Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅಂತಾರಾಷ್ಟ್ರೀಯ ವಸತಿ ಪ್ರೌಢಶಾಲೆಯಲ್ಲಿ ಮಕ್ಕಳ ದಿನಾಚರಣೆ

Advertisement
ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಸತತ ಪರಿಶ್ರಮ ಮತ್ತು ಅಧ್ಯಯನಶೀಲತೆಯಿಂದ ಉತ್ತಮ ಭವಿಷ್ಯವನ್ನು ಕಂಡುಕೊಳ್ಳಲು ಸಾಧ್ಯವಾಗುತ್ತದೆ ಎಂದು ಪರಿಸರವಾದಿ ಕೆ.ಗುರುದೇವ್‌ಹೇಳಿದರು.

ಇಲ್ಲಿನ ಶ್ರೀ ದೇವರಾಜ ಅರಸ್‌ಅಂತಾರಾಷ್ಟ್ರೀಯ ವಸತಿ ಪ್ರೌಢಶಾಲೆಯಲ್ಲಿ ಗುರುವಾರ ನಡೆದ ಮಕ್ಕಳ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಹಿರಿಯರನ್ನು ಗೌರವಿಸುವ ಗುಣ, ಸಮಾಜದೊಂದಿಗೆ ಬೆರೆಯುವ ಆಲೋಚನೆಗಳನ್ನು ಮಕ್ಕಳಲ್ಲಿ ರೂಢಿಸಬೇಕು. ಸಮಯಕ್ಕೆ ಹೆಚ್ಚಿನ ಆದ್ಯತೆ ನೀಡಿ ನಮ್ಮ ಹೊಣೆಯನ್ನು ಅರಿತುಕೊಂಡರೆ ಯಶಸ್ಸು ಸಾಧ್ಯ ಎಂದರು.

ಶ್ರೀ ದೇವರಾಜ ಅರಸ್‌ವ್ಯವಹಾರ ನಿರ್ವಹಣಾ ಮಹಾವಿದ್ಯಾಲಯದ ಪ್ರಾಧ್ಯಾಪಕ ಪ್ರೊ.ಕೆ.ಆರ್.ರವಿಕಿರಣ್ ಮಾತನಾಡಿ, ಮಹತ್ವಾಕಾಂಕ್ಷೆಗಳನ್ನು ಮಕ್ಕಳಲ್ಲಿ ಬಿತ್ತುವ ಮೂಲಕ ಸದೃಢ ಭವಿಷ್ಯದ ಸಂಕಲ್ಪವನ್ನು ಮಾಡಬೇಕು.

ನಿರ್ದಿಷ್ಟ ಗುರಿ ಮತ್ತು ಪ್ರಖರ ವಿಚಾರಧಾರೆಗಳನ್ನು ಪ್ರಚೋದಿಸುವ ಗುರು ಇದ್ದಾಗ ಸಮರ್ಥ ನಾಯಕತ್ವದ ಗುಣಗಳನ್ನು ರೂಢಿಸಿಕೊಳ್ಳಲು ಸಾಧ್ಯವಾಗುತ್ತದೆ. ಮಕ್ಕಳಲ್ಲಿ ಭವಿಷ್ಯದ ಬಗ್ಗೆ ಧನಾತ್ಮಕ ಕನಸುಗಳನ್ನು ಬಿತ್ತುವುದು ಶಿಕ್ಷಣದ ಪರಮೋಚ್ಛ ಗುರಿಯಾಗಬೇಕು ಎಂದು ತಿಳಿಸಿದರು.

ಶಾಲೆಯ ಮುಖ್ಯಶಿಕ್ಷಕ ಜಿಯಾವುಲ್ಲಾಖಾನ್‌ಅಧ್ಯಕ್ಷತೆ ವಹಿಸಿದ್ದರು. ಅಧ್ಯಾಪಕರಾದ ಬಿ.ವಿಜಯ್‌ಕುಮಾರ್, ದೇವರಾಜ್‌, ಮಹಮ್ಮದ್‌ಕೈಸರ್‌ಪಾಷಾ, ರಶ್ಮಿ, ಕಾವ್ಯಶ್ರೀ, ಶ್ರೀನಿವಾಸ್‌ಉಪಸ್ಥಿತರಿದ್ದರು.

ಶಾಲೆಯ 10ನೇ ತರಗತಿ, 9ನೇ ತರಗತಿಯ ಪ್ರತಿಭಾವಂತ ವಿದ್ಯಾರ್ಥಿಗಳು ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ವೇದಿಕೆಯಲ್ಲಿದ್ದುದು ವಿಶೇಷವಾಗಿತ್ತು. ವಿವಿಧ ಕ್ರೀಡಾ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳ ವಿಜೇತರು, ಶೈಕ್ಷಣಿಕ ಸಾಧಕ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ, ಬಹುಮಾನ ನೀಡಿ ಅಭಿನಂದಿಸಲಾಯಿತು.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ