Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅನರ್ಹರ ಬಿಪಿಎಲ್ ಕಾರ್ಡ್ ಗಳು ಮಾತ್ರ ರದ್ದು-ಸಿಎಂ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಅನರ್ಹರ ಬಿಪಿಎಲ್ ಕಾರ್ಡ್ ಗಳನ್ನು ಮಾತ್ರ ರದ್ದು ಮಾಡಲಾಗುವುದು. ಅರ್ಹ ಬಡವರಿಗೆ ಕಾರ್ಡ್ ತಪ್ಪಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.


ಬೆಂಗಳೂರಿನ ಶಾಸಕರ ಭವನದ ಬಳಿ ಮಾಧ್ಯಮ ಪ್ರತಿನಿಧಿಗಳಿಗೆ ಮುಖ್ಯಮಂತ್ರಿ ಅವರು ಮಾತನಾಡಿ ಅನ್ನಭಾಗ್ಯ ಯೋಜನೆಯನ್ನು ಜಾರಿ ಮಾಡಿದ್ದು ನಾವೇ ಹೊರತು, ಬಿಜೆಪಿಯಾಗಲಿ, ಜೆಡಿಎಸ್ ಆಗಲಿ ನೀಡಿಲ್ಲ.

ಕಾರ್ಯಕ್ರಮ ಜಾರಿ ಮಾಡಿದ್ದು ಈ ಸಿದ್ದರಾಮಯ್ಯ. 2017ರಲ್ಲಿ 1 ರೂಪಾಯಿಗೆ ನೀಡುತ್ತಿದ್ದ ಅಕ್ಕಿಯನ್ನು ಉಚಿತವಾಗಿ ನೀಡಲಾಯಿತು. ಇದನ್ನು ಬಿಜೆಪಿ ಮಾಡಿಲ್ಲ. ಸುಮ್ಮನೆ  ಮಾತನಾಡುತ್ತಾರೆ. ಬಿಜೆಪಿ ಅಧಿಕಾರದಲ್ಲಿರುವ ಯಾವ ರಾಜ್ಯದಲ್ಲಿ ಇಂಥಾ ಯೋಜನೆಯನ್ನು ಜಾರಿ ಮಾಡಿದ್ದಾರೆ. ಗುಜರಾತ್, ಮಧ್ಯಪ್ರದೇಶ, ಬಿಹಾರ, ಉತ್ತರ ಪ್ರದೇಶ, ಹರಿಯಾಣ ಎಲ್ಲಿ ಮಾಡಿದ್ದಾರೆ? ತೋರಿಸಲಿ ಎಂದು ಸಿದ್ದರಾಮಯ್ಯ ಸವಾಲ್ ಹಾಕಿದರು.

ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಸರ್ಕಾರ ಕೇವಲ ಗ್ಯಾರಂಟಿ ಎನ್ನುತ್ತಿದೆ, ತೆರಿಗೆ ಹಣ ಎಲ್ಲಿ ಹೋಗುತ್ತಿದೆ ಎಂದು ಪ್ರಶ್ನಿಸಿದ್ದಾರೆ. ಹೆಚ್ ಡಿ.ಕುಮಾರಸ್ವಾಮಿ ಅವರು ಇರುವಾಗ ಗ್ಯಾರಂಟಿ ಯೋಜನೆಗಳನ್ನು ಕೊಟ್ಟಿದ್ದರೆ? ಅವರಿಗೆ ಮಾತನಾಡಲು ಯಾವ ನೈತಿಕ ಹಕ್ಕಿದೆ? ಎಂದು ಸಿಎಂ ತರಾಟೆ ತೆಗೆದುಕೊಂಡರು.

ನಾವು ರಾಜ್ಯದಿಂದ ಕೇಂದ್ರಕ್ಕೆ 4.50 ಲಕ್ಷ ಕೋಟಿ ತೆರಿಗೆ ಕಟ್ಟುತ್ತೇವೆ. ನಮಗೆ ವಾಪಸ್ಸು ಬರುವುದು 59 ಸಾವಿರ ಕೋಟಿ ಮಾತ್ರ. ಉಳಿದ ದುಡ್ಡು ಕೇಂದ್ರದಲ್ಲಿಯೇ ಇರುತ್ತದೆ. ಅದನ್ನು ರಾಜ್ಯಕ್ಕೆ ಕೊಡಿಸಲಿ. ಬರೀ ಮಾತನಾಡಿದರೆ ಪ್ರಯೋಜನವೇನು? ಹೆಚ್.ಡಿ.ದೇವೇಗೌಡರಾಗಲಿ, ಕುಮಾರಸ್ವಾಮಿಯವರಾಗಲಿ ಕರ್ನಾಟಕಕ್ಕೆ ಅನ್ಯಾಯವಾದಾಗ ಮಾತನಾಡಿದ್ದರೆಯೇ? ನಬಾರ್ಡ್ ವತಿಯಿಂದ ಕಳೆದ ವರ್ಷ 5,600 ಕೋಟಿ ಸಾಲ ರಾಜ್ಯಕ್ಕೆ ನೀಡಲಾಗಿತ್ತು.

ಈ ವರ್ಷ 2,340 ಕೋಟಿ ನೀಡಿದ್ದಾರೆ ಇದು ಅನ್ಯಾಯವಲ್ಲವೇ? ಸಾಲದ ಪ್ರಮಾಣವನ್ನು 58% ರಷ್ಟು ಕಡಿಮೆ ಮಾಡಿದ್ದಾರೆ. ಕುಮಾರಸ್ವಾಮಿ, ಪ್ರಹ್ಲಾದ ಜೋಷಿಯವರುಗಳು ಕರ್ನಾಟಕದ ಮಂತ್ರಿಗಳಾಗಿ ಏನು ಮಾಡುತ್ತಿದ್ದಾರೆ? ರೈತರಿಗೆ ಅನ್ಯಾಯ ಮಾಡಬೇಡಿ, ಇದು ದ್ರೋಹದ ಕೆಲಸ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಪತ್ರ ಬರೆದಿದ್ದೇನೆ ಎಂದು ಸಿದ್ದರಾಮಯ್ಯ ತಿಳಿಸಿದರು.

ನಾನು ಅಧಿಕಾರಕ್ಕೆ ಬಂದ ನಂತರ 5 ಲಕ್ಷದವರೆಗೆ ಬಡ್ಡಿ ರಹಿತ ಸಾಲ, 15 ಲಕ್ಷದವರೆಗೆ ಶೇಕಡಾ 3 ರಷ್ಟು ದರದಲ್ಲಿ ಸಾಲ ನೀಡಲಾಗಿದೆ. ನಬಾರ್ಡ್ ಹಣಕಾಸಿನ ಮಂತ್ರಿಗಳ ಕೆಳಗೆ ಬರುತ್ತದೆ. ನಿರ್ಮಲಾ ಸೀತಾರಾಮನ್ ಏನು ಮಾಡುತ್ತಿದ್ದಾರೆ? ಎಂದು ಸಿಎಂ ಖಾರವಾಗಿ ಪ್ರಶ್ನಿಸಿದರು.

2023-24 ರ ಬಜೆಟ್ ನಲ್ಲಿ ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ಅನುದಾನ ನೀಡುವುದಾಗಿ ಹೇಳಿದ್ದರು. ಕುಮಾರಸ್ವಾಮಿ ಈ ಬಗ್ಗೆ ಏನು ಕೇಳಿದ್ದಾರೆ? 15ನೇ ಹಣಕಾಸು ಆಯೋಗದಡಿ 11,595 ಕೋಟಿ ಘೋಷಣೆ ಮಾಡಿದ್ದರು. ಎಲ್ಲಿ ಕೊಟ್ಟರು? ಇದನ್ನು ನೀವು ಕೇಳುವುದಿಲ್ಲ.

56,000 ಕೋಟಿ ಗ್ಯಾರಂಟಿ ಯೋಜನೆಗಳನ್ನು ಕೊಡುತ್ತಿದ್ದೇವೆ. ಬಿಜೆಪಿ ಅಧಿಕಾರದಲ್ಲಿರುವ ರಾಜ್ಯ ಗಳಲ್ಲಿ ಏಕೆ ಕೊಡುತ್ತಿಲ್ಲ? ಎಂದು ಮುಖ್ಯಮಂತ್ರಿಗಳು ಪ್ರಶ್ನಿಸಿದರು.



 ಮಹಾರಾಷ್ಟ್ರ ಜನರನ್ನು ದಾರಿತಪ್ಪಿಸಿ ಮತಗಳಿಸಲು ಮಹಾರಾಷ್ಟ್ರ ಸರ್ಕಾರ ಸುಳ್ಳು ಜಾಹೀರಾತು ನೀಡಿದೆ. ಮಹಾರಾಷ್ಟ್ರ ಸರ್ಕಾರದ ವಿರುದ್ಧ ಕಾನೂನು ಹೋರಾಟ ನಡೆಸಲು ಪರಿಶೀಲನೆ ಮಾಡಲಾಗುತ್ತಿದೆ ಎಂದು ಇದೇ ವೇಳೆ ಎಚ್ಚರಿಸಿದರು.
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ