Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಶಾಸಕರ ಮೇಲೆ ಹಿಡಿತ ಕಳೆದುಕೊಳ್ಳುತ್ತಿರುವ ಸಿಎಂ ಮತ್ತು ಕಾಂಗ್ರೆಸ್

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯನವರೇ, ಬಹುಶಃ ನಿಮ್ಮ ಶಾಸಕರ ಮೇಲೆ ನೀವು ವಿಶ್ವಾಸವನ್ನು ಕಳೆದುಕೊಂಡಂತೆ ಕಾಣುತ್ತಿದೆ ಅದಕ್ಕಾಗಿಯೇ 50 ಕೋಟಿಗೆ ಅವರು ಮಾರಾಟವಾಗುತ್ತಿದ್ದಾರೆ ಎಂಬ ಕಪೋಲಕಲ್ಪಿತ ಆರೋಪ ಮಾಡುತ್ತಿದ್ದೀರಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಸಿಎಂ ವಿರುದ್ಧ ಟೀಕಾ ಪ್ರಹಾರ ಮಾಡಿದ್ದಾರೆ.

ಇದು ನೀವು ಪ್ರಜಾಪ್ರಭುತ್ವ ವ್ಯವಸ್ಥೆಗೆ ಹಾಗೂ ಶಾಸಕರನ್ನು ಮಾರಾಟದ ವಸ್ತುಗಳಂತೆ ವ್ಯಾಖ್ಯಾನಿಸಿ ಅವರಿಗೆ ಮಾಡುತ್ತಿರುವ ಅವಮಾನವಾಗಿದೆ. ನಿಮ್ಮ ಈ ಹೇಳಿಕೆ ಕಾಂಗ್ರೆಸ್ ಶಾಸಕರುಗಳನ್ನು ಅಂಕೆಯಲಿಟ್ಟುಕೊಳ್ಳಲು ಹಾಗೂ ನಿಮ್ಮನ್ನು ಸುತ್ತುವರೆದಿರುವ ಭ್ರಷ್ಟಾಚಾರದ ಹಗರಣಗಳನ್ನು ಮುಚ್ಚಿಕೊಳ್ಳಲು ಹೆಣೆದಿರುವ ಹತಾಶೆಯ ಸುಳ್ಳಿನ ಕಂತೆ ಎನ್ನುವುದು ಕನಿಷ್ಠ ರಾಜಕೀಯ ಜ್ಞಾನ ಇರುವವರಿಗೂ ಅರಿವಾಗುತ್ತದೆ ಎಂದು ಅವರು ಹಿಗ್ಗಾಮುಗ್ಗಾ ಟೀಕಿಸಿದ್ದಾರೆ.

ಸುಳ್ಳು, ಭಂಡತನ, ಕಪೋಲ ಕಲ್ಪಿತ ಸುದ್ದಿಗಳನ್ನು ಹರಿಬಿಡುವುದು ನಿಮ್ಮ ಹಾಗೂ ನಿಮ್ಮ ಪಕ್ಷದ ನಿತ್ಯ ಮಂತ್ರವಾಗಿದೆ. ನೀವು ನಡೆಸಿರುವ ಸರಣೀ ಹಗರಣಗಳ ಹಿನ್ನೆಲೆಯ ಉರುಳು ಬಿಗಿಯಾಗುತ್ತಿರುವಷ್ಟೂ ನಿದ್ದೆಗೆಡುತ್ತಿರುವ ನಿಮ್ಮ ಮನಸ್ಸು ಅಸ್ಥಿರಗೊಂಡಿದೆ ಈ ಹಿನ್ನಲೆಯಲ್ಲಿ ಪ್ರಚಲಿತ ಬೆಳವಣಿಗೆಯನ್ನು ವಿಚಲಿತಗೊಳಿಸುವುದು ಹೇಗೆ ಎಂಬುದರತ್ತಲೇ ನೀವು ನಿಗಾ ಇಟ್ಟಿರುವಂತೆ ಕಾಣುತ್ತಿದೆ.

ಮುಖ್ಯಮಂತ್ರಿಯಂತಹ ಜವಾಬ್ದಾರಿ ಸ್ಥಾನದಲ್ಲಿ ಕುಳಿತಿರುವ ನೀವು ಅದರ ಘನತೆಯನ್ನು ಕುಗ್ಗಿಸುವ ರೀತಿಯಲ್ಲಿ ನಡೆದುಕೊಳ್ಳುತ್ತಿದ್ದೀರಿ, ನಿಮ್ಮದೇ ಸರ್ಕಾರವಿದೆ, ನಿಮ್ಮದೇ ತನಿಖಾ ಸಂಸ್ಥೆಗಳಿವೆ, 50 ಕೋಟಿ ಆಮಿಷದ ಮೂಲ ಯಾವುದು ಎನ್ನುವುದನ್ನು ಜನರ ಮುಂದೆ ಬಹಿರಂಗಪಡಿಸುವುದು ನಿಮ್ಮ ನೈತಿಕ ಜವಾಬ್ದಾರಿಯಾಗಿರುತ್ತದೆ. ಇಲ್ಲದಿದ್ದರೆ ನಿಮ್ಮ ಹೇಳಿಕೆ ಪುಡಾರಿಗಳು ನೀಡುವ ಬಾಲಿಶ ರಾಜಕೀಯ ಹೇಳಿಕೆಯಾಗುತ್ತದೆಯಷ್ಟೆ ಎಂದು ವಿಜಯೇಂದ್ರ ಎಚ್ಚರಿಸಿದ್ದಾರೆ.

ಒಂದು ಕಡೆ ನಿಮ್ಮ ಪುತ್ರ ನ್ಯಾಯಾಂಗ ವ್ಯವಸ್ಥೆಯನ್ನೇ ಅಪಮಾನಿಸುವ ಆರೋಪ ಮಾಡಿದರೆ, ಮತ್ತೊಂದೆಡೆ ನೀವು ಅಧಿಕಾರ ಕಳೆದುಕೊಳ್ಳುವ ಭಯದಲ್ಲಿ ಹತಾಶೆಯಿಂದ ವರ್ತಿಸುತ್ತಿದ್ದೀರಿ. ನಿಮ್ಮನ್ನು ಅಧಿಕಾರದಿಂದ ಕೆಳಗಿಳಿಸಿದರೆ ಜನ ಸುಮ್ಮನೆ ಬಿಡುವುದಿಲ್ಲ ಎಂದು ಅಬ್ಬರಿಸುತ್ತಿದ್ದೀರಿ ಆದರೆ ವಾಸ್ತವ ಸಂಗತಿ ಏನೆಂದರೆ, ಕರ್ನಾಟಕದ ಜನತೆ ನಿಮ್ಮಂಥ ಭ್ರಷ್ಟ ಮುಖ್ಯಮಂತ್ರಿ ಇನ್ನೂ ಅಧಿಕಾರದಿಂದ ಕೆಳಗಿಳಿಯದೇ ಭಂಡತನ ಪ್ರದರ್ಶಿಸುತ್ತಿದ್ದಾರಲ್ಲ ಎಂದು ರಸ್ತೆಯಲ್ಲಿ ನಿಂತು ಮಾತನಾಡಿಕೊಳ್ಳುತ್ತಿದ್ದಾರೆ,

ನಿಮ್ಮ ಗುಪ್ತಚರ ಇಲಾಖೆ ಈ ವಿಷಯವನ್ನು ನಿಮಗೆ ಮುಟ್ಟಿಸಿರಲೇಬೇಕು. ಆದ್ದರಿಂದಲೇ ನೀವು ಇಷ್ಟೊಂದು ವಿಚಲಿತರಾದಂತೆ ಕಪೋಲ ಕಲ್ಪಿತ ಕಥೆಗಳನ್ನು ಸೃಷ್ಟಿಸಿಕೊಂಡು ಬಡ ಬಡಿಸುತ್ತಿದ್ದೀರಿ ಎಂದು ಬಿಜೆಪಿ ರಾಜ್ಯಾಧ್ಯಕ್ಷರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ನೀವು ಮುಖ್ಯಮಂತ್ರಿ ಸ್ಥಾನದಲ್ಲಿ ಕುಳಿತು 50 ಕೋಟಿ ಆಮಿಷದ ಗಂಭೀರ ಆರೋಪ ಮಾಡಿರುವ ಹಿನ್ನಲೆಯಲ್ಲಿ ಸರ್ಕಾರ ಬೀಳಿಸಲು ಸಾವಿರಾರು ಕೋಟಿ ಬಂಡವಾಳ ಹೂಡಲು ತಯಾರಾಗಿರುವವರು ಯಾರು? ಎಂಬುದು ಬಹಿರಂಗವಾಗಬೇಕಿದೆ ಈ ನಿಟ್ಟಿನಲ್ಲಿ ಇ.ಡಿ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡು ಕೂಡಲೇ ತನಿಖೆ ನಡೆಸುವುದು ತುರ್ತು ಅಗತ್ಯವಿದೆ, ರಾಜ್ಯದ ಜನತೆಗೆ ಸತ್ಯ ತಿಳಿಯಬೇಕಿದೆ ಎಂದು ವಿಜಯೇಂದ್ರ ಅವರು ಒತ್ತಾಯಿಸಿದ್ದಾರೆ.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ