Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಂಡೂರು ಕ್ಷೇತ್ರದಲ್ಲಿ ಚಳ್ಳಕೆರೆ ಕ್ಷೇತ್ರದ ಶಾಸಕ ರಘುಮೂರ್ತಿ ಬಿರುಸಿನ ಪ್ರಚಾರ

Advertisement
ಚಂದ್ರವಳ್ಳಿ ನ್ಯೂಸ್, ಸಂಡೂರು:
ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆಯಾಗಿದ್ದು
, ಈಗಾಗಲೇ ಅಭ್ಯರ್ಥಿಗಳು ಪ್ರಚಾರದಲ್ಲಿ ತೊಡಗಿದ್ದಾರೆ. ಸಂಡೂರು ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಅನ್ನಪೂರ್ಣತುಕಾರಾಂ ವಿಜಯ ಸಾಧಿಸುವ ವಿಶ್ವಾಸವನ್ನು  ಕ್ಷೇತ್ರದ ಶಾಸಕ, ಸಣ್ಣಕೈಗಾರಿಕೆ ಅಭಿವೃದ್ದಿಮಂಡಳಿ ಅಧ್ಯಕ್ಷ ಟಿ.ರಘುಮೂರ್ತಿ ವ್ಯಕ್ತಪಡಿಸಿದರು.

ಅವರು, ಮಂಗಳವಾರ ಸಂಡೂರು ವಿಧಾನಸಭಾ ಕ್ಷೇತ್ರದ ಬೊಮ್ಮಘಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾತಾಸನಹಳ್ಳಿ ಗ್ರಾಮದಲ್ಲಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ಪ್ರಚಾರ ಕಾರ್ಯದಲ್ಲಿ ತೊಡಗಿದ್ದು, ಕೆಪಿಸಿಸಿ ನಿರ್ದೇಶನದಂತೆ ಸಂಡೂರು ವಿಧಾನಸಭಾ ಕ್ಷೇತ್ರದಲ್ಲಿ ಅಭ್ಯರ್ಥಿಪರ ಪ್ರಚಾರ ಕೈಗೊಳ್ಳಲಾಗಿದೆ ಎಂದು ತಿಳಿಸಿದರಲ್ಲದೆ, ಸಂಡೂರು ವಿಧಾನಸಭಾ ಕ್ಷೇತ್ರ ಯಾವಾಗಲೂ ಕಾಂಗ್ರೆಸ್ ಪಕ್ಷದ ಭದ್ರಕೋಟೆಯಾಗಿದೆ ಎಂದರು.

ಈ ಭಾಗದಲ್ಲಿ ಪ್ರಚಾರ ಕಾರ್ಯಕ್ಕೆ ಆಗಮಿಸಿದ ಸಂದರ್ಭದಲ್ಲಿ ನೂರಾರು ಪಕ್ಷದ ಕಾರ್ಯಕರ್ತರು, ಮುಖಂಡರು, ಅಭಿಮಾನಿಗಳು ಸ್ವಯಂ ಪ್ರೇರಣೆಯಿಂದ ಪ್ರಚಾರ ಕಾರ್ಯದಲ್ಲಿ ನನ್ನೊಂದಿಗೆ ಇದ್ದಾರೆ. ಪ್ರತಿಹಳ್ಳಿಯಲ್ಲೂ ಮತದಾರರು ಕಾಂಗ್ರೆಸ್ ಪಕ್ಷದ ಪರವಾಗಿ ಮತಚಲಾವಣೆ ಮಾಡುವರು ಎಂಬ ವಿಶ್ವಾಸ ದಿನದಿಂದ ದಿನಕ್ಕೆ ಗಟ್ಟಿಯಾಗುತ್ತಿದೆ.

ಈ ಕ್ಷೇತ್ರದ ಶಾಸಕರಾಗಿ, ಸಂಸದರಾಗಿ ಮಾಜಿ ಸಚಿವರಾಗಿ ಕಾರ್ಯನಿರ್ವಹಿಸಿದ ತುಕಾರಂರವರ ಪತ್ನಿ ಅನ್ನಪೂರ್ಣತುಕಾರಂ ಈ ಭಾಗದ ಜನರಿಗೆ ಚಿರಪರಿಚಿತರಾಗಿದ್ಧಾರೆ. ಯಾವುದೇ ಗ್ರಾಮಕ್ಕೆ ಹೋದರೂ ಅವರ ಹೆಸರನ್ನು ಮತದಾರರೇ ಹೇಳುತ್ತಾರೆ. ಇಲ್ಲಿನ ಸ್ಥಿತಿ ಕಾಂಗ್ರೆಸ್ ಪಕ್ಷದ ಪರವಾಗಿದೆ ಎಂದರು.

 ಕಳೆದ ಮೂರು ದಿನಗಳಿಂದ ಕೆಪಿಸಿಸಿ ನಿರ್ದೇಶನದ ಮೇರೆಗೆ ಈ ಭಾಗದಲ್ಲಿ ಪ್ರಚಾರ ಕಾರ್ಯದಲ್ಲಿ ತೊಡಗಿರುವೆ. ಚುನಾವಣೆ ನಡೆಯಲು ಇನ್ನೂ ಏಳು ದಿನಗಳು ಬಾಕಿ ಇದ್ದು, ಪಕ್ಷ ಸೂಚಿಸಿದ ಕಡೆಹೋಗಿ ಪ್ರಚಾರ ಮಾಡುವೆ. ಈಗಾಗಲೇ ಕೆಪಿಸಿಸಿ ರಾಜ್ಯಾಧ್ಯಕ್ಷ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಂಡೂರು ಉಪಚುನಾವಣೆ ಗೆಲುವಿನ ಬಗ್ಗೆ ಸಾಕಷ್ಟು ಮಾರ್ಗದರ್ಶನ ನೀಡಿದ್ದು, ಅದನ್ನು ಪ್ರಚಾರ ಕಾರ್ಯದಲ್ಲಿ ಬಳಸಿಕೊಳ್ಳುವೆ ಎಂದರು.
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ