ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಭ್ರಷ್ಟಾಚಾರದಲ್ಲಿ ನಂಬರ್-1 ಆಗಿರುವ ಕರ್ನಾಟಕ ಕಾಂಗ್ರೆಸ್ ಸರ್ಕಾರದ ಸಾಧನೆ ಕೇವಲ ಜಾಹೀರಾತುಗಳಿಗೆ ಮಾತ್ರವೇ ಸೀಮಿತವಾಗಿದೆ, ವಾಸ್ತವ ಸ್ಥಿತಿ ಬೇರೆ ಆಗಿದೆ ಎಂದು ಜೆಡಿಎಸ್ ಟೀಕಿಸಿದೆ.
ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಅವರುಗಳ ನೇತೃತ್ವದ 60% "ಕಮಿಷನ್‌ಸರ್ಕಾರ" ರಾಜ್ಯದ ಅಭಿವೃದ್ಧಿಯನ್ನು ಹಳ್ಳ ಹಿಡಿಸಿದೆ. ರಾಜ್ಯದಲ್ಲಿ ದಶಕಗಳ ಕಾಲ ಆಡಳಿತ ನಡೆಸಿದ್ದರೂ ಕಾಂಗ್ರೆಸ್‌ಉತ್ತಮ ರಸ್ತೆಗಳನ್ನು ನಿರ್ಮಿಸುವಲ್ಲಿ ವಿಫಲವಾಗಿದೆ ಎಂದು ಜೆಡಿಎಸ್ ಆರೋಪಿಸಿದೆ.
ಅಧಿಕಾರಕ್ಕೆ ಬಂದು 2.5 ವರ್ಷಗಳಾದರೂ ಗುಂಡಿ ಬಿದ್ದಿರುವ ರಸ್ತೆಗಳನ್ನು ಮುಚ್ಚಲು ಇದುವರೆಗೂ ಸಾಧ್ಯವಾಗಿಲ್ಲ. ಮೂಲಸೌಕರ್ಯಗಳು ಮರೀಚಿಕೆಯಾಗಿದೆ.
ಸರ್ಕಾರದ ಇಲಾಖೆಗಳಲ್ಲಿ ಯಾವುದೇ ಯೋಜನೆಗಳು, ಕಾಮಗಾರಿಗಳ ಬಿಲ್‌ಮಂಜೂರಾಗಬೇಕಾದರೇ CM 30% , DCM 30% ಕಮಿಷನ್‌ಕಡ್ಡಾಯಗೊಳಿಸಲಾಗಿದೆ ಎಂದು ಜೆಡಿಎಸ್ ಗಂಭೀರ ಆರೋಪ ಮಾಡಿದೆ.


