Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಚಿತ್ರದುರ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಹೆದ್ದಾರಿಗಳಿಗೆ ಅನುಮೋದನೆ ನೀಡಿ: ಕಾರಜೋಳ

Advertisement
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಅತೀ ಅವಶ್ಯವಾಗಿರುವ ರಾಷ್ಟ್ರೀಯ ಹೆದ್ದಾರಿ ಯೋಜನೆಗಳ ಅನುಷ್ಟಾನಕ್ಕೆ ಈಗಾಗಲೇ ಪ್ರಸ್ಥಾವನೆ ಸಲ್ಲಿಸಲಾಗಿದ್ದು
, ಈ ಯೋಜನೆಗಳಿಗೆ ತ್ವರಿತವಾಗಿ ಅನುಮೋದನೆ ನೀಡುವಂತೆ ಸಂಸದ ಗೋವಿಂದ ಎಂ.ಕಾರಜೋಳರವರು ದೆಹಲಿಯಲ್ಲಿ ಬುಧವಾರ ಹೆದ್ದಾರಿ ಸಚಿವ ನಿತಿನ್ ಗಡ್ಕರಿಯವರನ್ನು ಭೇಟಿ ಮಾಡಿ ಮನವಿ ಮಾಡಿದರು.   

ಚಿತ್ರದುರ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ  ಜೇವರ್ಗಿ-ಚಾಮರಾಜನಗರ ರಾಷ್ಟ್ರೀಯ ಹೆದ್ದಾರಿ-೧೫೦ಎ ಚಳ್ಳಕೆರೆ ನಗರದ ಒಳಭಾಗದಲ್ಲಿ ಹಾದು ಹೋಗುತ್ತಿದ್ದು, ಚಳ್ಳಕೆರೆ ಪಟ್ಟಣದ ವ್ಯಾಪ್ತಿಯಲ್ಲಿ ಸುಮಾರು ೯ ಕಿ.ಮೀ. ಹೆದ್ದಾರಿಯನ್ನು ಒನ್ ಟೈಮ್ ಇಮ್ಪ್ರೂವ್‌ಮೆಂಟ್ ಯೋಜನೆಯಡಿ ಅಭಿವೃದ್ದಿಪಡಿಸುವುದು, ರಾಷ್ಟ್ರೀಯ ಹೆದ್ದಾರಿ-೪೮ ಹಾಗೂ ರಾಷ್ಟ್ರೀಯ ಹೆದ್ದಾರಿ-೧೫೦-ಎ ಹೆದ್ದಾರಿಗಳು

ಹಿರಿಯೂರು ನಗರದ ಹೊರ ಭಾಗದಲ್ಲಿ ಛೇಧಿಸುತ್ತಿದ್ದು, ಇಲ್ಲಿ ಕ್ಲೋವರ್ ಲೀಫ್ ಜಂಕ್ಷನ್ ನಿರ್ಮಾಣ ಮಾಡುವುದು, ಮೊಳಕಾಲ್ಮೂರು ಪಟ್ಟಣದ ಹೊರಭಾಗದಲ್ಲಿ ಬೈಪಾಸ್ ರಸ್ತೆ ನಿರ್ಮಾಣ ಮಾಡುವುದು, ಭಾರತ್ ಮಾಲಾ ಪರಿಯೋಜನೆಯಡಿ ನಿರ್ಮಾಣವಾಗುತ್ತಿರುವ

ಚಳ್ಳಕೆರೆ-ಹಿರಿಯೂರು ಮಧ್ಯದ ಹೆದ್ದಾರಿಯಲ್ಲಿ ಉದ್ಬವಿಸಿರುವ ಹಲವಾರು ಗ್ರಾಮಗಳ ಸಮಸ್ಯೆ ಪರಿಹರಿಸುವುದು, ರಾಷ್ಟ್ರೀಯ ಹೆದ್ದಾರಿ-೪೮ ರಲ್ಲಿ ಶಿರಾ ತಾಲ್ಲೂಕು ಚಿಕ್ಕನಹಳ್ಳಿ ಗ್ರಾಮದ ಬಳಿ ನಿರ್ಮಾಣವಾಗಿರುವ ಕೆಳಸೇತುವೆಯ ಅವೈಜ್ಞಾನಿಕತೆಯನ್ನು ಸರಿಪಡಿಸುವುದು, ಹಿರಿಯೂರು ತಾಲೂಕು ಪಟ್ರೆಹಳ್ಳಿ ಬಳಿ ಕೆಳಸೇತುವೆ ನಿರ್ಮಾಣ ಮಾಡುವುದು,

ಶಿರಾ ಪಟ್ಟಣದಲ್ಲಿ ಬಾಕಿ ಉಳಿದಿರುವ ೩.೯೦ ಕಿ.ಮೀ ಸರ್ವೀಸ್ ರಸ್ತೆಯನ್ನು ಪೂರ್ಣಗೊಳಿಸುವುದು, ರಾಷ್ಟ್ರೀಯ ಹೆದ್ದಾರಿ-೧೭೩ ನ್ನು ಹೊಳಲ್ಕೆರೆ ಪಟ್ಟಣದಿಂದ ದಾವಣಗೆರೆ ತಾಲ್ಲೂಕು ಆನಗೋಡು ಬಳಿ ರಾಷ್ಟ್ರೀಯ ಹೆದ್ದಾರಿ-೪೮ ರವರೆಗೆ ವಿಸ್ತರಿಸುವುದು ಸೇರಿದಂತೆ ಹಲವಾರು ವಿಷಯಗಳ ಬಗ್ಗೆ ಸಚಿವರೊಂದಿಗೆ ಸಂಸದರು ಚರ್ಚಿಸಿದರು.


 ಈ ಎಲ್ಲಾ ವಿಷಯಗಳು ಈಗಾಗಲೇ ಹೆದ್ದಾರಿ ಸಚಿವಾಲಯದಲ್ಲಿ ವಿವಿಧ ಹಂತಗಳಲ್ಲಿ ಪ್ರಗತಿಯಲ್ಲಿದ್ದು, ಶೀಘ್ರವಾಗಿ ಈ ಎಲ್ಲಾ ಯೋಜನೆಗಳನ್ನು ಆದ್ಯತೆಯ ಮೇರೆಗೆ ಅನುಮೋದನೆ ನೀಡಲಾಗುವುದು ಎಂದು ಸಚಿವರು ಭರವಸೆ ನೀಡಿದರು.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ