ಚಂದ್ರವಳ್ಳಿ ನ್ಯೂಸ್ ಚಿತ್ರದುರ್ಗ: ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ರಮ್ಯಾ ಎಸ್. ಅವರನ್ನು ನೇಮಕ ಮಾಡಿ ಹೊರಡಿಸಲಾಗಿದ್ದ ವರ್ಗಾವಣೆ ಆದೇಶಕ್ಕೆ ರಾಜ್ಯ ಸರ್ಕಾರ ತಡೆ ನೀಡಿದೆ.
Also read
ಕರ್ನಾಟಕ ವಿದ್ಯುತ್ ಕಾರ್ಖಾನೆ ನಿಯಮಿತದ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ರಮ್ಯಾ ಎಸ್ ಅವರನ್ನು ಚಿತ್ರದುರ್ಗ ಜಿಲ್ಲಾಧಿಕಾರಿಯಾಗಿರುವ ವೆಂಕಟೇಶ್ ಟಿ. ಅವರ ಜಾಗಕ್ಕೆ ವರ್ಗಾವಣೆ ಮಾಡಿ ಸರ್ಕಾರ ಆದೇಶಿಸಿತ್ತು.
ಆದರೆ, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಜುಲೈ 3ರಂದು ಹೊರಡಿಸಿರುವ ಅಧಿಸೂಚನೆಯಲ್ಲಿ, ರಮ್ಯಾ ಅವರ ವರ್ಗಾವಣೆ ಆದೇಶವನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ತಡೆಹಿಡಿಯಲಾಗಿದೆ.



