Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಚಿತ್ರದುರ್ಗ ಜಿಲ್ಲೆಗೆ ಬಜೆಟ್ ನಲ್ಲಿ ಸಿಕ್ಕಿದ್ದೇನು ಮತ್ತು ಪ್ರಮುಖಾಂಶಗಳು

Advertisement
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಮುಖ್ಯಮಂತ್ರಿ ಸಿದ್ದರಾಮಯ್ಯನವರ 16ನೇ ಬಹು ನಿರೀಕ್ಷಿತ ಬಜೆಟ್ ನಲ್ಲಿ ಚಿತ್ರದುರ್ಗ ಜಿಲ್ಲೆಗೆ ಒಂದಿಷ್ಟು ಬೆಳಕು ತೋರಿಸಲಾಗಿದೆ.
ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ತೊಗರಿ ಖರೀದಿಗೆ ಪ್ರತಿ ಕ್ವಿಂಟಾಲ್ಗೆ 7,550 ರೂ. ಜೊತೆಗೆ ರಾಜ್ಯ ಸರ್ಕಾರದ ವತಿಯಿಂದ ಹೆಚ್ಚುವರಿ ಪ್ರೋತ್ಸಾಹಧನ 450 ರೂ.ಗಳಂತೆ ಒಟ್ಟು 138 ಕೋಟಿ ರೂ. ನೀಡಲು ತೀರ್ಮಾನಿಸಲಾಗಿದೆ. ಇದರಿಂದ
, ತೊಗರಿ ಬೆಳೆಯುವ ಪ್ರಮುಖ ಜಿಲ್ಲೆಗಳಾದ ಕಲಬುರಗಿ, ಬೀದರ್, ಯಾದಗಿರಿ, ವಿಜಯಪುರ, ಬಾಗಲಕೋಟೆ, ರಾಯಚೂರು, ಕೊಪ್ಪಳ, ಕೋಲಾರ, ಚಿತ್ರದುರ್ಗ ಹಾಗೂ ಚಿಕ್ಕಬಳ್ಳಾಪುರ ಭಾಗದ ರೈತರಿಗೆ ಅನುಕೂಲವಾಗಲಿದೆ.

ಭದ್ರಾ ಮೇಲ್ದಂಡೆ ಯೋಜನೆಗೆ 2023-24ರ ಕೇಂದ್ರ ಸರ್ಕಾರದ ಆಯವ್ಯಯದಲ್ಲಿ ಘೋಷಿಸಿದ 5,300 ಕೋಟಿ ರೂ. ಅನುದಾನ ಇನ್ನೂ ಬಿಡುಗಡೆಯಾಗಿರುವುದಿಲ್ಲ. ಆದರೂ, ರಾಜ್ಯ ಸರ್ಕಾರವು ಅಗತ್ಯ ಅನುದಾನವನ್ನು ಒದಗಿಸಿ ಈ ಯೋಜನೆಯನ್ನು ಪೂರ್ಣಗೊಳಿಸಲು ಕ್ರಮವಹಿಸುತ್ತಿದೆ. ತರೀಕೆರೆ ಏತ ನೀರಾವರಿ ಯೋಜನೆಯಡಿ 79 ಕೆರೆಗಳನ್ನು ತುಂಬಿಸುವ ಮೂಲಕ 49,790 ಎಕರೆ ಸೂಕ್ಷ್ಮ ನೀರಾವರಿ ಸಾಮರ್ಥ್ಯ ಕಲ್ಪಿಸಲಾಗಿದೆ.

ಪ್ರಸಕ್ತ ಸಾಲಿನಲ್ಲಿ 2,611 ಕೋಟಿ ರೂ. ಅಂದಾಜು ಮೊತ್ತದ ಚಿತ್ರದುರ್ಗ ಶಾಖಾ ಕಾಲುವೆ ಕಾಮಗಾರಿಗಳನ್ನು ಪೂರ್ಣಗೊಳಿಸುವ ಮೂಲಕ ಹೊಸದುರ್ಗ, ಹೊಳಲ್ಕೆರೆ, ಜಗಳೂರು, ಮೊಳಕಾಲ್ಮೂರು, ಚಳ್ಳಕೆರೆ ಮತ್ತು ಪಾವಗಡ ತಾಲ್ಲೂಕುಗಳಲ್ಲಿನ 30 ಕೆರೆಗಳನ್ನು ತುಂಬಿಸಿ ಒಂದು ಲಕ್ಷದ ಎಪ್ಪತ್ತೇಳು ಸಾವಿರ ಎಕರೆ ಪ್ರದೇಶಕ್ಕೆ ಸೂಕ್ಷ್ಮ ನೀರಾವರಿ ಸಾಮರ್ಥ್ಯವನ್ನು ಕಲ್ಪಿಸಲಾಗುವುದು. 

ಗರ್ಭಿಣಿಯರಲ್ಲಿ ರಕ್ತಹೀನತೆ ತಡೆಗಟ್ಟಲು ಹಿಂದುಳಿದ ಜಿಲ್ಲೆಗಳಲ್ಲಿ ಪೌಷ್ಟಿಕಾಂಶ ಕಿಟ್ಗಳು, ಪ್ರೋತ್ಸಾಹ ಧನ ಹಾಗೂ ತಾಯಂದಿರಿಗೆ ವಾತ್ಸಲ್ಯ ಕಿಟ್ ಗಳನ್ನು ವಿತರಣೆ ಮಾಡಲಾಗುವುದು. ಹುದ್ದೆಗಳನ್ನು ಪುನರ್ ಹಂಚಿಕೆ ಮಾಡುವ ಮೂಲಕ ಪ್ರತಿ ತಾಲ್ಲೂಕು ಆಸ್ಪತ್ರೆಯಲ್ಲಿ MCH ತಜ್ಞರನ್ನು ನಿಯೋಜಿಸಲಾಗುವುದು.   ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರಿನಲ್ಲಿ 200 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆ ಸ್ಥಾಪಿಸಲಾಗುವುದು.
ಸುಧಾರಿತ ಆರೋಗ್ಯ ಸೇವೆಯನ್ನು ಒದಗಿಸಲು ಚಿತ್ರದುರ್ಗದಲ್ಲಿ ಸುಸಜ್ಜಿತ ಟ್ರಾಮಾ ಕೇರ್ ಕೇಂದ್ರ ಸ್ಥಾಪಿಸಲಾಗುವುದು.


ಕೋಲಾರ, ರಾಮನಗರ, ಚಿತ್ರದುರ್ಗ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಹೊಸ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರಗಳನ್ನು ಸ್ಥಾಪಿಸಲಾಗುವುದು. ಪ್ರಸಕ್ತ ಸಾಲಿನಲ್ಲಿ ಒಂಭತ್ತುಕೋಟಿ ರೂ. ಒದಗಿಸಿದೆ.

ರಾಜ್ಯದಲ್ಲಿ ಪ್ರಗತಿಯಲ್ಲಿರುವ 42 ಸ್ವಯಂಚಾಲಿತ ಪರೀಕ್ಷಾ ಪಥಗಳ ನಿರ್ಮಾಣವನ್ನು ಸದರಿ ಸಾಲಿನಲ್ಲಿ ಪೂರ್ಣಗೊಳಿಸಲಾಗುವುದು. 2025-26ನೇ ಸಾಲಿನಲ್ಲಿ ಹೊನ್ನಾವರ, ಚಾಮರಾಜನಗರ ಮತ್ತು ಚಿತ್ರದುರ್ಗದಲ್ಲಿ 20 ಕೋಟಿ ರೂ. ವೆಚ್ಚದಲ್ಲಿ ಸ್ವಯಂಚಾಲಿತ ಪರೀಕ್ಷಾ ಪಥಗಳನ್ನು ನಿರ್ಮಿಸಲು ಕ್ರಮವಹಿಸಲಾಗುವುದು. ಈ ಉದ್ದೇಶಕ್ಕಾಗಿ 12 ಕೋಟಿ ರೂ. ಅನುದಾನವನ್ನು ಒದಗಿಸಲಾಗುವುದು.

ರಾಜ್ಯದಲ್ಲಿ ವಾಹನ ಸಂಚಾರವನ್ನು ಮೇಲ್ವಿಚಾರಣೆ ಮಾಡಲು ಮತ್ತು ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳನ್ನು ಪತ್ತೆ ಹಚ್ಚಿ ನಿಯಂತ್ರಿಸಲು ದಾವಣಗೆರೆ, ಧಾರವಾಡ, ಕಲಬುರಗಿ, ಬೆಳಗಾವಿ, ಚಿತ್ರದುರ್ಗ, ಹಾವೇರಿ, ಹೊಸಪೇಟೆ, ಬಳ್ಳಾರಿ, ವಿಜಯಪುರ, ದಕ್ಷಿಣ ಕನ್ನಡ ಜಿಲ್ಲೆಗಳ ಒಟ್ಟು 60 ಸ್ಥಳಗಳಲ್ಲಿ 50 ಕೋಟಿ ರೂ. ವೆಚ್ಚದಲ್ಲಿ AI ಆಧಾರಿತ ವಿದ್ಯುನ್ಮಾನ ಕ್ಯಾಮರಾ ಅಳವಡಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ