Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ದೇಶದ ಸೇನಾಪಡೆಯ ಪರಾಕ್ರಮಕ್ಕೆ ಅಭಿನಂದನೆ ಸಲ್ಲಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ದೇಶದ ಸೇನಾಪಡೆ ಪಾಕಿಸ್ತಾನ ಹಾಗೂ ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿರುವ ಉಗ್ರಗಾಮಿಗಳ ನೆಲೆಗಳನ್ನು ನಾಶಗೊಳಿಸಿ ನಮ್ಮ ಯೋಧರು ಪರಾಕ್ರಮ ಮೆರೆದಿದ್ದಾರೆ. ಇದು ಇಡೀ ದೇಶವೇ ಹೆಮ್ಮೆಪಡುವ ವಿಷಯ. ದೇಶದ ಸೇನಾಪಡೆಯ ಪರಾಕ್ರಮಕ್ಕೆ ನಾನು ದೇಶದ ಮತ್ತು ರಾಜ್ಯದ ಪರವಾಗಿ ಅಭಿನಂದನೆ ಸಲ್ಲಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಇಂದು ಗೃಹ ಕಚೇರಿ ಕಾವೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಷ್ಟ್ರ ಭದ್ರತೆ ವಿಷಯದಲ್ಲಿ ಯಾವುದೇ ರಾಜಿ ಸಾಧ್ಯವಿಲ್ಲ. ಈ ದಾಳಿಯನ್ನು ಎಲ್ಲರೂ ಬೆಂಬಲಿಸಿದ್ದೇವೆ. ಇದು ಪಾಕಿಸ್ತಾನಕ್ಕೆ ಎಚ್ಚರಿಕೆಯ ಗಂಟೆಯಾಗಿದೆ. ನಮ್ಮ ಸರ್ಕಾರ ನೂರಕ್ಕೆ ನೂರರಷ್ಟು ಸೇನೆ ಕೈಗೊಂಡಿರುವ ಈ ಕ್ರಮವನ್ನು ಬೆಂಬಲಿಸುತ್ತದೆ ಎಂದರು.

ಆಪರೇಷನ್ ಸಿಂಧೂರಹೆಸರಿನಲ್ಲಿ ಸುಮಾರು 9 ಉಗ್ರಗಾಮಿಗಳ ನೆಲೆಗಳನ್ನು ನಾಶಗೊಳಿಸಲಾಗಿದೆ.  ಕೇವಲ ಉಗ್ರಗಾಮಿಗಳ ನೆಲೆಗಳ ಮೇಲೆ ಮಾತ್ರ ದಾಳಿ ನಡೆಸಲಾಗಿದ್ದು, ನಮ್ಮ ಸೈನಿಕರು ಉಗ್ರರ ನೆಲೆಗಳನ್ನು ಪತ್ತೆ ಹಚ್ಚಿ ದಾಳಿ ಮಾಡಿದ್ದಾರೆ. ಅಮಾಯಕ ಜನರ ಸಾವು ನೋವು ತಪ್ಪಿಸಿದ್ದಾರೆ. ನಮ್ಮ ಸೈನಿಕರ ಕಾರ್ಯದಕ್ಷತೆಗೆ ದೊಡ್ಡ ಸಲಾಂ. ಈ ದಾಳಿಯನ್ನು ನಾವು ಸ್ವಾಗತಿಸುತ್ತೇವೆ.

ಕಾಶ್ಮೀರದ ಪಹಲ್ಗಾಮ್‍ನಲ್ಲಿ ಅಮಾಯಕ 26 ಜನ ಹತ್ಯೆ ನಡೆಸಿದ ಉಗ್ರರನ್ನು ಬೆಂಬಲಿಸುವವರು, ಸಾಕುವವರು ಸಹ ಪಾಕಿಸ್ತಾನದವರೇ ಎಂಬುವುದು ಸ್ಪಷ್ಟವಾಗಿದೆ. ನಾವು ಕೇಂದ್ರ ಸರ್ಕಾರದೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಸಂಪೂರ್ಣ ಬೆಂಬಲವನ್ನು ವ್ಯಕ್ತಪಡಿಸಿದ್ದೇವೆ. ರಾಜ್ಯದಲ್ಲಿ ಸುರಕ್ಷತೆಯ ಕುರಿತು ಎಲ್ಲಾ ಎಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿದ್ದೇವೆ ಎಂದು ತಿಳಿಸಿದರು.

ಉಗ್ರರ ಮೇಲಿನ ದಾಳಿ ಹಿನ್ನೆಲೆಯಲ್ಲಿ ಸಂವಿಧಾನ ಉಳಿಸಿ ಅಡಿಯಲ್ಲಿ ರಾಯಚೂರಿನಲ್ಲಿ ಇಂದು ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಕಾರ್ಯಕ್ರಮನ್ನು ರದ್ದುಗೊಳಿಸಲಾಗಿದೆ. ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರ (ಪಿಒಕೆ)ಗಳಲ್ಲಿನ ಉಗ್ರಗಾಮಿಗಳ ನೆಲೆಯನ್ನು ನಾಶ ಮಾಡಿ ಪರಾಕ್ರಮ ಮೆರೆದ ಭಾರತದ ಹೆಮ್ಮೆಯ ಧೀರ ಸೈನಿಕರಿಗೆ ಮೊದಲಿಗೆ ಇಡೀ ರಾಜ್ಯದ ಪರವಾಗಿ ಅಭಿನಂದನೆಗಳನ್ನು ಸಲ್ಲಿಸುತ್ತೇನೆ.

ಸೇನೆ ನಡೆಸಿರುವ ಈ ದಾಳಿ ಭಾರತದ ಮೇಲೆ ಸತತವಾಗಿ ದಾಳಿ ನಡೆಸಿ ಹತ್ಯಾಕಾಂಡ ನಡೆಸುತ್ತಿದ್ದ ಉಗ್ರಗಾಮಿಗಳಿಗೆ ಕಲಿಸಿದ ಪಾಠ ಮಾತ್ರವಲ್ಲ ಈ ಉಗ್ರರಿಗೆ ಆಶ್ರಯ ಮತ್ತು ನೆರವು ನೀಡಿ ಭಾರತದ ವಿರುದ್ಧ ಅವರನ್ನು ಛೂಬಿಡುತ್ತಿದ್ದ ಪಾಕಿಸ್ತಾನಕ್ಕೂ ನೀಡಿರುವ ಎಚ್ಚರಿಕೆ ಆಗಿದೆ.
ಈ ಸೇನಾದಾಳಿ ನಡೆಸದೆ ಭಾರತದ ಮುಂದೆ ಬೇರೆ ಆಯ್ಕೆಗಳಿರಲಿಲ್ಲ. ಪಹಲ್ಗಾಮ್‍ನಲ್ಲಿ ನಡೆದ ಹತ್ಯಾಕಾಂಡ ನಡೆಸಿದ ಉಗ್ರಗಾಮಿಗಳು ಪಾಕಿಸ್ತಾನಕ್ಕೆ ಸೇರಿದವರೆಂದು ಜಗಜ್ಜಾಹೀರಾಗಿದ್ದರೂ. ಪಾಕಿಸ್ತಾನ ಇದನ್ನು ಒಪ್ಪಿಕೊಂಡು ಕ್ರಮಕೈಗೊಳ್ಳುವ ಭರವಸೆ ನೀಡದೆ ಹಠಮಾರಿ ಧೋರಣೆ ತಳೆದಿರುವ ಕಾರಣದಿಂದಾಗಿ ಭಾರತಕ್ಕೂ ಈ ದಾಳಿ ನಡೆಸದೆ ಬೇರೆ ಆಯ್ಕೆಗಳಿರಲಿಲ್ಲ.

ಉಗ್ರಗಾಮಿಗಳ ನೆಲೆಗಳನ್ನು ಧೂಳೀಪಟ ಮಾಡಿ ಉಗ್ರರನ್ನು ಶಿಕ್ಷಿಸಿದ ನಮ್ಮ ಸೈನಿಕರ ಧೀರೋದ್ದಾತ ಪರಾಕ್ರಮದಿಂದ ಪಹಲ್ಗಾಮ್ ಹತ್ಯಾಕಾಂಡದಲ್ಲಿ ತಮ್ಮವರನ್ನು ಕಳೆದುಕೊಂಡ ಕುಟುಂಬಗಳಿಗೆ ತುಸು ನೆಮ್ಮದಿ, ಸಮಾಧಾನ ಸಿಕ್ಕಿರಬಹುದೆಂದು ಭಾವಿಸಿದ್ದೇನೆ. ಇದು ಪಾಕಿಸ್ತಾನಕ್ಕೆ ಮಾತ್ರವಲ್ಲ ಭಾರತದ ಜೊತೆ ಈ ರೀತಿಯ ಕಿಡಿಗೇಡಿತನವನ್ನು ನಡೆಸುವ ನೆರೆಯ ಎಲ್ಲ ದೇಶಗಳಿಗೆ ಕೂಡಾ ಇಂದಿನ ಸೇನಾದಾಳಿ ಎಚ್ಚರಿಕೆಯ ಗಂಟೆಯಾಗಿದೆ ಎಂದು ತಿಳಿಸಿದರು.
ಭಾರತ ಸರ್ಕಾರ ಕೈಗೊಂಡಿರುವ ಈ ನಿರ್ಧಾರವನ್ನು ನಮ್ಮ ಪಕ್ಷ ಸಂಪೂರ್ಣ ಬೆಂಬಲಿಸಿದೆ. ನಾನು ಕೂಡಾ ನಮ್ಮ ಸರ್ಕಾರ ಮತ್ತು ರಾಜ್ಯದ ಪರವಾಗಿ ಸಂಪೂರ್ಣ ಬೆಂಬಲ ಘೋಷಿಸುತ್ತಿದ್ದೇನೆ ಎಂದು ಹೇಳಿದರು.

ಇದು ನಾವೆಲ್ಲರೂ ಒಗ್ಗಟ್ಟಿನಿಂದ ಮತ್ತು ಅಷ್ಟೇ ಎಚ್ಚರದಿಂದ ಇರುವ ಕಾಲ. ರಾಜ್ಯದ ಭದ್ರತಾ ವ್ಯವಸ್ಥೆ ಮೇಲೆ ನಿಗಾ ಇಡುವಂತೆ ಪೊಲೀಸ್ ವರಿಷ್ಠರಿಗೆ ತಿಳಿಸಿದ್ದೇನೆ. ನಮ್ಮ ಸರ್ಕಾರ ಕೇಂದ್ರ ಸರ್ಕಾರದ ಜೊತೆಯಲ್ಲಿಯೂ ಸಂಪರ್ಕದಲ್ಲಿರುತ್ತದೆ. ಅಲ್ಲಿಂದ ಬರುವ ಸೂಚನೆಗಳನ್ನು ಪಾಲಿಸಲಾಗುತ್ತದೆ. ಯಾರೂ ಭಯಭೀತರಾಗುವ ಅವಶ್ಯಕತೆ ಇಲ್ಲ. ಕಟ್ಟುನಿಟ್ಟಿನ ಕ್ರಮಗಳೊಂದಿಗೆ ಶಾಂತಿ ಮತ್ತು ಸುವ್ಯವಸ್ಥೆಯನ್ನು ಕಾಪಾಡಲಾಗುವುದು ಎಂದು ತಿಳಿಸಿದರು.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ