ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬೆಂಗಳೂರು ಮಹಾನಗರ ಪ್ರದೇಶದ ಆರ್ಥಿಕ ಅಭಿವೃದ್ಧಿ ಯೋಜನೆಗೆ ಸಂಬಂಧಿಸಿದಂತೆ ಸ್ಟ್ರಾಟೆಜಿಕ್ ಹಿರಿಯ ಸಲಹಾ ಗುಂಪಿನ ಪ್ರಮುಖ ಸಭೆಯು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
ಈ ಸಭೆಯಲ್ಲಿ ಬೆಂಗಳೂರು ಮಹಾನಗರ ಪ್ರದೇಶದ ಸುಸ್ಥಿರ ಆರ್ಥಿಕ ಪ್ರಗತಿ, ಮೂಲಸೌಕರ್ಯಗಳ ವೃದ್ಧಿ ಹಾಗೂ ದೀರ್ಘಕಾಲಿನ ಅಭಿವೃದ್ಧಿಗೆ ಅಗತ್ಯವಿರುವ ಪ್ರಮುಖ ಆದ್ಯತೆಗಳ ಕುರಿತು ವಿಸ್ತೃತವಾಗಿ ಚರ್ಚಿಸಲಾಯಿತು.
ಸಭೆಯಲ್ಲಿ ಸಚಿವರಾದ ಎಂ.ಬಿ. ಪಾಟೀಲ್, ಕೃಷ್ಣ ಬೈರೇಗೌಡ, ಪ್ರಿಯಾಂಕ್ ಖರ್ಗೆ, ಬೈರತಿ ಸುರೇಶ್, ಸಂಸದರಾದ ಜಿ.ಸಿ. ಚಂದ್ರಶೇಖರ್ ಸೇರಿದಂತೆ ಸರ್ಕಾರದ ಹಿರಿಯ ಅಧಿಕಾರಿಗಳು ಹಾಗೂ ಕೈಗಾರಿಕಾ ಕ್ಷೇತ್ರದ ಪ್ರಮುಖ ಮುಖಂಡರು ಭಾಗವಹಿಸಿದ್ದರು.




