Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಾಲ್ಯವಿವಾಹ ಪಿಡುಗು ಹೋಗಲಾಡಿಸಿ-ನ್ಯಾ. ರೋಣ ವಾಸುದೇವ್

Advertisement
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಜಿಲ್ಲೆಯ ಸಾಮಾಜಿಕ ಪಿಡುಗಾಗಿರುವ ಬಾಲ್ಯವಿವಾಹ, ಪೋಕ್ಸೋ ಪ್ರಕರಣಗಳನ್ನು ತಡೆಗಟ್ಟಲು ಹಾಗೂ ನಿರ್ಮೂಲನೆ ಮಾಡುವ ನಿಟ್ಟಿನಲ್ಲಿ ಪ್ರಯತ್ನಿಸೋಣ ಎಂದು ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ರೋಣ ವಾಸುದೇವ್ ಹೇಳಿದರು.

ನಗರದ ಜಿಲ್ಲಾ ನ್ಯಾಯಾಲಯ ಆವರಣದಲ್ಲಿನ ಮಧ್ಯಸ್ಥಿಕೆ ಕೇಂದ್ರದಲ್ಲಿ ಗುರುವಾರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ಮಕ್ಕಳಿಗಾಗಿ ಮಕ್ಕಳ ಸ್ನೇಹಿ ಕಾನೂನು ಸೇವೆಗಳ ಯೋಜನೆ-2024ರ ಅಡಿಯಲ್ಲಿ ರಚಿಸಲಾದ ಮಕ್ಕಳ ಕಾನೂನು ಸೇವೆಗಳ ಘಟಕದ ಸದಸ್ಯರಾಗಿ ಹಮ್ಮಿಕೊಂಡಿದ್ದ ಓರಿಯಂಟೇಷನ್ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.

ಬಾಲ್ಯವಿವಾಹ ತಡೆಗಟ್ಟುವ ನಿಟ್ಟಿನಲ್ಲಿ ಹೆಚ್ಚಿನ ರೀತಿಯಲ್ಲಿ ಜನರಿಗೆ ಜಾಗೃತಿ ಮೂಡಿಸಬೇಕು ಎಂದು ಹೇಳಿದರು.
ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ  ಎಂ.ವಿಜಯ್ ಮಾತನಾಡಿ, ಮಕ್ಕಳಿಗಾಗಿ ಮಕ್ಕಳ ಸ್ನೇಹಿ ಕಾನೂನು ಸೇವೆಗಳ ಅಡಿಯಲ್ಲಿ ಮಕ್ಕಳ ಕಾನೂನು ಸೇವೆಗಳ ಘಟಕಕ್ಕೆ ಸದಸ್ಯರನ್ನು ನೇಮಕ ಮಾಡಲಾಗಿದ್ದು, ಮಕ್ಕಳ ಕಲ್ಯಾಣ ಸಮಿತಿ, ಸಖಿ, ಪ್ಯಾನಲ್ ವಕೀಲರು, ಅರೆಕಾಲಿಕ ಸ್ವಯಂ ಸೇವಕರು ಸೇರಿದಂತೆ ಕ್ಷೇತ್ರಮಟ್ಟದಲ್ಲಿ ಮಕ್ಕಳ ಹಕ್ಕುಗಳ ರಕ್ಷಣೆಗಾಗಿ ಕಾರ್ಯನಿರ್ವಹಿಸುವವರಿಗೆ ಕೆಲವು ಜವಾಬ್ದಾರಿಗಳನ್ನು ನೀಡುವಂತೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ ಎಂದು ತಿಳಿಸಿದ ಅವರು, ಯಾವೊಂದು ಮಗುವೂ ಸಹ ತನ್ನ ಹಕ್ಕಿನಿಂದ ವಂಚಿತವಾಗಬಾರದು ಎಂದು ಹೇಳಿದರು.

      ಮಕ್ಕಳ ಕಾನೂನು ಸೇವೆಗಳ ಘಟಕವು ನ್ಯಾಯಾಲಯ ಹಾಗೂ ನ್ಯಾಯಾಲಯದ ಹೊರಗಡೆ ಸೇರಿದಂತೆ ಎಲ್ಲ ಹಂತದಲ್ಲಿಯೂ ಮಕ್ಕಳಿಗೆ ಕಾನೂನು ಸೇವೆ ನೀಡುವ ಉದ್ದೇಶದಿಂದ ಸುಪ್ರಿಂಕೋರ್ಟ್ ಮಕ್ಕಳ ಕಾನೂನು ಸೇವೆಗಳ ಘಟಕ ಸ್ಥಾಪನೆ ಮಾಡಿದೆ. ಇದರ ಸದುಪಯೋಗ ಪಡೆದುಕೊಳ್ಳುವಂತೆ ತಿಳಿಸಿದರು.

ನಿವೃತ್ತ ಜಿಲ್ಲಾ ನ್ಯಾಯಾಧೀಶರಾದ ನಾಡಿಗ ಜಯಸ್ವಾಮಿ ಉಪನ್ಯಾಸ ನೀಡಿ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರವು ಉಚಿತವಾಗಿ ಅರ್ಹರಿಗೆ ಕಾನೂನಿನ ನೆರವು ನೀಡಲಾಗುತ್ತಿದೆ. ಸುಮಾರು 7 ರಿಂದ 8 ಕಾನೂನುಗಳು ಮಕ್ಕಳ ಪರ ಇದ್ದು, ಮಕ್ಕಳ ಕಾನೂನುಗಳ ಬಗ್ಗೆ ಮಕ್ಕಳಿಗೆ ಹಾಗೂ ಸಾರ್ವಜನಿಕರಿಗೆ ತಿಳಿಯುವ ರೀತಿಯಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಅರಿವು ಮೂಡಿಸಬೇಕು ಎಂದು ಹೇಳಿದರು.

ಮಕ್ಕಳ ಪರವಾಗಿರುವ ಕಾನೂನುಗಳು ಉಲ್ಲಂಘನೆಯಾದ ಸಂದರ್ಭಗಳಲ್ಲಿ ಮಕ್ಕಳ ಕಾನೂನು ಸೇವೆಗಳ ಘಟಕದ ಸದಸ್ಯರು ಭಾಗವಹಿಸಿ, ಯಾವ ಕಾನೂನು ಅಡಿ ಮಕ್ಕಳಿಗೆ ತೊಂದರೆಯಾಗುತ್ತಿದೆ. ಅದನ್ನು ಗಮನಿಸಿ, ಕಾನೂನಿನ ನೆರವು ನೀಡಿ ಸರಿಪಡಿಸಬೇಕು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಜೆ.ವೈಶಾಲಿ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಸವಿತಾ ಸೇರಿದಂತೆ ಮಕ್ಕಳ ಕಾನೂನು ಸೇವೆಗಳ ಘಟಕದ ಸದಸ್ಯರು ಇದ್ದರು.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ