ಚಂದ್ರವಳ್ಳಿ ನ್ಯೂಸ್, ಮಂಗಳೂರು:
ಪ್ರಕೃತಿಯ ಹಚ್ಚ ಹಸಿರಿನ ಮಡಿಲಲ್ಲಿ ಕಂಗೊಳಿಸುವ ಹಾಗೂ ಐತಿಹಾಸಿಕ ದೇವಾಲಯಗಳ ಬೀಡಾದ ಕರಾವಳಿಯ ಪುಣ್ಯಕ್ಷೇತ್ರ ಕದ್ರಿ ಶ್ರೀ ಮಂಜುನಾಥ ಸ್ವಾಮಿಯ ಸನ್ನಿಧಿಗೆ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರು ಇಂದು ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿ ದೇವಸ್ಥಾನದ ದರ್ಶನ ಪಡೆದರು.
ಸಚಿವ ಸಂಪುಟದ ತಮ್ಮ ಸಹೋದ್ಯೋಗಿಗಳೊಂದಿಗೆ ದೇವಾಲಯಕ್ಕೆ ಆಗಮಿಸಿದ ಅವರು, ಸ್ವಾಮಿಯ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ನಾಡಿನಲ್ಲಿ ಸುಖ, ಶಾಂತಿ, ಸುಭಿಕ್ಷೆ ನೆಲೆಸಲಿ ಹಾಗೂ ಉತ್ತಮ ಮಳೆ-ಬೆಳೆಯಾಗಿ ಸಮೃದ್ಧಿ ಉಂಟಾಗಲಿ ಎಂದು ಪ್ರಾರ್ಥಿಸಿದರು. ದೇವಾಲಯದ ಆಡಳಿತ ಮಂಡಳಿ ಹಾಗೂ ಅರ್ಚಕರು ಮುಖ್ಯಮಂತ್ರಿಗಳನ್ನು ಆತ್ಮೀಯವಾಗಿ ಗೌರವಿಸಿದರು.




