Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಿಟಿ ರವಿ-ಲಕ್ಷ್ಮಿ ಹೆಬ್ಬಾಳ್ಕರ್ ವಿವಾದ ರಾಜ್ಯಪಾಲರ ಅಂಗಳಕ್ಕೆ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬೆಳಗಾವಿ ಅಧಿವೇಶನ ಸಂದರ್ಭದಲ್ಲಿ ಸಾಕಷ್ಟು ಗಮನ ಸೆಳೆದಿದ್ದ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಹಾಗೂ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಪ್ರಕರಣ ರಾಜಭವನದ ಕದ ತಟ್ಟಿದೆ.


ಪರಿಷತ್ ಸದಸ್ಯ ಸಿ.ಟಿ. ರವಿ ಹಾಗೂ ಇತರ ಬಿಜೆಪಿ ಮುಖಂಡರು ಸೋಮವಾರ ರಾಜಭವನಕ್ಕೆ ತೆರಳಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ದೂರು ದೂರು ನೀಡಿದ್ದಾರೆ.
ಬೆಳಗಾವಿಯಲ್ಲಿ ನಡೆದ ಘಟನಾವಳಿಗಳ ಬಗ್ಗೆ ಮಾಹಿತಿ ನೀಡಿದ್ದಾರೆ. ಈ ಪ್ರಕರಣದ ದಿಕ್ಕು ತಪ್ಪಿಸುತ್ತಿರುವ ಪೊಲೀಸರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಮನವಿ ಸಲ್ಲಿಸಿದ್ದಾರೆ.


ಇದೇ ಸಂದರ್ಭದಲ್ಲಿ ವಿಧಾನಸೌಧದಕ್ಕೆ ತೆರಳಿದ ಸಿ.ಟಿ.ರವಿ ಅವರು, ವಿಧಾನ ಪರಿಷತ್ ಕಾರ್ಯದರ್ಶಿ ಮಹಾಲಕ್ಷ್ಮಿ ಅವರನ್ನು ಭೇಟಿಯಾಗಿ ಬೆಳಗಾವಿ ಸುವರ್ಣಸೌಧದಲ್ಲಿ ನಡೆದ ಪ್ರಕರಣದ ಕುರಿತು ಚರ್ಚೆ ನಡೆಸಿದ ಪ್ರಸಂಗವು ಜರುಗಿತು.

ರಾಜ್ಯಪಾಲರಿಗೆ ದೂರು ಸಲ್ಲಿಸಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಸಿ.ಟಿ.ರವಿ, ಕಾಂಗ್ರೆಸ್ ಸರ್ಕಾರ ಹತ್ಯೆ ಹಾಗೂ ಆತ್ಮಹತ್ಯೆಗಳ ರಾಜ್ಯವನ್ನಾಗಿ ಮಾಡಿದೆ. ಜನಪ್ರತಿಯೊಬ್ಬರಿಗೆ ಎನ್​ಕೌಂಟರ್ ಮಾಡುವ ದುರುದ್ದೇಶ ಹೊಂದಿಯೇ ''ನನ್ನ ವಿರುದ್ಧ ದೂರು ದಾಖಲಾದ ತಕ್ಷಣ ಬಂಧಿಸಲಾಯಿತು. ಇಡೀ ರಾತ್ರಿ ಓಡಾಡಿಸಿ ನಿರ್ಜನ ಪ್ರದೇಶದಲ್ಲಿ ಎನ್​ಕೌಂಟರ್ ಮಾಡಿ ಮುಗಿಸುವ ದುರುದ್ದೇಶವೂ ಸರ್ಕಾರಕ್ಕಿತ್ತು. ಆದರೆ, ಪೊಲೀಸ್ ವ್ಯಾನ್​​ಗಳನ್ನು ಮಾಧ್ಯಮಗಳ ವಾಹನಗಳು ಹಿಂಬಾಲಿಸುತ್ತಿದ್ದ ಕಾರಣ ಅದು ಸಫಲವಾಗಲಿಲ್ಲ ಎಂದು ರಾಜ್ಯಪಾಲರಿಗೆ ಮಾಹಿತಿ ನೀಡಲಾಗಿದೆ ಎಂದು ರವಿ ಅವರು ತಿಳಿಸಿದರು.

ನಾನು ನೀಡಿದ ದೂರು ದಾಖಲಿಸಿಲ್ಲ:
ಪರಿಷತ್ ಕಾರ್ಯದರ್ಶಿ ‌ಅವರನ್ನು ಭೇಟಿ‌ಬಳಿಕ ಮಾತನಾಡಿದ ಸಿ.ಟಿ.ರವಿ ಅವರು
, ಸದನದೊಳಗೆ‌ನಡೆದಿರುವ ಪ್ರಕರಣವು ಸಭಾಪತಿ ಅವರ ವ್ಯಾಪ್ತಿಗೆ ಬರುತ್ತದೆ. ಅನುಮತಿ ಇಲ್ಲದೇ ಮೊಕದ್ದಮೆ‌ದಾಖಲು ಮಾಡಿದ್ದು ತಪ್ಪು. ಈಗ ಎಫ್‌ಎಸ್​​ಎಲ್​ಗೆ ಕಳಿಸುತ್ತೇನೆ ಅಂತಿದ್ದಾರೆ. ದುರುದ್ದೇಶದಿಂದ ಪೊಲೀಸರು ನನ್ನನ್ನು ಬಂಧಿಸಿದ್ದರು.

ಸದ್ದಾಂ‌ಮತ್ತು ಸಂಗಂ ಎಂಬವರು‌‌ನನ್ನ ಕಾರಿನ‌ಮೇಲೆ ಅಟ್ಯಾಕ್ ಮಾಡಿದರು. ನಮ್ಮ ಜೊತೆ ಇದ್ದ‌ಕಿಶೋರ್ ಪುತ್ತೂರು ‌ಸಭಾಪತಿ ಅವರಿಗೆ ದೂರು‌ನೀಡಿದ್ದಾರೆ. ಅವರನ್ನು ಅರೆಸ್ಟ್ ಮಾಡಿದರು. ಆದರೆ, ಅವರನ್ನು ಬಿಟ್ಟು ಕಳಿಸಿದ್ದಾರೆ. ನಾನು‌ಹೆಸರು‌ಹಾಕಿ‌ಕೊಟ್ಟರೂ ದೂರು ದಾಖಲಿಸಿಲ್ಲ ಎಂದು ಸಿಟಿ ರವಿ ಅವರು ಆರೋಪಿಸಿದರು.

ಡಿಜಿಪಿಗೂ ದೂರು:
ಪೊಲೀಸರು ನನ್ನ‌ನ್ನು ಕಿಡ್ನಾಪ್ ಮಾಡಿ ನಿಗೂಢ ಸ್ಥಳಗಳಿಗೆ ಕರೆದುಕೊ‌ಡು‌ಹೋಗಿದ್ದರು. ನನ್ನ‌ಫೇಕ್ ಎನ್​ಕೌಂಟರ್ ‌ಮಾಡಲು ಕರೆದುಕೊಂಡು ಹೋಗಿದ್ದರು. ಸಭಾಪತಿ ಅವರಿಗೆ‌ನನ್ನ ಮೇಲಿನ ದೌರ್ಜನ್ಯ
, ಹಕ್ಕು ಚ್ಯುತಿ ಬಗ್ಗೆ ದೂರು ನೀಡಿದ್ದೇನೆ. ಮಂತ್ರಿಗಳೇ ಆರೋಪಿತ ಸ್ಥಾನದಲ್ಲಿ‌ಇದ್ದಾರೆ.

ಬೆಳಗಾವಿ ಚಲೋ‌ಬಗ್ಗೆ ಪಕ್ಷ ನಿರ್ಧರಿಸಲಿದೆ. ನಾನು‌ಬೆಳಗಾವಿಗೆ ಹೋಗುತ್ತೇನೆ‌. ಅದೇನು‌ನಿಷೇಧಿತ ಪ್ರದೇಶ ಅಲ್ಲವಲ್ಲ?. ನನಗೆ ಸಹಕರಿಸಿದ ಎಲ್ಲರಿಗೂ ಧನ್ಯವಾದ ಹೇಳುವುದಕ್ಕೆ ಹೋಗುತ್ತೇನೆ. ನನ್ನ ಬಂಧನ ಮಾಡಿದ ತಪ್ಪಿತಸ್ಥ ಪೊಲೀಸರ ವಿರುದ್ಧ ಕ್ರಮ ಆಗಬೇಕು. ಈ‌ಬಗ್ಗೆ ಡಿಜಿಪಿ ಅವರಿಗೂ ದೂರು‌ಕೊಡುತ್ತೇನೆ ಎಂದು ರವಿ ಅವರು ಹೇಳಿದರು.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ