ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಚಿತ್ರದುರ್ಗ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರ ಕಚೇರಿಯ ‘ಸಖಿ’ (ಒನ್ ಸ್ಟಾಪ್ ಸೆಂಟರ್) ಘಟಕ ಯೋಜನೆಯಡಿ 2026-27ನೇ ಸಾಲಿಗೆ ಕೇಸ್ ವರ್ಕರ್/ಸೋಶಿಯಲ್ ವರ್ಕರ್-1 ಹುದ್ದೆಯನ್ನು ಗುತ್ತಿಗೆ ಆಧಾರದ ಮೇಲೆ ಆಯ್ಕೆ ಮಾಡಿಕೊಳ್ಳಲು ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಜೂನ್ 16 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.
‘ಕೇಸ್ ವರ್ಕರ್ / ಸೋಶಿಯಲ್ ವರ್ಕರ್’ (Case worker / Social Worker) ಹುದ್ದೆಗೆ ಆಯ್ಕೆಯಾಗುವ ಅಭ್ಯರ್ಥಿಗೆ ಮಾಸಿಕ ರೂ.25,000/- ಗೌರವಧನ ನೀಡಲಾಗುತ್ತದೆ. ಅಭ್ಯರ್ಥಿಗಳು ಬಿ.ಎಸ್.ಡಬ್ಲ್ಯೂ, ಬಿ.ಎ (ಸಮಾಜಶಾಸ್ತ್ರ) ಅಥವಾ ಮಹಿಳಾ ಅಧ್ಯಯನದಲ್ಲಿ ಪದವಿ ಪಡೆದಿರಬೇಕು ಹಾಗೂ ಸಂಬಂಧಿಸಿದ ಕ್ಷೇತ್ರದಲ್ಲಿ ಕನಿಷ್ಠ 2 ವರ್ಷಗಳ ಕೆಲಸದ ಅನುಭವ ಹೊಂದಿರಬೇಕು. ಇದರೊಂದಿಗೆ ಕಂಪ್ಯೂಟರ್ ಜ್ಞಾನ ಕಡ್ಡಾಯವಾಗಿದ್ದು, 21 ರಿಂದ 45 ವರ್ಷದೊಳಗಿನ ಮಹಿಳೆಯರು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.
ಅರ್ಹ ಅಭ್ಯರ್ಥಿಗಳು ದಿನಾಂಕ 16.05.2026 ರಿಂದ ಅರ್ಜಿಗಳನ್ನು ಪಡೆಯಬಹುದಾಗಿದ್ದು, ಅರ್ಜಿ ಸ್ವೀಕರಿಸಲು 15.06.2026 ಕೊನೆಯ ದಿನವಾಗಿದೆ. ಭರ್ತಿ ಮಾಡಿದ ಅರ್ಜಿಗಳನ್ನು ಸಲ್ಲಿಸಲು 16.06.2026 ಕೊನೆಯ ದಿನಾಂಕವಾಗಿರುತ್ತದೆ.
ಹೆಚ್ಚಿನ ಮಾಹಿತಿ ಹಾಗೂ ಅರ್ಜಿಗಾಗಿ ಉಪನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಚಿತ್ರದುರ್ಗ ಜಿಲ್ಲೆ, ಓಬವ್ವ ಕ್ರೀಡಾಂಗಣದ ಹತ್ತಿರ, ಜಿಲ್ಲಾ ಬಾಲಭವನ ಆವರಣ, ಚಿತ್ರದುರ್ಗ ಈ ವಿಳಾಸಕ್ಕೆ ಭೇಟಿ ನೀಡಬಹುದು ಅಥವಾ ದೂರವಾಣಿ ಸಂಖ್ಯೆ 08194-234579, ಇ-ಮೇಲ್: [email protected] ಮೂಲಕ ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.



