Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಿಮಾನ ನಿಲ್ದಾಣಗಳ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲು ಸಿಎಂ ಮನವಿ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ದೆಹಲಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕೇಂದ್ರ ನಾಗರಿಕ ವಿಮಾನಯಾನ ಖಾತೆ ಸಚಿವ ಕಿಂಜರಾಪು ರಾಮಮೋಹನ ನಾಯ್ಡು ಅವರನ್ನು ಭೇಟಿ ಮಾಡಿ ಮೈಸೂರು
, ಕಲಬುರಗಿ, ವಿಜಯಪುರ ವಿಮಾನ ನಿಲ್ದಾಣಗಳ ಅಭಿವೃದ್ಧಿ ಕುರಿತು ಚರ್ಚಿಸಿ ಮನವಿ ಪತ್ರ ಸಲ್ಲಿಸಿದ್ದಾರೆ.

ರಾಜ್ಯ ಸರ್ಕಾರವು ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದೊಂದಿಗೆ ದಿನಾಂಕ 6-10-2005 ರಂದು ಒಪ್ಪಂದ ಮಾಡಿಕೊಂಡಿದೆ. ಒಪ್ಪಂದದ ನಿಯಮ ಬಿ (2) (v) ಪ್ರಕಾರ ಕಾರ್ಯನಿಯೋಜಕರು ವಿಮಾನ ನಿಲ್ದಾಣದ ವಿಸ್ತರಣೆಗಾಗಿ ಅಗತ್ಯ ವಿರುವ ಹೆಚ್ಚುವರಿ ಭೂಮಿಯನ್ನು ಸ್ವಾಧೀನಪಡಿಸಿಕೊಂಡು ಯಾವುದೇ ಋಣಭಾರವಿಲ್ಲದೆ ನಿಯೋಜಿತರಿಗೆ ಉಚಿತವಾಗಿ ವರ್ಗಾಯಿಸಬೇಕು.

ಅದರಂತೆ, ಅಗತ್ಯವಿರುವ ಭೂಮಿಯನ್ನು ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರಕ್ಕೆ ಉಚಿತವಾಗಿ ವರ್ಗಾಯಿಸಲಾಗಿದೆ. ಒಪ್ಪಂದದ ಷರತ್ತು ಬಿ 2 (VI) ಪ್ರಕಾರ, ನಿಯೋಜಿತರು ಮೈಸೂರು ವಿಮಾನ ನಿಲ್ದಾಣದ ಹೆಚ್ಚಿನ ಅಭಿವೃದ್ಧಿಯ ಬಂಡವಾಳ ವೆಚ್ಚ, ಮಾರ್ಪಾಡುಗಳು, ಬಲಪಡಿಸುವಿಕೆ ಮತ್ತು ಮೇಲ್ದರ್ಜೆಗೇರಿಸುವ ಎಲ್ಲಾ ವೆಚ್ಚಗಳನ್ನು ಭರಿಸಬೇಕು.

ಅದರಂತೆ, ಮೈಸೂರು ವಿಮಾನ ನಿಲ್ದಾಣದ ವಿಸ್ತರಣೆಗೆ ಅಗತ್ಯವಿರುವ ಬಂಡವಾಳ ಹಾಗೂ ಇನ್ನಿತರೆ ವೆಚ್ಚಗಳನ್ನು ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರವೇ ಭರಿಸಬೇಕಿದೆ. ಈ ಹಿನ್ನೆಲೆಯಲ್ಲಿ, ಮೈಸೂರು ವಿಮಾನ ನಿಲ್ದಾಣದ ರನ್ ವೇ ವಿಸ್ತರಣೆಗೆ ಅಗತ್ಯವಿರುವ 240 ಎಕರೆ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲು ರಾಜ್ಯ ಸರ್ಕಾರವು 319.14 ಕೋಟಿಗಳ ಅನುದಾನವನ್ನು ಬಿಡುಗಡೆ ಮಾಡಿದೆ. ಭೂ ಸ್ವಾಧೀನ ಪ್ರಕ್ರಿಯೆಯು ಅಂತಿಮ ಹಂತದಲ್ಲಿದೆ.

ನವೆಂಬರ್ 2024 ರಲ್ಲಿ ಕಾವೇರಿ ನೀರಾವರಿ ನಿಗಮ ನಿಯಮಿತವು(ಸಿ. ಎನ್.ಎನ್.ಎಲ್) ವಿಮಾನ ನಿಲ್ದಾಣ ವಿಸ್ತರಣೆ ಪ್ರದೇಶದಲ್ಲಿ ಎರಡು ಕಂದಕಗಳ ಮತ್ತು 7 ಕಾಲುವೆಗಳ ಸ್ಥಳಾಂತರಕ್ಕೆ ವರದಿ ಸಲ್ಲಿಸಿದ್ದು, ಇದಕ್ಕೆ 70 ಕೋಟಿಗಳ ವೆಚ್ಚವಾಗಲಿದೆ. ಅಂತೆಯೇ, ಕೆ.ಪಿ.ಟಿ.ಸಿಎಲ್ ಕೂಡ ಹೈ-ಟೆನ್ಷನ್ ಲೈನ್ ಗಳ ಮತ್ತು ಚೆಸ್ಕಾಂ ಲೋ ಟೆನ್ಶನ್ ವೈರ್ ಗಳ ಮಾರ್ಗ ಬದಲಾವಣೆಗೆ 31.82 ಕೋಟಿಗಳ ಅಂದಾಜು ವೆಚ್ಚವಾಗಲಿದೆ ಎಂದು ತಿಳಿಸಿದ್ದು, ಒಟ್ಟಾರೆ ಸದರಿ ಬೆಸ್ಕಾಂ ಮತ್ತು ನೀರಾವರಿ ನಿಗಮದ ಕಾಮಗಾರಿಗೆ 101.82 ಕೋಟಿಗಳ ಅನುದಾನದ ಅಗತ್ಯವಿದೆ ಎಂದು ತಿಳಿಸಿದ್ದಾರೆ.

ಆದ್ದರಿಂದ, ರಾಜ್ಯ ಸರ್ಕಾರವು ಮೈಸೂರು ವಿಮಾನ ನಿಲ್ದಾಣದ ರನ್ ವೇ ವಿಸ್ತರಣೆಗೆ 240 ಎಕರೆ ಭೂ ಸ್ವಾಧೀನಕ್ಕೆ ತಗಲುವ 319.14 ಕೋಟಿ ವೆಚ್ಚ ಭರಿಸಿದ್ದು, ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರವು ವಿಸ್ತರಣೆಯ ಅಂದಾಜು ವೆಚ್ಚ 101.84 ಕೋಟಿಗಳ ಯುಟಿಲಿಟಿ ಸ್ಥಳಾಂತರದ ಯೋಜನೆಯನ್ನು ರೂಪಿಸಿ ಶ್ರೀಘ್ರವಾಗಿ ಕಾಮಗಾರಿ ಕೈಗೆತ್ತಿಕೊಳ್ಳಬೇಕೆಂದು ಅವರು ಕೋರಿದ್ದಾರೆ.

ಕೈಗಾರಿಕಾ ಸಚಿವರಾದ ಎಂ.ಬಿ. ಪಾಟೀಲ್, ರಾಜಕೀಯ ಕಾರ್ಯದರ್ಶಿಗಳಾದ ಗೋವಿಂದರಾಜು, ಕಾನೂನು ಸಲಹೆಗಾರರಾದ ಪೊನ್ನಣ್ಣ, ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್ ಅವರು ಈ ಸಂದರ್ಭದಲ್ಲಿ ಹಾಜರಿದ್ದರು.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ