Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮುಖ್ಯಮಂತ್ರಿ ಬದಲಾವಣೆ ವಿಷಯ ಮಾಧ್ಯಮಗಳ ಸೃಷ್ಠಿ-ಸಿಎಂ

Advertisement
ಚಂದ್ರವಳ್ಳಿ ನ್ಯೂಸ್,  ಬೆಂಗಳೂರು :
ಮುಖ್ಯಮಂತ್ರಿಗಳ ಬದಲಾವಣೆಯ ವಿಷಯ ಮಾಧ್ಯಮಗಳ ಸೃಷ್ಠಿಯಾಗಿದ್ದು
, ಊಹಾಪೋಹಗಳಿಗೆ ಆಸ್ಪದವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದರು.

ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಅವರು ರಾಜ್ಯದಲ್ಲಿ ಶಾಸಕರನ್ನು ಭೇಟಿ ಮಾಡುತ್ತಿರುವ ಉದ್ದೇಶ ಮುಖ್ಯಮಂತ್ರಿಗಳ ಬದಲಾವಣೆಯ ಕುರಿತಲ್ಲ. ಇದನ್ನು ಸ್ವತಃ ಅವರೇ ಅಲ್ಲಗೆಳೆದ ಮೇಲೆ ಈ ವಿಷಯದ ಬಗ್ಗೆ ಊಹಾಪೋಹಗಳಿಗೆ ಆಸ್ಪದವಿಲ್ಲ. ಈ ಊಹಾಪೋಹಗಳು ಮಾಧ್ಯಮಗಳ ಸೃಷ್ಟಿಯಾಗಿರುವುದೇ ಹೊರತು, ಕಾಂಗ್ರೆಸ್ ವಲಯದಲ್ಲಿ  ಮುಖ್ಯಮಂತ್ರಿಗಳ ಬದಲಾವಣೆಯ ವಿಷಯ ಚರ್ಚೆಯೇ ಆಗಿಲ್ಲ ಎಂದು ಸಿಎಂ ತಿಳಿಸಿದರು.

ಈ ವಿಷಯದ ಬಗ್ಗೆ ಪಕ್ಷದ ವರಿಷ್ಠರ ತೀರ್ಮಾನವನ್ನು ಮುಖ್ಯಮಂತ್ರಿಗಳು ಹಾಗೂ ಉಪಮುಖ್ಯಮಂತ್ರಿಗಳು ಸಹಮತಿಸಬೇಕೆಂದು ಸ್ಪಷ್ಟ ಸೂಚನೆ ನೀಡಿದ್ದು, ವರಿಷ್ಠರ ತೀರ್ಮಾನಕ್ಕೆ ತಲೆಬಾಗುವುದಾಗಿ ನಾವಿಬ್ಬರೂ ಹಲವು ಬಾರಿ ತಿಳಿಸಿದ್ದೇವೆ. ಸರ್ಕಾರಕ್ಕೆ ಎರಡೂವರೆ ವರ್ಷವಾಗಿರುವ ಸಂದರ್ಭದಲ್ಲಿ ಅಧಿಕಾರ ಹಸ್ತಾಂತರದ ವಿಷಯವೇಳುವುದು ಸಹಜ.

ಆದರೆ ಈ ಬಗ್ಗೆ ಯಾವುದೇ ಒಪ್ಪಂದವಾಗಿಲ್ಲ. ಇತ್ತೀಚೆಗಷ್ಟೇ ಐದು ವರ್ಷವೂ ನಾನೇ ಸಿಎಂ ಆಗಿ ಮುಂದುವರಿಯಲಿದ್ದೇನೆಎಂದು ಸ್ಪಷ್ಟಪಡಿಸಿದ ಮೇಲೆ ಮಾಧ್ಯಮಗಳಲ್ಲಿ ಇಂತಹ ಗಾಳಿಸುದ್ದಿಗಳು ಏಕೆ ಹಬ್ಬಿಸಲಾಗುತ್ತಿದೆ? ಖುದ್ದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರೇ ಮುಖ್ಯಮಂತ್ರಿಗಳ ಸ್ಥಾನ ಖಾಲಿಯಿಲ್ಲವೆಂದು ತಿಳಿಸಿದ್ದಾರೆ.

ಕರ್ನಾಟಕದಲ್ಲಿ ಸಿಎಂ ಸ್ಥಾನ ಖಾಲಿ ಇಲ್ಲ ಎಂದು ನಾನು ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಬ್ಬರೂ ಪುನರುಚ್ಚರಿಸಿದ್ದೇವೆ. ಕರ್ನಾಟಕದ ಮುಖ್ಯಮಂತ್ರಿ ನಾನೇ. ಡಿ.ಕೆ.ಶಿವಕುಮಾರ್ ಆಗಲಿ ಅಥವಾ ಶಾಸಕರು ಯಾರೇ ಆಗಲಿ ಮುಖ್ಯಮಂತ್ರಿಯಾಗಬೇಕೆಂಬ ಆಸೆ ಇಟ್ಟುಕೊಂಡಿದ್ದರೆ ಅದರಲ್ಲ ತಪ್ಪೇನಿಲ್ಲ. ಕೆಲವು ಶಾಸಕರು ತಮ್ಮ ವೈಯಕ್ತಿಕ ಅಭಿಪ್ರಾಯಗಳನ್ನು ತಿಳಿಸುತ್ತಿದ್ದಾರೆಯೇ ಹೊರತು, ಅದು ಪಕ್ಷದ ತೀರ್ಮಾನವಲ್ಲ. ಅಧಿಕಾರ ಹಸ್ತಾಂತರದ ಊಹೆಗೆ ಯಾವುದೇ ಅರ್ಥವಿಲ್ಲ ಎಂದು ಸಿದ್ದರಾಮಯ್ಯ ತಿಳಿಸಿದರು.

ಸಚಿವ ಸಂಪುಟ ಪುನರ್ ರಚನೆ ಬಗ್ಗೆ ದೆಹಲಿಯ ನನ್ನ ಇಂದಿನ ಭೇಟಿಯಲ್ಲಿ ಯಾವುದೇ ಚರ್ಚೆಯಾಗುವುದಿಲ್ಲ. ನಮ್ಮ ನಾಯಕರಾದ ರಾಹುಲ್ ಗಾಂಧಿಯವರನ್ನು ಭೇಟಿ ಮಾಡುವ ಸಾಧ್ಯತೆಯಿಲ್ಲ. ರಣದೀಪ್ ಸಿಂಗ್ ಸುರ್ಜೆವಾಲಾ ಅವರನ್ನು ಸಂಜೆ ಭೇಟಿ ಮಾಡಿ, ಎಂಎಲ್‌ಸಿ, ನಿಗಮ ಮಂಡಳಿ ಅಧ್ಯಕ್ಷರ ನೇಮಕಾತಿ ಬಗ್ಗೆ ಚರ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ