Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಸೆ.24ರಂದು ಮುಖ್ಯಮಂತ್ರಿಗಳ ಜಿಲ್ಲಾ ಪ್ರವಾಸ

ಚಂದ್ರವಳ್ಳಿ ನ್ಯೂಸ್ ಚಿತ್ರದುರ್ಗ:
ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಇದೇ ಸೆಪ್ಟೆಂಬರ್ 24ರಂದು ಚಿತ್ರದುರ್ಗ ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.

ಮುಖ್ಯಮಂತ್ರಿಗಳ ಅಂದು ಬೆಳಿಗ್ಗೆ 11ಕ್ಕೆ ಬೆಂಗಳೂರಿನ ಹೆಚ್‍ಎಎಲ್ ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್ ಮೂಲಕ ಹೊರಟು ಮಧ್ಯಾಹ್ನ 12ಕ್ಕೆ ಚಿತ್ರದುರ್ಗ ಜಿಲ್ಲೆ ಸಿರಿಗೆರೆ ಶ್ರೀ ತರಳಬಾಳು ಜಗದ್ಗುರು ಬೃಹನ್ಮಠಕ್ಕೆ ಆಗಮಿಸಿ, ಶ್ರೀ ಮದುಜ್ಜಯಿನಿ ಸದ್ಧರ್ಮ ಸಿಂಹಾಸನಾಧೀಶ ಶ್ರೀ ತರಳಬಾಳು ಜಗದ್ಗುರು ಶ್ರೀ ಶಿವಕುಮಾರ್ ಶಿವಾಚಾರ್ಯ ಮಹಾಸ್ವಾಮಿಗಳವರ 35ನೇ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಭಾಗವಹಿಸುವುದು. ಮಧ್ಯಾಹ್ನ 1ಕ್ಕೆ ಸಿರಿಗೆರೆಯಿಂದ ಹೊರಟು ಮಧ್ಯಾಹ್ನ 1.15ಕ್ಕೆ ಚಿತ್ರದುರ್ಗ ತಾಲ್ಲೂಕಿನ ಗೋನೂರು ಗ್ರಾಮಕ್ಕೆ ಆಗಮಿಸಿ, ಜಲಸಂಪನ್ಮೂಲ ಇಲಾಖೆ, ವಿಶ್ವೇಶ್ವರಯ್ಯ ಜಲನಿಗಮ ವತಿಯಿಂದ ಆಯೋಜಿಸಿರುವ ಭದ್ರಾ ಮೇಲ್ದಂಡೆ ಯೋಜನೆಯಿಂದ ಬಯಲು ಸೀಮೆಗೆ ನೀರು ಹರಿಸುವ ಪ್ರಯುಕ್ತ ಗಂಗಾಪೂಜೆ/ಬಾಗಿನ ಅರ್ಪಣೆ ಸಮಾರಂಭದಲ್ಲಿ ಭಾಗವಹಿಸುವರು. 

Advertisement

ಮಧ್ಯಾಹ್ನ 1.45ಕ್ಕೆ ಗೋನೂರು ಗ್ರಾಮದಿಂದ ಹೊರಟು, ಮಧ್ಯಾಹ್ನ 1.55ಕ್ಕೆ ಚಿತ್ರದುರ್ಗ ತಾಲ್ಲೂಕಿನ ಬೆಳಗಟ್ಟ ಗ್ರಾಮದ ಜ್ಯೂನಿಯರ್ ಕಾಲೇಜು ಕಟ್ಟಡ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸುವರು. 

ನಂತರ ಮಧ್ಯಾಹ್ನ 2.30ಕ್ಕೆ ತುರುವನೂರು ಗ್ರಾಮಕ್ಕೆ ಆಗಮಿಸಿ, ಜ್ಯೂನಿಯರ್ ಕಾಲೇಜು ಕಟ್ಟಡ, 2 ಕಿ.ಮೀ ಉದ್ದದ ಸಿಟಿಎಂ ರಾಜ್ಯ ರಸ್ತೆ, ಮಹಾತ್ಮ ಗಾಂಧಿ ಪಾರ್ಕ್, ವಾಲ್ಮೀಕಿ ಭವನ, ಕನಕ ಭವನ ಕಟ್ಟಡ, ಬಾಲಕ-ಬಾಲಕಿಯರ, ಹಿರಿಯ ಪ್ರಾಥಮಿಕ ಶಾಲೆ ಕಟ್ಟಡ, ಪ್ರಥಮ ದರ್ಜೆ ಕಾಲೇಜು ಕಟ್ಟಡ, ಇಂದಿರಾ ಗಾಂಧಿ ವಸತಿ ಶಾಲಾ ಕಟ್ಟಡಗಳ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸುವರು. 

ಮಧ್ಯಾಹ್ನ 3.30ಕ್ಕೆ ತುರುವನೂರು ಗ್ರಾಮದಿಂದ ಹೊರಟು 3.50ಕ್ಕೆ ಚಿತ್ರದುರ್ಗ ನಗರದ ದಾವಣಗೆರೆ ರಸ್ತೆಯ ಶ್ರೀ ಮಾದಾರ ಚನ್ನಯ್ಯ ಗುರುಪೀಠದ ಪಕ್ಕದ ಮೈದಾನದಲ್ಲಿ ಸಾರ್ವಜನಿಕ ಸಮಾರಂಭದಲ್ಲಿ ಭಾಗವಹಿಸುವರು. 

ಸಂಜೆ 5ಕ್ಕೆ ಮುರುಘಾ ಮಠ ಆವರಣದ ಹೆಲಿಪ್ಯಾಡ್‍ನಿಂದ ಬೆಂಗಳೂರಿನ ಹೆಚ್‍ಎಎಲ್  ವಿಮಾನ ನಿಲ್ದಾಣಕ್ಕೆ ಪ್ರಯಾಣ ಬೆಳೆಸುವರು ಎಂದು ಮುಖ್ಯಮಂತ್ರಿಯವರ ವಿಶೇಷ ಕರ್ತವ್ಯಾಧಿಕಾರಿ ಬಿ.ಎಸ್.ಶ್ರೀಧರ್ ತಿಳಿಸಿದ್ದಾರೆ.

Author
ಸಿ.ಹೆಂಜಾರಪ್ಪ
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮುಖ್ಯಮಂತ್ರಿಯವರ ತಾಂತ್ರಿಕ ಸಲಹೆಗಾರರಾಗಿ ನಿವೃತ್ತ ಕಾರ್ಯದರ್ಶಿ ಡಾ. ಕೆ. ಜೈಪ್ರಕಾಶ್ ನೇಮಕಜೆಎನ್‌ಯು ಪ್ರೊಫೆಸರ್ ಹಾಗೂ ಕಾಂಗ್ರೆಸ್ ಸಂಸದರಿಂದ ಲೈಂಗಿಕ ಕಿರುಕುಳ ಆರೋಪ, ಸೇವೆಯಿಂದ ವಜಾಆರ್‌ಬಿಐ ಬಿಗ್ ಶಾಕ್: ರೆಪೋ ದರ ಏರಿಕೆಯಿಂದ ಸಾಲಗಾರರಿಗೆ ಹೆಚ್ಚಳವಾದ ಇಎಂಐ ಬರೆ!ಎಸ್‌ಐಆರ್ ರದ್ದುಪಡಿಸುವಂತೆ ಜನತಾ ನ್ಯಾಯಾಲಯ ಸಮಾವೇಶ: ಮುಖ್ಯ ಚುನಾವಣಾ ಆಯುಕ್ತರ ರಾಜೀನಾಮೆಗೆ ಆಗ್ರಹ10 ಸಚಿವರ ವಿರುದ್ಧ ಸ್ಟಿಂಗ್ ಆಪರೇಷನ್ ಸುಪಾರಿ - ಶಾಸಕ ಗಣಿಗ ರವಿ ಸ್ಫೋಟಕ ಪೆನ್‌ಡ್ರೈವ್ ಬಾಂಬ್!ಸಚಿವರಿಗೆ ಬಲೆ ಬೀಳಿಸಲು ಯತ್ನ: ಸಿಎಂ ಎಚ್ಚರಿಕೆ ನೀಡಿದ್ದಾರೆ ಎಂದ ಸತೀಶ್ ಜಾರಕಿಹೊಳಿಕೇಂದ್ರದೊಂದಿಗೆ ಜಿಎಸ್‌ಟಿ ಸಭೆ: ರಾಜ್ಯದ ಬಾಕಿ ಹಣದ ಕುರಿತು 'ಸಿಹಿ ಸುದ್ದಿ' ನೀಡಿದ ಸಿಎಂ ಡಿ.ಕೆ ಶಿವಕುಮಾರ್ ಸುಳಿವು!ಪ್ರಜ್ವಲ್ ರೇವಣ್ಣ ಜೈಲಿನಲ್ಲಿ ಮೊಬೈಲ್ ಪತ್ತೆ ಪ್ರಕರಣ: ಹಿಂಡಲಗಾ ಜೈಲಿಗೆ ಸ್ಥಳಾಂತರಪ್ರತಿಭಟನೆ ಹೆಸರಲ್ಲಿ ಎಲ್ಲವನ್ನೂ ಬಂದ್ ಮಾಡಲು ಆಗದು: ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್ದಾವಣಗೆರೆಯಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ವಕೀಲರ ಪಟ್ಟು: ಮಧ್ಯಕರ್ನಾಟಕದಲ್ಲಿ ತೀವ್ರಗೊಂಡ ಹೋರಾಟ