Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಾತ್ರಿಯಿಡೀ ಬಂಧನದಲ್ಲಿಟ್ಟು ಸರ್ವಾಧಿಕಾರ ಮೆರೆದಿದ್ದಾರೆ-ಸಿಟಿ ರವಿ

Advertisement
ಚಂದ್ರವಳ್ಳಿ ನ್ಯೂಸ್, ಬೆಳಗಾವಿ:
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ವಿರುದ್ಧ ಅಸಂವಿಧಾನಿಕ ಪದಬಳಕೆ ಆರೋಪ ಪ್ರಕರಣದಲ್ಲಿ ಬಿಜೆಪಿ ನಾಯಕ, ವಿಧಾನ ಪರಿಷತ್ ಶಾಸಕ ಸಿ.ಟಿ ರವಿ ಜಾಮೀನು ಅರ್ಜಿ ವಿಚಾರಣೆಗೆ ಸಂಬಂಧಿಸಿದಂತೆ ಬೆಳಗಾವಿ ಕೋರ್ಟ್‌ ಮಹತ್ವದ ಆದೇಶ ಪ್ರಕಟಿಸಿದೆ.

ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಸಿ.ಟಿ ರವಿ ಅವರನ್ನ ಹಾಜರುಪಡಿಸುವಂತೆ ಬೆಳಗಾವಿ 5ನೇ ಜೆಎಂಎಫ್‌ಸಿ ಕೋರ್ಟ್‌ನ ನ್ಯಾಯಾಧೀರಾದ ಸ್ಪರ್ಶಾ ಡಿಸೋಜಾ ಅವರು ಆದೇಶಿಸಿದ್ದಾರೆ.

Transit warrant ನೀಡುವ ಮೂಲಕ ಆದೇಶ ನೀಡಲಾಗಿದೆ. ಘನತೆ, ಗೌರವದಿಂದ ಆರೋಪಿಯನ್ನು ಕರೆದುಕೊಂಡು ಹೋಗಬೇಕು. 24 ಗಂಟೆಯೊಳಗೆ ಬೆಂಗಳೂರಿನ ಕೋರ್ಟ್ ಹಾಜರು ಪಡಿಸಲು ಮಹತ್ವದ ಸೂಚನೆ ನೀಡಿ ಕೋರ್ಟ್ ಆದೇಶಿಸಿದೆ.
ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಸಿಟಿ ರವಿಯನ್ನು ಪೊಲೀಸರು ಬೆಳಗಾವಿಯಿಂದ ಬೆಂಗಳೂರಿನತ್ತ ಕರೆದುಕೊಂಡು ಹೋಗುತ್ತಿದ್ದಾರೆ. ಹಿರೇಬಾಗೇವಾಡಿ ಪೊಲೀಸರು ಶುಕ್ರವಾರ ಬೆಳಗ್ಗೆ ಬೆಳಗಾವಿ ಕೋರ್ಟ್‌ಗೆ ಸಿ.ಟಿ ರವಿ ಅವರನ್ನು ಹಾಜರುಪಡಿಸಿದ್ದರು.


ಈ ವೇಳೆ ವಕೀಲರು ಜಾಮೀನು ನೀಡುವಂತೆ ಮನವಿ ಮಾಡಿದ್ದರು. ವಾದ-ಪ್ರತಿವಾದಗಳನ್ನು ಆಲಿಸಿದ ಕೋರ್ಟ್‌ಆದೇಶ ಕಾಯ್ದಿರಿಸಿತ್ತು. ಆದರೆ ತನಿಖಾಧಿಕಾರಿಗಳು ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಕರೆದೊಯ್ಯಲು ಅನುಮತಿ ನೀಡುವಂತೆ ಮನವಿ ಮಾಡಿದ್ದರು. ಅದರಂತೆ ಬೆಳಗಾವಿ ಕೋರ್ಟ್​, ಅನುಮತಿ ನೀಡಿದ್ದು, ಎಷ್ಟು ಸಮಯಬೇಕು ಎಂದು ಕೇಳಿದೆ. ಇದಕ್ಕೆ ಪೊಲೀಸರು, ವಿಮಾನದಲ್ಲಿ ಮೂಲಕ ಹೋಗುವುದಾರೆ 2 ಗಂಟೆ, ರಸ್ತೆ ಮೂಲಕ ಹೋಗುವುದಾರೆ 12 ಗಂಟೆ ಬೇಕು ಎಂದು ಕೋರ್ಟ್​ಗೆ ಸ್ಪಷ್ಟಪಡಿಸಿದರು. ಆಗ 24 ಗಂಟೆಯೊಳಗೆ ಸಿಟಿ ರವಿ ಅವರನ್ನು ಕರೆದೊಯ್ಯಬೇಕು ಎಂದು ಆದೇಶ ನೀಡಿತು.

ಸಿಟಿ ರವಿ ಪರ ವಕೀಲ ಬಿ.ಎಂ ಜಿರಳಿ ಮಾಧ್ಯಮಗಳ ಬಳಿ ಮಾತನಾಡಿ, 5ನೇ ಜೆಎಂಎಫ್‌ಸಿ ಹಾಗೂ ಮುನ್ಸಿಪಲ್ ನ್ಯಾಯಾಧೀಶರು ಈ ಪ್ರಕರಣದ ಜಾಮೀನು ನೀಡಲು ನಮ್ಮ ವ್ಯಾಪ್ತಿಗೆ ಬರುವುದಿಲ್ಲ ಎಂಬಂತೆ ಆದೇಶ ಮಾಡಿದ್ದಾರೆ. ತುರ್ತಾಗಿ ಸಿಟಿ ರವಿ ಅವರನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಹಾಜರು ಮಾಡಬೇಕೆಂದು ತಿಳಿಸಿದ್ದಾರೆ. ನ್ಯಾಯಾಧೀಶರ ಆದೇಶ ಪ್ರತಿ ನನ್ನ ಕೈಗೆ ಇನ್ನೂ ಬಂದಿಲ್ಲ. ಆದೇಶ ಪ್ರತಿ ಸಿಕ್ಕ ನಂತರ ಹೆಚ್ಚಿನ ಪ್ರತಿಕ್ರಿಯೆ ನೀಡುವುದಾಗಿ ಹೇಳಿದರು.

ಸಿಟಿ ರವಿ ಮಾಧ್ಯಮಗಳೊಂದಿಗೆ ಮಾತನಾಡಿ ಯಾವುದೇ ನೋಟಿಸ್​ ನೀಡದೇ ಅಕ್ರಮವಾಗಿ ಬಂಧನದಲ್ಲಿಟ್ಟಿದ್ದಾರೆ. ರಾತ್ರಿಯಿಡೀ ನನ್ನನ್ನು ಬಂಧನದಲ್ಲಿಟ್ಟು ಸರ್ವಾಧಿಕಾರ ಮೆರೆದಿದ್ದಾರೆ. ಕಾಂಗ್ರೆಸ್​ ಸರ್ಕಾರ ಪೊಲೀಸರನ್ನು ದರ್ಬಳಕೆ ಮಾಡಿಕೊಂಡಿದೆ. ಸರ್ವಾಧಿಕಾರ ಬಹಳ ದಿನ ನಡೆಯಲ್ಲ, ಎಲ್ಲದಕ್ಕೂ ಕೊನೆಯಿರುತ್ತೆ. ಅತ್ತೆಗೊಂದು ಕಾಲ, ಸೊಸೆಗೊಂದು ಕಾಲ, ನಮಗೂ ಕಾಲ ಬರುತ್ತೆ ಎಂದು ಸಿಟಿ ರವಿ ತಿಳಿಸಿದರು.

ಬೆಳಗಾವಿ ಕಮಿಷನರ್ ಯಡಾ ಮಾರ್ಟಿನ್ ಮಾತನಾಡಿ, ಪ್ರಕರಣ ಬೆಳಗಾವಿಯಿಂದ ಬೆಂಗಳೂರಿಗೆ ವರ್ಗಾವಣೆ ಆಗಿದೆ. ಸಿಟಿ ರವಿ ಅವರಿಗೆ ಇನ್ನೂ ಬೇಲ್ ಸಿಕ್ಕಿಲ್ಲ. ಸಿಟಿ ರವಿ ಅವರು ಪೊಲೀಸ್ ವಶದಲ್ಲೇ ಇದ್ದಾರೆ. ಅವರನ್ನ ನಾವು ಬೆಂಗಳೂರಿನ ನ್ಯಾಯಲಯದ ಮುಂದೆ ಹಾಜರು ಪಡಿಸುತ್ತೇವೆ ಎಂದು ತಿಳಿಸಿದರು.

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ