆ ಹೊರ ವರ್ತುಲ ರಸ್ತೆಯಿಂದ ಬೆಂಗಳೂರಿನ ಸ್ಯಾಟಲೈಟ್ ಟೌನ್ ರಿಂಗ್ ರಸ್ತೆ (ಎಸ್ ಟಿಆರ್ಆರ್) ಅನ್ನು ಕೇವಲ ಏಳು ಗಂಟೆಗಳಲ್ಲಿ ತಲುಪಬಹುದು.


ಕೇಂದ್ರ ಸಚಿವ ಸಂಪುಟದ ಅನುಮೋದನೆ ದೊರೆತರೆ ಈ ಯೋಜನೆ ತಕ್ಷಣದಿಂದ ಆರಂಭವಾಗುತ್ತದೆ. ಭೂಸ್ವಾಧೀನ, ರಸ್ತೆ ಜೋಡಣೆ, ಅಡಿಪಾಯ ಹಾಕುವ ಕೆಲಸಗಳು ನಡೆಯಲಿದೆ. ಕೆಲವೇ ವರ್ಷಗಳಲ್ಲಿ ಈ ರಸ್ತೆ ನಿರ್ಮಾಣವಾಗಲಿದೆ.

ಮಹಾರಾಷ್ಟ್ರ ಮತ್ತು ಕರ್ನಾಟಕಕ್ಕೆ ಇದೊಂದು ಮಹತ್ವದ ಯೋಜನೆ ಆಗಿದೆ. ಇದರಿಂದ ಪುಣೆ-ಬೆಂಗಳೂರು ಕಾರಿಡಾರ್​​ನಿಂದ ನಿವಾಸಿಗಳು ಮತ್ತು ರಸ್ತೆ ಬಳಕೆದಾರರಿಗೆ ಇದು ಹೆಚ್ಚು ಸಹಾಯವಾಗಲಿದೆ.
2026 ರಲ್ಲಿ ನಿರೀಕ್ಷೆಯಂತೆ ಅನುಮೋದನೆ ದೊರೆತರೆ, ದೀರ್ಘಕಾಲದಿಂದ ವಿಳಂಬವಾಗಿದ್ದ ಪುಣೆ-ಬೆಂಗಳೂರು ಗ್ರೀನ್‌ಫೀಲ್ಡ್ ಎಕ್ಸ್‌ಪ್ರೆಸ್‌ವೇ ಕಾರ್ಯನಿರ್ವಹಿಸಲಿದೆ.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ