Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆ

Advertisement
ಚಂದ್ರವಳ್ಳಿ ನ್ಯೂಸ್, ಚಿಕ್ಕಮಗಳೂರು:
ಸರ್ಕಾರವು ೨೦೨೫ರ ಮುಂಗಾರು ಹಂಗಾಮಿಗೆ ಜಿಲ್ಲೆಯಲ್ಲಿ ಮರುವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಯ ವ್ಯಾಪ್ತಿಗೆ ಚಿಕ್ಕಮಗಳೂರು
, ಕಡೂರು, ಕೊಪ್ಪ, ಮೂಡಿಗೆರೆ, ಎನ್.ಆರ್.ಪುರ, ಶೃಂಗೇರಿ, ತರೀಕೆರೆ, ಅಜ್ಜಂಪುರ ಹಾಗೂ ಕಳಸ ತಾಲ್ಲೂಕುಗಳನ್ನು ಒಳಪಡಿಸಲಾಗಿದೆ.

ವಿಮಾ ಯೋಜನೆಗೆ ಬೆಳೆ ಸಾಲ ಪಡೆದ ಹಾಗೂ ಸಾಲ ಪಡೆಯದ ರೈತರಿಗೆ ಮುಂಗಾರು ಹಂಗಾಮಿನ ತೋಟಗಾರಿಕೆ ಬೆಳೆಗಳಿಗೆ ಬ್ಯಾಂಕ್‌ಗಳಲ್ಲಿ ಅರ್ಜಿ ಸಲ್ಲಿಸಲು ಜುಲೈ ೩೧ ಅಂತಿಮ ದಿನವಾಗಿದೆ. ತೋಟಗಾರಿಕೆ ಬೆಳೆಗಳ ವಿಮಾ ಕಂತು ವಿಮಾ ಮೊತ್ತದ ಶೇ.೫ರಷ್ಟಿದೆ.

ಯೋಜನೆ ಅನುಷ್ಠಾನಕ್ಕೆ ಯೋಜನೆವಾರು, ಬೆಳೆವಾರು ರೈತರ ವಿವರಗಳನ್ನು ಆನ್‌ಲೈನ್ ಪೋರ್ಟಲ್ (sಚಿmಡಿಚಿಞshಚಿಟಿe.ಞಚಿಡಿಟಿಚಿಣಚಿಞಚಿ.gov.iಟಿ) ಮೂಲಕ ನೋಂದಾಯಿಸಲು ಆದೇಶಿಸಲಾಗಿದೆ. ಎಫ್‌ಆರ್‌ಯುಐಟಿಎಸ್ (ಫಟ್ಸ್) ತಂತ್ರಾಂಶದಲ್ಲಿ ರೈತರ ನೋಂದಣಿ ಕಡ್ಡಾಯವಾಗಿದೆ.

ಅಡಿಕೆ ಬೆಳೆಗೆ ವಿಮಾ ಮೊತ್ತ ೧,೨೮,೦೦೦ ರೂ. ಆಗಿದ್ದು, ವಿಮಾ ಮೊತ್ತ ೬,೪೦೦ ರೂ. ಆಗಿದೆ. ಕರಿಮೆಣಸು ಬೆಳೆಗೆ ವಿಮಾ ಮೊತ್ತ ೪೭,೦೦೦ ಆಗಿದ್ದು, ಕಂತು ೨,೩೫೦ ರೂ. ಆಗಿದೆ. ಹಸಿರು ಮೆಣಸಿನಕಾಯಿಗೆ ೭೧,೦೦೦ ರೂ.ವಿಮಾ ಮೊತ್ತ ಆಗಿದ್ದರೆ, ಕಂತು ೩,೫೫೦ ರೂ. ಆಗಿದೆ. ದಾಳಿಂಬೆಗೆ ೧,೨೭,೦೦೦ ರೂ. ವಿಮಾ ಮೊತ್ತ ಆಗಿದ್ದರೆ,

ಕಂತು ೬,೩೫೦ ರೂ. ಆಗಿದೆ. ಮಾವಿಗೆ ೮೦,೦೦೦ ರೂ. ವಿಮಾ ಮೊತ್ತವಾಗಿದ್ದರೆ, ಕಂತು ೪,೦೦೦ ರೂ. ಆಗಿದೆ. ಹೆಚ್ಚಿನ ಮಾಹಿತಿಗೆ ರೈತರು ಆಯಾ ತಾಲ್ಲೂಕಿನ ತೋಟಗಾರಿಕೆ ಇಲಾಖೆ ಅಧಿಕಾರಿಗಳನ್ನು ಹಾಗೂ ರೈತ ಸಂಪರ್ಕ ಕೇಂದ್ರದ ಅಧಿಕಾರಿಗಳನ್ನು ಸಂಪರ್ಕಿಸಬಹುದು ಎಂದು ತೋಟಗಾರಿಕೆ ಉಪ ನಿರ್ದೇಶಕಿ ಪೂರ್ಣಿಮಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

 

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ