Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಅನಧಿಕೃತ ವಾಹನಗಳ ತೆರವು ಕಾರ್ಯಾಚರಣೆ ಆರಂಭ: ಸಚಿವ ಕೃಷ್ಣ ಬೈರೇಗೌಡ ಚಾಲನೆ;

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಪಾದಚಾರಿ ಮಾರ್ಗಗಳ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆಯ ಯಶಸ್ಸಿನ ಬೆನ್ನಲ್ಲೇ, ನಗರದ ರಸ್ತೆ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಅನಧಿಕೃತವಾಗಿ ನಿಲ್ಲಿಸಿರುವ ಬೀಡಾಡಿ ವಾಹನಗಳನ್ನು ತೆರವುಗೊಳಿಸುವ ವಿಶೇಷ ಕಾರ್ಯಾಚರಣೆಗೆ ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಶುಕ್ರವಾರ ಚಾಲನೆ ನೀಡಿದ್ದಾರೆ.

ನಗರದ ಕ್ವೀನ್ಸ್ ರಸ್ತೆಯಲ್ಲಿ ಅನಧಿಕೃತವಾಗಿ ನಿಲ್ಲಿಸಲಾಗಿದ್ದ ವಾಹನಗಳಿಗೆ ಖುದ್ದಾಗಿ ನೋಟಿಸ್ ಅಂಟಿಸುವ ಮೂಲಕ ಸಚಿವರು ಈ ಜಂಟಿ ಕಾರ್ಯಾಚರಣೆಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಹಾಗೂ ಸಂಚಾರ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Advertisement

1,581 ವಾಹನಗಳ ಗುರುತು: 1 ವಾರದ ಗಡುವು
ಸಾರ್ವಜನಿಕ ಸ್ಥಳಗಳನ್ನು ಅತಿಕ್ರಮಿಸಿಕೊಂಡು ಎಲ್ಲೆಂದರಲ್ಲಿ ನಿಲ್ಲಿಸಲಾಗಿರುವ ವಾಹನಗಳನ್ನು ತೆರವುಗೊಳಿಸುವಂತೆ ಹದಿನೈದು ದಿನಗಳ ಹಿಂದೆಯೇ ಸೂಚನೆ ನೀಡಲಾಗಿತ್ತು. ಆದರೂ ನಿಯಮ ಪಾಲಿಸದ ಹಿನ್ನೆಲೆಯಲ್ಲಿ ಈಗ ಕಠಿಣ ಕ್ರಮಕ್ಕೆ ಮುಂದಾಗಲಾಗಿದೆ. ನಗರದಲ್ಲಿ ಸದ್ಯ ಅಂತಹ ಸುಮಾರು
1,581 ಅನಧಿಕೃತ ವಾಹನಗಳನ್ನು ಪೊಲೀಸ್ ಇಲಾಖೆ ಗುರುತಿಸಿದ್ದು, ಅವುಗಳಿಗೆ ಒಂದು ವಾರದ ಗಡುವು ನೀಡಿ ನೋಟಿಸ್ ಅಂಟಿಸಲಾಗುತ್ತಿದೆ.

ವಾಹನಗಳನ್ನು ಮರಳಿ ಪಡೆಯುವುದು ಹೇಗೆ?:
ಪಾಲಿಕೆ ಮತ್ತು ಪೊಲೀಸ್ ಅಧಿಕಾರಿಗಳು ಜಂಟಿಯಾಗಿ ವಾಹನಗಳಿಗೆ ನೋಟಿಸ್ ಅಂಟಿಸುವ ಪ್ರಕ್ರಿಯೆ ನಡೆಸುತ್ತಿದ್ದು
, ಮಾಲೀಕರಿಗೆ ಈ ಕೆಳಗಿನ ನಿಯಮಗಳನ್ನು ಅನ್ವಯಿಸಲಾಗಿದೆ:

ಮೊದಲ ಹಂತ (1 ವಾರ): ನೋಟಿಸ್ ಅಂಟಿಸಿದ ಒಂದು ವಾರದೊಳಗೆ ಮಾಲೀಕರು ಬಂದು ನಿಗದಿತ ದಂಡದ ಮೊತ್ತ ಪಾವತಿಸಿ ವಾಹನವನ್ನು ಕೊಂಡೊಯ್ಯಬಹುದು.

ಎರಡನೇ ಹಂತ (ಟೋಯಿಂಗ್): ಒಂದು ವಾರದೊಳಗೆ ಬಾರದಿದ್ದರೆ ಆ ವಾಹನಗಳನ್ನು ಟೋಯಿಂಗ್ ಮಾಡಲಾಗುತ್ತದೆ. ನಂತರ ಮಾಲೀಕರು ದಂಡ ಹಾಗೂ ಟೋಯಿಂಗ್ ಶುಲ್ಕ ಎರಡನ್ನೂ ಪಾವತಿಸಿ ವಾಹನ ಬಿಡಿಸಿಕೊಳ್ಳಬೇಕಾಗುತ್ತದೆ.

ಅಂತಿಮ ಹಂತ (ಬಹಿರಂಗ ಹರಾಜು): ಟೋಯಿಂಗ್ ಮಾಡಿದ ಬಳಿಕವೂ ವಾಹನ ಕೊಂಡೊಯ್ಯದಿದ್ದರೆ, ಅಂತಹ ವಾಹನಗಳ ವಿವರಗಳನ್ನು ಪತ್ರಿಕೆಗಳಲ್ಲಿ ಜಾಹೀರಾತು ನೀಡಿ, 15 ದಿನಗಳ ನಂತರ ಬಹಿರಂಗ ಹರಾಜು ಮಾಡಲಾಗುವುದು ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.

ಪದೇ ಪದೆ ನಿಯಮ ಉಲ್ಲಂಘಿಸಿದರೆ ಕಠಿಣ ದಂಡ:
"
ಪಾದಚಾರಿ ಮಾರ್ಗಗಳನ್ನು ಮುಕ್ತಗೊಳಿಸುವುದು ಮತ್ತು ಸಾರ್ವಜನಿಕ ಸುರಕ್ಷತೆ ಹೆಚ್ಚಿಸುವುದು ನಮ್ಮ ಪ್ರಮುಖ ಆದ್ಯತೆಯಾಗಿದೆ. ಕೆಲವು ಮಾಲೀಕರು ಒಂದು ಕಡೆ ದಂಡ ಪಾವತಿಸಿ ವಾಹನ ಬಿಡಿಸಿಕೊಂಡು ಹೋಗಿ, ಮತ್ತೊಂದು ಸಾರ್ವಜನಿಕ ಸ್ಥಳದಲ್ಲಿ ತಂದು ನಿಲ್ಲಿಸುತ್ತಾರೆ. ಇಂತಹ ಚಾಳಿ ಮುಂದುವರಿಸಿದರೆ ಅವರಿಗೆ ಮತ್ತಷ್ಟು ಭಾರಿ ಪ್ರಮಾಣದ ದಂಡ ವಿಧಿಸುವಂತೆ ಪೊಲೀಸ್ ಇಲಾಖೆಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದೇನೆ" ಎಂದು ಸಚಿವ ಕೃಷ್ಣ ಬೈರೇಗೌಡ ಎಚ್ಚರಿಸಿದ್ದಾರೆ.

ಸಾರ್ವಜನಿಕರಿಗೂ ಅವಕಾಶ: ‘ಬಿಟಿಪಿ ಅಸ್ತ್ರಂ’ ಆ್ಯಪ್ ಬಳಸಿ
ಪೊಲೀಸ್ ಇಲಾಖೆ ಗುರುತಿಸಿರುವುದಕ್ಕಿಂತಲೂ ಹೆಚ್ಚಿನ ಸಂಖ್ಯೆಯಲ್ಲಿ ಇಂತಹ ವಾಹನಗಳು ನಗರದಲ್ಲಿ ಇರುವ ಸಾಧ್ಯತೆ ಇದೆ. ಹೀಗಾಗಿ, ಸಾರ್ವಜನಿಕ ಸ್ಥಳಗಳಲ್ಲಿ ಅನಧಿಕೃತವಾಗಿ ನಿಲ್ಲಿಸಿರುವ ವಾಹನಗಳು ಕಂಡುಬಂದರೆ ಸಾರ್ವಜನಿಕರು ತಾವೇ ನೇರವಾಗಿ 'ಬಿಟಿಪಿ ಅಸ್ತ್ರಂ' ಆ್ಯಪ್ ಮೂಲಕ ರಿಪೋರ್ಟ್ ಮಾಡಬಹುದು. ಅಂತಹ ವಾಹನಗಳ ಮೇಲೆಯೂ ತಕ್ಷಣವೇ ನೋಟಿಸ್ ಅಂಟಿಸಿ ಕ್ರಮ ಕೈಗೊಳ್ಳಲಾಗುವುದು. ಒಟ್ಟಾರೆಯಾಗಿ ಬೆಂಗಳೂರಿನಲ್ಲಿ ಪಾದಚಾರಿಗಳ ಸಂಚಾರಕ್ಕೆ ಆಗುತ್ತಿರುವ ಅಡಚಣೆಯನ್ನು ಸಂಪೂರ್ಣವಾಗಿ ನಿವಾರಿಸುವುದೇ ಈ ಕಾರ್ಯಾಚರಣೆಯ ಮುಖ್ಯ ಉದ್ದೇಶವಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮುಖ್ಯಮಂತ್ರಿಯವರ ತಾಂತ್ರಿಕ ಸಲಹೆಗಾರರಾಗಿ ನಿವೃತ್ತ ಕಾರ್ಯದರ್ಶಿ ಡಾ. ಕೆ. ಜೈಪ್ರಕಾಶ್ ನೇಮಕಜೆಎನ್‌ಯು ಪ್ರೊಫೆಸರ್ ಹಾಗೂ ಕಾಂಗ್ರೆಸ್ ಸಂಸದರಿಂದ ಲೈಂಗಿಕ ಕಿರುಕುಳ ಆರೋಪ, ಸೇವೆಯಿಂದ ವಜಾಆರ್‌ಬಿಐ ಬಿಗ್ ಶಾಕ್: ರೆಪೋ ದರ ಏರಿಕೆಯಿಂದ ಸಾಲಗಾರರಿಗೆ ಹೆಚ್ಚಳವಾದ ಇಎಂಐ ಬರೆ!ಎಸ್‌ಐಆರ್ ರದ್ದುಪಡಿಸುವಂತೆ ಜನತಾ ನ್ಯಾಯಾಲಯ ಸಮಾವೇಶ: ಮುಖ್ಯ ಚುನಾವಣಾ ಆಯುಕ್ತರ ರಾಜೀನಾಮೆಗೆ ಆಗ್ರಹ10 ಸಚಿವರ ವಿರುದ್ಧ ಸ್ಟಿಂಗ್ ಆಪರೇಷನ್ ಸುಪಾರಿ - ಶಾಸಕ ಗಣಿಗ ರವಿ ಸ್ಫೋಟಕ ಪೆನ್‌ಡ್ರೈವ್ ಬಾಂಬ್!ಸಚಿವರಿಗೆ ಬಲೆ ಬೀಳಿಸಲು ಯತ್ನ: ಸಿಎಂ ಎಚ್ಚರಿಕೆ ನೀಡಿದ್ದಾರೆ ಎಂದ ಸತೀಶ್ ಜಾರಕಿಹೊಳಿಕೇಂದ್ರದೊಂದಿಗೆ ಜಿಎಸ್‌ಟಿ ಸಭೆ: ರಾಜ್ಯದ ಬಾಕಿ ಹಣದ ಕುರಿತು 'ಸಿಹಿ ಸುದ್ದಿ' ನೀಡಿದ ಸಿಎಂ ಡಿ.ಕೆ ಶಿವಕುಮಾರ್ ಸುಳಿವು!ಪ್ರಜ್ವಲ್ ರೇವಣ್ಣ ಜೈಲಿನಲ್ಲಿ ಮೊಬೈಲ್ ಪತ್ತೆ ಪ್ರಕರಣ: ಹಿಂಡಲಗಾ ಜೈಲಿಗೆ ಸ್ಥಳಾಂತರಪ್ರತಿಭಟನೆ ಹೆಸರಲ್ಲಿ ಎಲ್ಲವನ್ನೂ ಬಂದ್ ಮಾಡಲು ಆಗದು: ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್ದಾವಣಗೆರೆಯಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ವಕೀಲರ ಪಟ್ಟು: ಮಧ್ಯಕರ್ನಾಟಕದಲ್ಲಿ ತೀವ್ರಗೊಂಡ ಹೋರಾಟ