Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Feature Article

ಕೆಪಿಸಿಸಿ ನೀತಿ ಸಂಶೋಧನೆ ಮತ್ತು ತರಬೇತಿ ವಿಭಾಗಕ್ಕೆ ಚಂದ್ರಪ್ಪ ಎಂ ಮಿಡ್ಲುಮುನಿ ನೇಮಕ

ಚಂದ್ರವಳ್ಳಿ ನ್ಯೂಸ್, ಆನೇಕಲ್:
ಆನೇಕಲ್ ತಾಲೂಕಿನ ಮಾಯಸಂದ್ರ ಗ್ರಾಮದ ನಿವಾಸಿ ಮಿಡ್ಲುಮುನಿಯಪ್ಪ ಮತ್ತು ಶ್ರೀಮತಿ ಕಾವೇರಮ್ಮ ದಂಪತಿ ಪುತ್ರರಾದ ಶ್ರೀ ಚಂದ್ರಪ್ಪ ಎಂ ಮಿಡ್ಲುಮುನಿ ಅವರು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ನೀತಿ, ಸಂಶೋಧನೆ ಹಾಗೂ ತರಬೇತಿ ವಿಭಾಗಕ್ಕೆ ಅನೇಕಲ್ ವಿಧಾನಸಭಾ ಕ್ಷೇತ್ರದ ಅಧ್ಯಕ್ಷರನ್ನಾಗಿ ಶ್ರೀ ಚಂದ್ರಪ್ಪ ಎಂ ಮಿಡ್ಲುಮುನಿ ರವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ನೇಮಕ ಮಾಡಲಾಗಿದೆ.

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ರವರ ಆದೇಶಾನುಸಾರ ಮೇಲಿನ ತಿರ್ಮಾನವನ್ನು ಕೈಗೊಳ್ಳಲಾಗಿದೆ. ತಾವು ತಮಗೆ ನೀಡಿರುವ ಜವಾಬ್ದಾರಿಯನ್ನು ವಹಿಸಿಕೊಂಡು ಕೆಪಿಸಿಸಿಯ ಮಾರ್ಗದರ್ಶನದಲ್ಲಿ ರಾಜ್ಯ ಮತ್ತು ಸ್ಥಳಿಯ ನಾಯಕರ ಸಹಕಾರದೊಂದಿಗೆ ನೀತಿ, ಸಂಶೋಧನೆ ಹಾಗೂ ತರಬೇತಿ ವಿಭಾಗದ ಸಂಘಟನೆ ಬಲಪಡಿಸಲು, ಆ ಮೂಲಕ ಪಕ್ಷದ ಬಲವರ್ಧನೆಯಲ್ಲಿ ಕಾರ್ಯೋನ್ಮುಖರಾಗಬೇಕೆಂದು ಸೂಚಿಸಿದೆಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ನೀತಿ, ಸಂಶೋಧನೆ ಹಾಗೂ ತರಬೇತಿ ವಿಭಾಗದ ಅಧ್ಯಕ್ಷರು ಹಾಗೂ ಮುಖ್ಯ ವಕ್ತಾರರಾದ ಶ್ರೀ ರಘು ದೊಡ್ಡೇರಿ ರವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

ಚಂದ್ರಪ್ಪ ಎಂ ಮಿಡ್ಲುಮುನಿ ಅವರು ಈಗಾಗಲೇ ಬೆಂಗಳೂರು ವಿಶ್ವವಿದ್ಯಾಲಯ ಗ್ರಾಮೀಣಾಭಿವೃದ್ಧಿ ವಿಭಾಗದಲ್ಲಿ ಸಂಶೋಧನಾ ವಿದ್ಯಾರ್ಥಿಯಾಗಿ ಅಧ್ಯಯನ ಮಾಡುತ್ತಿದ್ದು, ಬೆಂಗಳೂರು ವಿಶ್ವವಿದ್ಯಾಲಯ ಸ್ನಾತಕೋತ್ತರ ಮತ್ತು ಸಂಶೋಧನಾ ವಿದ್ಯಾರ್ಥಿ ಒಕ್ಕೂಟದ ಮಂಚೂಣಿ ನಾಯಕರಾಗಿ, ಪ್ರಸ್ತುತ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ಅಂಗ ಸಂಸ್ಥೆ ದಲಿತ ವಿದ್ಯಾರ್ಥಿ ಒಕ್ಕೂಟದ ರಾಜ್ಯ ಪ್ರಧಾನ ಸಂಚಾಲಕರಾಗಿ, ಕರ್ನಾಟಕ ಶೋಷಿತ ಒಕ್ಕೂಟದ ಸಕ್ರಿಯ ಕಾರ್ಯಕರ್ತರಾಗಿ, ಹಲವಾರು ವಿದ್ಯಾರ್ಥಿ ಸಂಘಟನೆಗಳಲ್ಲಿ ಸೇವೆ ಸಲ್ಲಿಸುತ್ತಾ ಮತ್ತು ಸಂಶೋಧನಾ ಕ್ಷೇತ್ರದಲ್ಲಿ ತಮ್ಮದೇ ಆದ ಹಲವಾರು ವಿಭಿನ್ನ ರೀತಿಯ ಕೊಡುಗೆಗಳಲ್ಲಿ ಸಂಶೋಧಕರಾಗಿ ಗುರುತಿಸಿಕೊಂಡಿದ್ದಾರೆ.

ಸಂತಸ ವ್ಯಕ್ತಪಡಿಸಿರುವ ಚಂದ್ರಪ್ಪ ಎಂ ಮಿಡ್ಲುಮುನಿ ಅವರು ಈ ಮಹತ್ತರ ಅವಕಾಶವನ್ನು ತಮಗೆ ಪಕ್ಷ ವಹಿಸಿರುವ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸುತ್ತಾ, ಪಕ್ಷದ ಆದರ್ಶಗಳನ್ನು ಕಾಪಾಡಿ, ಜನಪರ ರಾಜಕೀಯ, ಸಂಘಟನೆಯನ್ನು ಬಲಪಡಿಸುವ ಚಟುವಟಿಕೆಗಳನ್ನು ಮುಂದುವರೆಸಲು ನಾನು ಬದ್ಧನಾಗಿದ್ದೇನೆ. ಇದೇ ಸಂದರ್ಭದಲ್ಲಿ ಕೆಪಿಸಿಸಿ ಅಧ್ಯಕ್ಷರಿಗೆ, ಆನೇಕಲ್ ಕ್ಷೇತ್ರದ ಜನಪ್ರಿಯ ಶಾಸಕರಾದ ಶ್ರೀ ಬಿ. ಶಿವಣ್ಣ ರವರಿಗೆ, ವಿಭಾಗದ ಅಧ್ಯಕ್ಷರಾದ  ರಘು ದೊಡ್ಡೇರಿ ರವರಿಗೆ ಮತ್ತು ಹಿರಿಯರಿಗೆ ಮತ್ತಿತರ ಮುಖಂಡರಿಗೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದಿದ್ದಾರೆ. 

ಇದೇ ವೇಳೆ ಆನೇಕಲ್ ತಾಲೂಕಿನ ಕಾಂಗ್ರೆಸ್ ಕಾರ್ಯಕರ್ತರು, ಹಿತೈಷಿಗಳು, ಕುಟುಂಬ ವರ್ಗದವರು, ಸ್ನೇಹಿತರು ಶುಭ ಕೋರಿ, ಈ ದಿಸೆಯಲ್ಲಿ ತಮಗೆ ಹೆಚ್ಚಿನ ಯಶಸ್ಸು ಸಿಗಲೆಂದು ಅಭಿನಂದನೆ ಸಲ್ಲಿಸಿದ್ದಾರೆ.

 

 

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಸಾಪ ಮಾಜಿ ಜಿಲ್ಲಾಧ್ಯಕ್ಷ, ಶಿಕ್ಷಣತಜ್ಞ ಡಾ. ಕೆ.ಎಂ. ವೀರೇಶ್ ಹೃದಯಾಘಾತದಿಂದ ನಿಧನದುರ್ಗಕ್ಕೆ ಹರಿದು ಬಂದ ಭದ್ರೆ- ಸೆ.24ರಂದು ಮುಖ್ಯಮಂತ್ರಿಗಳಿಂದ ಗಂಗಾಪೂಜೆ,  ಬೃಹತ್ ಸಾರ್ವಜನಿಕ ಸಮಾರಂಭಆರ್.ಎಲ್ ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ 22ನೇ ಘಟಿಕೋತ್ಸವ ಮತ್ತು ಪದವಿ ಪ್ರದಾನ ಕಾರ್ಯಕ್ರಮನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಬೈಕ್ ಸವಾರ ಸಾವುಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಸಭೆ ಹೋರಾಟಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಾತಿನಿಧ್ಯ ಕಡಿಮೆ- ಚಿಕ್ಕಪ್ಪನಹಳ್ಳಿ ಷಣ್ಮುಖಕುಂಚಿಟಿಗ ನೌಕರರ ಸಂಘಕ್ಕೆ ಸದಸ್ಯರಾಗಿ: ಎಸ್.ಕೆ ಲಕ್ಷ್ಮಣ್ಚಳವಳಿ ನೆನಪಾಗಿ ಉಳಿದ ‘ತೆಂಕ-ಬಡಗ’ಅಂತಾರಾಷ್ಟ್ರೀಯ ಶಾಂತಿ ದಿನ – ಮನದ ದ್ವೇಷ ಕರಗಿದಾಗಲೇ ಜಗದ ಶಾಂತಿ ಅರಳುವುದು!ಗಣಪತಿ ಮೆರವಣಿಗೆ ವೇಳೆ ಗಲಾಟೆ 7 ಯುವಕರ ವಿರುದ್ಧ ಸುಮೋಟೋ ಪ್ರಕರಣ ದಾಖಲು