Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಿಎಂ, ಡಿಸಿಎಂ, ಗೃಹ ಸಚಿವರು ನೈತಿಕ ಹೊಣೆಹೊತ್ತು ತಕ್ಷಣ ರಾಜೀನಾಮೆ ನೀಡಲಿ-ಜೆಡಿಎಸ್

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕ ಕಾಂಗ್ರೆಸ್ ಸರ್ಕಾರದ ಹುಚ್ಚು ಪ್ರಚಾರ ಪಡೆಯುವ ಗೀಳು 11ಕ್ಕೂ ಹೆಚ್ಚು ಮಂದಿಯನ್ನು ಬಲಿ ಪಡೆದಿದೆ ಎಂದು ಜೆಡಿಎಸ್ ಆರೋಪಿಸಿದೆ.

ಅಧಿಕಾರದ ಅಮಲಿನಲ್ಲಿರುವ ಪ್ರಚಾರಪ್ರಿಯ, ಜಾಹೀರಾತು ಪ್ರಿಯ ಕಾಂಗ್ರೆಸ್ ಸರ್ಕಾರ ಮಾಧ್ಯಮಗಳಲ್ಲಿ ರಾರಾಜಿಸಲು ಹೋಗಿ ಮುಗ್ಧ ಜನರ ಜೀವದ ಜೊತೆ ಚಲ್ಲಾಟವಾಡಿದೆ ಎಂದು ಜೆಡಿಎಸ್ ಟೀಕಾಪ್ರಹಾರ ಮಾಡಿದೆ.

ವಿಜಯದ ಪರೇಡ್‌ಗಳನ್ನು ಆಚರಿಸುವ ಸಮಯದಲ್ಲಿ ಸರಿಯಾದ ನಾಗರಿಕರ ಸುರಕ್ಷತಾ ಕ್ರಮಗಳನ್ನು, ಪೊಲೀಸ್ ಭದ್ರತಾ ವ್ಯವಸ್ಥೆ ಮತ್ತು ಜನಸಂದಣಿ ನಿರ್ವಹಣೆಯೊಂದಿಗೆ ಯೋಜಿಸಬೇಕು, ರಾಜಕೀಯ ಲಾಭಕ್ಕಾಗಿ ಆತುರಪಡಬಾರದು ಎಂಬುದಕ್ಕೆ ಕಾಲ್ತುಳಿತ ದುರಂತವೇ ಸಾಕ್ಷಿ ಎಂದು ಜೆಡಿಎಸ್ ಸರ್ಕಾರದ ವಿರುದ್ಧ ಹರಿಹಾಯ್ದಿದೆ.

ಈ ಹಿಂದೆ ಐಪಿಎಲ್ ಕಪ್ ಗೆದ್ದ ರಾಜ್ಯಗಳು ಎರಡು ಮೂರು ದಿನಗಳ ನಂತರ ವಿಜಯ ಪರೇಡ್ ನಡೆಸಿವೆ.
ಕೆಕೆಆರ್
2 ದಿನಗಳ ನಂತರ ಕೊಲ್ಕತ್ತಾದಲ್ಲಿ ವಿಜಯ ಪರೇಡ್ ನಡೆಸಿತು. ಮುಂಬೈ  2 ದಿನಗಳ ಬಳಿಕ ವಿಜಯೋತ್ಸವ ಮೆರವಣಿಗೆ ಆಯೋಜಿಸಿತು. ಸಿಎಸ್‌ಕೆ 3 ದಿನಗಳ ನಂತರ ವಿಜಯದ ಪರೇಡ್ ನಡೆಸಿತು.
 ಭಾರತ ತಂಡ 5 ದಿನಗಳ ನಂತರ ತಮ್ಮ ಟಿ -20 ವಿಶ್ವಕಪ್ ವಿಜಯೋತ್ಸವ ಮೆರವಣಿಗೆ ನಡೆಸಿತು ಎಂದು ಜೆಡಿಎಸ್ ತಿಳಿಸಿದೆ.

 ಲಕ್ಷಾಂತರ ಜನ ಸೇರುವ ಕ್ರೀಡಾಂಗಣದ ಬಳಿ ಆಗಿರುವ ಭದ್ರತಾ ಲೋಪಕ್ಕೆ ಕಾಂಗ್ರೆಸ್ ಸರ್ಕಾರವೇ ಹೊಣೆ.  ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ, ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರು ನೈತಿಕ ಹೊಣೆಹೊತ್ತು ತಕ್ಷಣ ರಾಜೀನಾಮೆ ನೀಡಬೇಕು ಎಂದು ಜೆಡಿಎಸ್ ಆಗ್ರಹ ಮಾಡಿದೆ.
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ