ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕನಕಪುರದ ವಕೀಲರ ಸಂಘದ ಪ್ರತಿನಿಧಿಗಳ ನಿಯೋಗವು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿ ವಿವಿಧ ವಿಷಯಗಳ ಕುರಿತು ಸಮಾಲೋಚನೆ ನಡೆಸಿತು.
ತಮ್ಮ ಕ್ಷೇತ್ರ ಹಾಗೂ ವಕೀಲ ಸಮುದಾಯದ ಪ್ರಮುಖ ಕುಂದುಕೊರತೆಗಳು, ವಕೀಲರ ಹಿತರಕ್ಷಣೆ ಮತ್ತು ಮೂಲಸೌಕರ್ಯಗಳಿಗೆ ಸಂಬಂಧಿಸಿದ ವಿಷಯಗಳ ಬಗ್ಗೆ ವಕೀಲರ ನಿಯೋಗವು ಸಿಎಂ ಅವರೊಂದಿಗೆ ಸುದೀರ್ಘವಾಗಿ ಚರ್ಚಿಸಿತು. ನಿಯೋಗದ ಕುಂದುಕೊರತೆಗಳನ್ನು ಆಲಿಸಿದ ಮುಖ್ಯಮಂತ್ರಿಗಳು, ಸೂಕ್ತ ಪರಿಹಾರ ಒದಗಿಸುವ ಭರವಸೆ ನೀಡಿದ್ದಾರೆ.




