ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ :
ಡಿ.ಕೆ.ಶಿವಕುಮಾರ್ ರಾಜ್ಯದ ಮುಖ್ಯಮಂತ್ರಿಯಾಗಿರುವುದಕ್ಕೆ ಹಾಗೂ ಬಿ.ಕೆ.ಹರಿಪ್ರಸಾದ್ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾಗಿ ನೇಮಕಗೊಂಡಿರುವುದಕ್ಕೆ ನಗರ ಬ್ಲಾಕ್ ಕಾಂಗ್ರೆಸ್ ಸಮಿತಿಯಿಂದ ನಗರ ಪೊಲೀಸ್ ಠಾಣೆ ಆವರಣದಲ್ಲಿರುವ ಕಣಿವೆಮಾರಮ್ಮನಿಗೆ ಶುಕ್ರವಾರ ೧೧೫ ತೆಂಗಿನ ಕಾಯಿಗಳನ್ನು ಹೊಡೆದು ಹರಕೆ ತೀರಿಸಲಾಯಿತು.
ಡಿ.ಕೆ.ಶಿವಕುಮಾರ್ ರಾಜ್ಯದ ಮುಖ್ಯಮಂತ್ರಿಯಾಗಲಿ, ಬಿ.ಕೆ.ಹರಿಪ್ರಸಾದ್ ಮಂತ್ರಿಯಾಗಲಿ ಇಲ್ಲವೇ ಕೆ.ಪಿ.ಸಿ.ಸಿ. ಅಧ್ಯಕ್ಷರಾಗಲಿ ಎಂದು ಕಣಿವೆಮಾರಮ್ಮನಲ್ಲಿ ಹರಕೆ ಮಾಡಿಕೊಳ್ಳಲಾಗಿತ್ತು. ಅದರಂತೆ ತೆಂಗಿನಕಾಯಿಗಳನ್ನು ಹೊಡೆದು ಭಕ್ತಿ ಸಮರ್ಪಿಸಲಾಯಿತೆಂದು ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಯು.ಲಕ್ಷ್ಮಿಕಾಂತ್ ತಿಳಿಸಿದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ.ತಾಜ್‌ಪೀರ್, ಕಾರ್ಯಾಧ್ಯಕ್ಷ ಕೆ.ಎಂ.ಹಾಲಸ್ವಾಮಿ, ಪ್ರಧಾನ ಕಾರ್ಯದರ್ಶಿಗಳಾದ ಕೆ.ಪಿ.ಸಂಪತ್‌ಕುಮಾರ್, ಡಿ.ಎನ್.ಮೈಲಾರಪ್ಪ,
ಡಾ.ಬಿ.ತಿಪ್ಪೇಸ್ವಾಮಿ ಜೆಜೆಹಟ್ಟಿ, ಉಪಾಧ್ಯಕ್ಷರುಗಳಾದ ಡಿ.ಟಿ.ವೆಂಕಟೇಶ್, ಎಸ್.ಎನ್.ರವಿಕುಮಾರ್, ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ಗೀತಾನಂದಿನಿಗೌಡ, ಪ್ರಧಾನ ಕಾರ್ಯದರ್ಶಿ ಅರ್ಪಿತ, ಲಿಡ್ಕರ್ ಮಾಜಿ ಚೇರ್ಮನ್ ಓ.ಶಂಕರ್, ಶಬ್ಬೀರ್‌ಭಾಷಾ, ಸೈಯದ್ ವಲಿಖಾದ್ರಿ, ಜಿ.ವಿ.ಮಧುಗೌಡ, ಮುದಸಿರ್ ನವಾಜ್, ದಲಿತ ಮುಖಂಡ
ಬಿ.ರಾಜಪ್ಪ, ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷ ಎನ್.ಡಿ.ಕುಮಾರ್, ಪರಿಶಿಷ್ಠ ಪಂಗಡಗಳ ವಿಭಾಗದ ಅಧ್ಯಕ್ಷ ಮಂಜುನಾಥ್, ಹೆಚ್.ಅಂಜಿನಪ್ಪ ಇನ್ನು ಅನೇಕರು ಈ ಸಂದರ್ಭದಲ್ಲಿ ಹಾಜರಿದ್ದರು.



