ಚಂದ್ರವಳ್ಳಿ ನ್ಯೂಸ್, ನವದೆಹಲಿ:
ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನವದೆಹಲಿಯ ರಾಷ್ಟ್ರಪತಿ ಭವನದಲ್ಲಿ ಭಾರತದ ಗೌರವಾನ್ವಿತ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿದರು.
ರಾಷ್ಟ್ರಪತಿಗಳನ್ನು ಭೇಟಿಯಾದ ಮುಖ್ಯಮಂತ್ರಿಗಳು ಇದೊಂದು ಸೌಜನ್ಯಯುತ ಭೇಟಿಯಾಗಿದ್ದು, ರಾಜ್ಯದ ಅಭಿವೃದ್ಧಿ ಹಾಗೂ ಹಲವು ಪ್ರಮುಖ ವಿಷಯಗಳ ಕುರಿತು ಚರ್ಚಿಸಲಾಗಿದೆ ಎಂದು ತಿಳಿಸಿದ್ದಾರೆ.
ರಾಷ್ಟ್ರಪತಿ ಭವನದಲ್ಲಿ ನಡೆದ ಈ ಭೇಟಿಯ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ರಾಷ್ಟ್ರಪತಿಗಳಿಗೆ ಗೌರವ ಪೂರ್ವಕವಾಗಿ ಹೂಗುಚ್ಛ ನೀಡಿ ಶುಭ ಹಾರೈಸಿದರು.



