ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಚಳ್ಳಕೆರೆ ತಾಲ್ಲೂಕು ಮಟ್ಟದ ಯುವ ಸಂಸತ್ತು ಸಭೆಯನ್ನು ಇದೇ ಅಕ್ಟೋಬರ್ 14ರಂದು ಬೆಳಿಗ್ಗೆ 10.30ಕ್ಕೆ ಚಳ್ಳಕೆರೆ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ.
ಕಾರ್ಯಕ್ರಮದಲ್ಲಿ ಚಳ್ಳಕೆರೆ ತಹಶೀಲ್ದಾರ್, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರು, ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಚಳ್ಳಕೆರೆ ತಾಲ್ಲೂಕಿನ ಪದವಿಪೂರ್ವ ಹಾಗೂ ಪದವಿ ಕಾಲೇಜುಗಳ ಪ್ರಾಂಶುಪಾಲರು ಭಾಗವಹಿಸಲಿದ್ದಾರೆ ಎಂದು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರು ಗ್ರೇಡ್-1 ತಿಳಿಸಿದ್ದಾರೆ.



