ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ನಗರದ ಭೂಪಸಂದ್ರದಲ್ಲಿರುವ ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಆವರಣದಲ್ಲಿ ನೂತನವಾಗಿ ನಿರ್ಮಾಣಗೊಳ್ಳಲಿರುವ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ಕಾಮಗಾರಿಗೆ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರು ಇಂದು ಶಂಕುಸ್ಥಾಪನೆ ನೆರವೇರಿಸಿದರು.
ಈ ಸಂದರ್ಭದಲ್ಲಿ ವಿಧಾನಸಭೆಯ ಸಭಾಪತಿ ಯು.ಟಿ. ಖಾದರ್, ಸಚಿವರಾದ ಕೆ.ಹೆಚ್. ಮುನಿಯಪ್ಪ, ಬೈರತಿ ಸುರೇಶ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎ.ಎಸ್. ಪೊನ್ನಣ್ಣ, ಮಾಜಿ ಸಚಿವ ಹಾಗೂ ಶಾಸಕ ದಿನೇಶ್ ಗುಂಡೂರಾವ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.




