ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ ವತಿಯಿಂದ ಕೆಂಗೇರಿಯ ಬಿಜಿಎಸ್ ಮೈದಾನದಲ್ಲಿ ಆಯೋಜಿಸಲಾಗಿದ್ದ 18ನೇ ಬಿಜಿಎಸ್ ಸಂಸ್ಥಾಪನಾ ದಿನ ಹಾಗೂ ‘ಬಿಜಿಎಸ್ ಉತ್ಸವ–2026’ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಉದ್ಘಾಟಿಸಿದರು.
ಕಾರ್ಯಕ್ರಮಕ್ಕೆ ಆಗಮಿಸಿದ ಮುಖ್ಯಮಂತ್ರಿಗಳು, ಮೊದಲಿಗೆ ಪರಮಪೂಜ್ಯ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ಅವರ ಪುತ್ಥಳಿಗೆ ಪುಷ್ಪನಮನ ಸಲ್ಲಿಸಿ ಗೌರವ ಸಮರ್ಪಿಸಿದರು.
ಬಳಿಕ ವೇದಿಕೆಯಲ್ಲಿದ್ದ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನದ ಪೀಠಾಧಿಪತಿಗಳಾದ ಪರಮಪೂಜ್ಯ ಶ್ರೀ ಡಾ. ನಿರ್ಮಲಾನಂದನಾಥ ಸ್ವಾಮೀಜಿ ಹಾಗೂ ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥ ಸ್ವಾಮೀಜಿ ಅವರಿಗೆ ನಮಸ್ಕರಿಸಿ ಆಶೀರ್ವಾದ ಪಡೆದರು.
ಈ ಸಮಾರಂಭದಲ್ಲಿ ಪರಮಪೂಜ್ಯ ಶ್ರೀ ಡಾ. ಪ್ರಕಾಶನಾಥ ಸ್ವಾಮೀಜಿ, ಸಚಿವ ಹೆಚ್.ಸಿ. ಬಾಲಕೃಷ್ಣ, ಶಾಸಕ ಎಸ್.ಟಿ. ಸೋಮಶೇಖರ್, ಖ್ಯಾತ ನಟ ಗಣೇಶ್ ಸೇರಿದಂತೆ ಹಲವು ರಾಜಕೀಯ ಹಾಗೂ ಧಾರ್ಮಿಕ ಗಣ್ಯರು ಉಪಸ್ಥಿತರಿದ್ದರು.




