ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯದ ಹಿತದೃಷ್ಟಿಯಿಂದ ಪ್ರಕಟಿಸಿದ್ದ ‘ಕರ್ನಾಟಕ ಬಂದ್’ ಕರೆ ಹಿಂಪಡೆದ ಎಲ್ಲಾ ಕನ್ನಡಪರ ಸಂಘಟನೆಗಳಿಗೆ ಹಾಗೂ ಒಕ್ಕೂಟದ ಮುಖಂಡರಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಹೃದಯಪೂರ್ವಕ ಕೃತಜ್ಞತೆ ಸಲ್ಲಿಸಿದ್ದಾರೆ.
ಕನ್ನಡಪರ ಸಂಘಟನೆಗಳ ವಿವಿಧ ಮುಖಂಡರು ಮುಖ್ಯಮಂತ್ರಿಗಳನ್ನು ಭೇಟಿಯಾಗಿ, ಸಾರ್ವಜನಿಕ ಹಿತದೃಷ್ಟಿಯಿಂದ ಬಂದ್ ಹಿಂಪಡೆಯುತ್ತಿರುವ ಕುರಿತು ಮಾಹಿತಿ ನೀಡಿದರು. ಈ ವೇಳೆ ರಾಜ್ಯದ ಜನರ ಹಿತರಕ್ಷಣೆ ಹಾಗೂ ರೈತರ ಕಲ್ಯಾಣಕ್ಕೆ ಸಂಬಂಧಿಸಿದಂತೆ ಹಲವಾರು ಬೇಡಿಕೆಗಳನ್ನೊಳಗೊಂಡ ಮನವಿಯನ್ನು ಸಲ್ಲಿಸಿದರು.
ಈ ಕುರಿತು ಪ್ರತಿಕ್ರಿಯಿಸಿದ ಮುಖ್ಯಮಂತ್ರಿಗಳು, "ಸಂಘಟನೆಗಳು ನೀಡಿರುವ ಬೇಡಿಕೆಗಳನ್ನು ಸರ್ಕಾರವು ಅತ್ಯಂತ ಗಂಭೀರವಾಗಿ ಪರಿಶೀಲಿಸಲಿದೆ. ರಾಜ್ಯದ ಹಿತ ಕಾಯಲು ಸಹಕರಿಸಿದ ಎಲ್ಲಾ ಕನ್ನಡಪರ ಸಂಘಟನೆಗಳ ನಾಯಕರು ಹಾಗೂ ಕಾರ್ಯಕರ್ತರಿಗೆ ಧನ್ಯವಾದಗಳು" ಎಂದು ತಿಳಿಸಿದ್ದಾರೆ.



