ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಕಟ್ಟಡ ಕಾರ್ಮಿಕರಿಗೆ ವೈಜ್ಞಾನಿಕ ವೇತನ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಸಿ.ಐ.ಟಿ.ಯು ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಶನಿವಾರ ಪ್ರತಿಭಟನೆ ನಡೆಸಿ ಅಪರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.
ಪ್ರವಾಸಿ ಮಂದಿರದಿಂದ ಮೆರವಣಿಗೆ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ಪ್ರತಿಭಟನಾಕಾರರು ಕಾರ್ಮಿಕ ವಿರೋಧಿ ನೀತಿ ಅನುಸರಿಸುತ್ತಿರುವ ಸರ್ಕಾರಗಳ ವಿರುದ್ದ ಧಿಕ್ಕಾರಗಳನ್ನು ಕೂಗಿದರು.
ಲಾಕ್ ಲೇಬರ್ ಕೋಡನ್ನು ಕೂಡಲೆ ಸರ್ಕಾರ ರದ್ದುಪಡಿಸಬೇಕು. ಕೇಂದ್ರ ಚುನಾವಣಾ ಆಯೋಗ ಮತದಾರರ ಮತಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ನಡೆಸುತ್ತಿರುವುದರಿಂದ ಅರ್ಹ ಮತದಾರರಿಗೆ ಅನ್ಯಾಯವಾಗಬಾರದು.
ಕಟ್ಟಡ ಕಾರ್ಮಿಕರ ಮಕ್ಕಳಿಗೆ ನೀಡುತ್ತಿದ್ದ ಮದುವೆ ಸಹಾಯ ಧನ ನಿಂತಿದೆ. ಕೂಡಲೆ ಪುನರ್ ಆರಂಭಿಸಬೇಕು. ಕಟ್ಟಡ ಕಾರ್ಮಿಕರು ಮನೆಗಳನ್ನು ನಿರ್ಮಿಸಿಕೊಳ್ಳಲು ಐದು ಲಕ್ಷ ರೂ.ಗಳ ನೆರವು ನೀಡುವಂತೆ ಪ್ರತಿಭಟನಾಕಾರರು ಒತ್ತಾಯಿಸಿದರು.
ಸಿ.ಐ.ಟಿ.ಯು.ಜಿಲ್ಲಾ ಸಹ ಸಂಚಾಲಕ ಸಿ.ಕೆ.ಗೌಸ್‌ಪೀರ್, ಸಂಚಾಲಕ ತಿಪ್ಪೇಸ್ವಾಮಿ, ಡಿ.ಎಂ.ಮಲಿಯಪ್ಪ, ನಿಂಗಮ್ಮ, ಕಟ್ಟಡ ಕಾರ್ಮಿಕರು, ಅಂಗನವಾಡಿ ಹಾಗೂ ಬಿಸಿಯೂಟ ಕಾರ್ಯಕರ್ತೆಯರು, ಗ್ರಾಮ ಪಂಚಾಯಿತಿ ನೌಕರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.



