ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಭಾರತೀಯ ವಾಯುಪಡೆಯ ಟ್ರೇನಿಂಗ್ ಕಮಾಂಡ್‌ನ ಏರ್ ಆಫೀಸರ್ ಕಮಾಂಡಿಂಗ್-ಇನ್-ಚೀಫ್ ಏರ್ ಮಾರ್ಷಲ್ ಎಸ್. ಶ್ರೀನಿವಾಸ್ ಅವರು ಇಂದು ತಮ್ಮ ನಿಯೋಗದೊಂದಿಗೆ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾಗಿ ಸೌಹಾರ್ದಯುತ ಮಾತುಕತೆ ನಡೆಸಿದರು.
ಈ ಮಹತ್ವದ ಭೇಟಿಯ ಸಂದರ್ಭದಲ್ಲಿ ಮುಖ್ಯಮಂತ್ರಿಯವರ ಆರ್ಥಿಕ ಸಲಹೆಗಾರರಾದ ಎಲ್. ಕೆ. ಅತೀಕ್, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತಾ, ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ಹಾಗೂ ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಸೀಮಂತ್ ಕುಮಾರ್ ಸಿಂಗ್ ಸೇರಿದಂತೆ ಹಲವು ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.



