Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
National News

ಗುಂಡಿಯೂರು ಕುಖ್ಯಾತಿಗೆ ಸಿಎಂ, ಡಿಸಿಎಂ ಇಬ್ಬರು ಹೊಣೆಗಾರರು

 ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ನಾಡಪ್ರಭು ಕೆಂಪೇಗೌಡರು ಕಟ್ಟಿದ ಹೆಮ್ಮೆಯ ಬೆಂಗಳೂರು ನಗರದ ಪ್ರತಿಷ್ಠೆಗೆ ಘೋರ ಪೆಟ್ಟು ಬಿದ್ದಿದೆ. ಬೆಂಗಳೂರು ಈಗ ಗುಂಡಿಯೂರು ಆಗಿ ಕುಖ್ಯಾತಿ ಆಗುತ್ತಿರುವುದು ದುರ್ದೈವ ಎಂದು ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವ ಹೆಚ್.ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಇಬ್ಬರು ಈ ಅಪಮಾನಕ್ಕೆ ಹೊಣೆಗಾರರು. ಬೆಂಗಳೂರು ಮತ್ತು ಕರ್ನಾಟಕ ಇವತ್ತು ಅದಕ್ಷರು, ಭ್ರಷ್ಟರ ಕೈಯ್ಯಲ್ಲಿ ಸಿಕ್ಕಿ ನರಳುತ್ತಿವೆ. ಹೆಜ್ಜೆ ಹೆಜ್ಜೆಗೂ ಸಾವಿನ ಗುಂಡಿ. ಕಂಡೆಲ್ಲೆಲ್ಲ ಕಸದ ರಾಶಿ. ಗ್ರೇಟರ್ ಬೆಂಗಳೂರು ಎಂದರೆ ಇದೇನಾ? ಜಿಬಿಎ ಏನು ಮಾಡುತ್ತಿದೆ? ಜನರ ತೆರಿಗೆ ದುಡ್ಡು ನುಂಗಿ ಗೊರಕೆ ಹೊಡೆಯುತ್ತಿದೆಯಾ?

ಬೆಂಗಳೂರಿನಲ್ಲಿ ಆಡಳಿತದ ಘೋರ ವೈಫಲ್ಯವಾಗಿದೆ ಎಂದು ಉದ್ಯಮಿಗಳು ದೂರಿರುವುದು ಸರಿ ಇದೆ. ಅಂಗೈ ಹುಣ್ಣಿಗೆ ಕನ್ನಡಿ ಬೇಕಿಲ್ಲ. ಉದ್ಯಮಿಗಳು ಸರಕಾರದ ವೈಫಲ್ಯವನ್ನು ಇಷ್ಟು ಕಠಿಣವಾಗಿ ಎತ್ತಿ ತೋರಿಸಿರುವುದು ಇತಿಹಾಸದಲ್ಲಿ ಇದೇ ಮೊದಲು. ಈ ಸರಕಾರಕ್ಕೆ ಎಳ್ಳಷ್ಟೂ ಸಂಕೋಚ, ಆತ್ಮಾಭಿಮಾನವಿಲ್ಲ. ಕನ್ನಡಿಗರ ಸ್ವಾಭಿಮಾನವನ್ನು ಗುಂಡಿಪಾಲು ಮಾಡಿದೆ ಎಂದು ಕುಮಾರಸ್ವಾಮಿ ಸರ್ಕಾರದ ವಿರುದ್ಧ ವಾಗ್ದಾಳಿ ಮಾಡಿದ್ದಾರೆ.

ತೆರಿಗೆ ಹಾಕುವುದರಲ್ಲಿ ಸರಕಾರದ್ದು ರಾಕೆಟ್ ವೇಗ. ಗುಂಡಿ ಮುಚ್ಚುವುದರಲ್ಲಿ ಕೊನೇಪಕ್ಷ ಆಮೆ ವೇಗವೂ ಇಲ್ಲ. ಕೊಳ್ಳೆ ಹೊಡೆಯುವುದರಲ್ಲಿ ಇರುವ ಉನ್ಮಾದ, ಅಭಿವೃದ್ಧಿಯತ್ತ ವಿಪರೀತ ಉಪೇಕ್ಷೆ. ಚುನಾವಣಾ ಗ್ಯಾರಂಟಿಗಳಿಗೆ ರಾಜ್ಯದ ಅಭಿವೃದ್ಧಿ ಬಲಿಯಾಗಿ ಗ್ರೇಟರ್ ಬೆಂಗಳೂರು ಗಬ್ಬೆದ್ದು ನಾರುತ್ತಿದೆ!

ಗುಂಡಿ ಮುಚ್ಚುವುದಕ್ಕೆ ಬಿಡಿಗಾಸಿಲ್ಲದ ಸರ್ಕಾರ ಜನರಿಂದ ಕಿತ್ತುಕೊಳ್ಳುತ್ತಿರುವ ತೆರಿಗೆ ಹಣ ಏನು ಮಾಡುತ್ತಿದೆ? ಅದು ಯಾರ ಕಿಸೆ ಸೇರುತ್ತಿದೆ? ಇದಕ್ಕೆ ಉತ್ತರ ಬೇಕು ಎಂದು ಕುಮಾರಸ್ವಾಮಿ ಆಗ್ರಹ ಮಾಡಿದ್ದಾರೆ.

ಕಂಪನಿಗಳು ರಾಜ್ಯ ಸರ್ಕಾರದ ಮೇಲೆ ಭರವಸೆ ಕಳೆದುಕೊಂಡು ನೆರೆರಾಜ್ಯಗಳತ್ತ ವಲಸೆ ಹೋಗುತ್ತಿವೆ. ಆ ರಾಜ್ಯಗಳು ಇಂಥ ಸಮಯಕ್ಕೇ ಕಾಯುತ್ತಾ ರಿಯಾಯ್ತಿ ಮೇಲೆ ರಿಯಾಯ್ತಿಗಳನ್ನು ನೀಡುತ್ತಿವೆ.  ಭಂಡ ಸರ್ಕಾರಕ್ಕೆ ಅರ್ಥವಾಗುತ್ತಿಲ್ಲ. ಈ ಸರ್ಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ ಎಂದು ಕುಮಾರಸ್ವಾಮಿ ಟೀಕಾಪ್ರಹಾರ ಮಾಡಿದ್ದಾರೆ.

ಕಂಪನಿಗಳಿಗೆ ಮನವಿ ಮಾಡಿದ ಹೆಚ್ ಡಿಕೆ;
ನೀವು ಬೆಂಗಳೂರು ಬಿಡುವುದು ಬೇಡ. ಈ ನಗರಕ್ಕೆ ಮಹಾನ್ ಪರಂಪರೆ
, ಹಿನ್ನೆಲೆ ಇದೆ. ಈ ಎಮ್ಮೆ ಚರ್ಮದ ಸರ್ಕಾರಕ್ಕೆ ಪಾಠ ಕಲಿಸುತ್ತೇವೆ. ನಿಮ್ಮ ಜತೆ ನಾವು, ಇಡೀ ಕರ್ನಾಟಕದ ಜನತೆ ಇದ್ದೇವೆ. ಹೋಗುತ್ತೇವೆ ಎನ್ನುವ ಮಾತನ್ನು ಮನಸ್ಸಿನಿಂದ ತೆಗೆದುಬಿಡಿ. ನಾವೆಲ್ಲರೂ ಸೇರಿ ಬೆಂಗಳೂರು ನಗರವನ್ನು ಬದಲಿಸೋಣ ಎಂದು ಕುಮಾರಸ್ವಾಮಿ ಕಂಪನಿಗಳಿಗೆ ಮನವಿ ಮಾಡಿದ್ದಾರೆ.  ಬೆಂಗಳೂರಿನ ಗುಂಡಿಗಳಿಗೆ ಬೆಚ್ಚಿರುವ ಉದ್ಯಮಿಗಳು, ಕಂಪನಿಗಳ ನೌಕರರು, ರಸ್ತೆ ಗುಂಡಿಗಳ ವಿರುದ್ಧ ಸಮರ ಸಾರಿದ್ದಾರೆ.


ನಾವು ಬೆಂಗಳೂರನ್ನೇ ಬಿಟ್ಟೋಗ್ತೀವಿ ಎಂದು ಐಟಿ ದಿಗ್ಗಜರು ಒಂದು ಕಡೆ ಹೇಳುತ್ತಿದ್ದಾರೆ. ಇನ್ನೊಂದೆಡೆ ದುರಸ್ತಿಗೆ ಡಿಸಿಎಂ ಡಿಕೆ ಶಿವಕುಮಾರ್​ ಡೆಡ್​ಲೈನ್ ನೀಡಿದ್ದಾರೆ. ಸದ್ಯ ಈ ವಿಚಾರವಾಗಿ ಕೇಂದ್ರ ಸಚಿವ ಹೆಚ್​​ಡಿ ಕುಮಾರಸ್ವಾಮಿ ಅವರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.



ತೆರಿಗೆ ಹಾಕುವುದರಲ್ಲಿ ಸರ್ಕಾರದ್ದು ರಾಕೆಟ್ ವೇಗ. ಗುಂಡಿ ಮುಚ್ಚುವುದರಲ್ಲಿ ಕೊನೇಪಕ್ಷ ಆಮೆ ವೇಗವೂ ಇಲ್ಲ. ಕೊಳ್ಳೆ ಹೊಡೆಯುವುದರಲ್ಲಿ ಇರುವ ಉನ್ಮಾದ, ಅಭಿವೃದ್ಧಿಯತ್ತ ವಿಪರೀತ ಉಪೇಕ್ಷೆ. ಚುನಾವಣಾ ಗ್ಯಾರಂಟಿಗಳಿಗೆ ರಾಜ್ಯದ ಅಭಿವೃದ್ಧಿ ಬಲಿಯಾಗಿ ಗ್ರೇಟರ್ ಬೆಂಗಳೂರು ಗಬ್ಬೆದ್ದು ನಾರುತ್ತಿದೆ! ಎಂದು ಕುಮಾರಸ್ವಾಮಿ ಕಿಡಿಕಾರಿದ್ದಾರೆ.


ಗುಂಡಿ ಮುಚ್ಚುವುದಕ್ಕೆ ಬಿಡಿಗಾಸಿಲ್ಲದ ಸರಕಾರ ಜನರಿಂದ ಕಿತ್ತುಕೊಳ್ಳುತ್ತಿರುವ ತೆರಿಗೆ ಹಣ ಏನು ಮಾಡುತ್ತಿದೆ? ಅದು ಯಾರ ಕಿಸೆ ಸೇರುತ್ತಿದೆ? ಇದಕ್ಕೆ ಉತ್ತರ ಬೇಕು. ಕಂಪನಿಗಳು ರಾಜ್ಯ ಸರಕಾರದ ಮೇಲೆ ಭರವಸೆ ಕಳೆದುಕೊಂಡು ನೆರೆರಾಜ್ಯಗಳತ್ತ ವಲಸೆ ಹೋಗುತ್ತಿವೆ. ಭಂಡ ಸರ್ಕಾರಕ್ಕೆ ಅರ್ಥವಾಗುತ್ತಿಲ್ಲ. ಈ ಸರ್ಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ಹರಿಹಾಯ್ದಿದ್ದಾರೆ.

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಸಾಪ ಮಾಜಿ ಜಿಲ್ಲಾಧ್ಯಕ್ಷ, ಶಿಕ್ಷಣತಜ್ಞ ಡಾ. ಕೆ.ಎಂ. ವೀರೇಶ್ ಹೃದಯಾಘಾತದಿಂದ ನಿಧನದುರ್ಗಕ್ಕೆ ಹರಿದು ಬಂದ ಭದ್ರೆ- ಸೆ.24ರಂದು ಮುಖ್ಯಮಂತ್ರಿಗಳಿಂದ ಗಂಗಾಪೂಜೆ,  ಬೃಹತ್ ಸಾರ್ವಜನಿಕ ಸಮಾರಂಭಆರ್.ಎಲ್ ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ 22ನೇ ಘಟಿಕೋತ್ಸವ ಮತ್ತು ಪದವಿ ಪ್ರದಾನ ಕಾರ್ಯಕ್ರಮನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಬೈಕ್ ಸವಾರ ಸಾವುಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಸಭೆ ಹೋರಾಟಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಾತಿನಿಧ್ಯ ಕಡಿಮೆ- ಚಿಕ್ಕಪ್ಪನಹಳ್ಳಿ ಷಣ್ಮುಖಕುಂಚಿಟಿಗ ನೌಕರರ ಸಂಘಕ್ಕೆ ಸದಸ್ಯರಾಗಿ: ಎಸ್.ಕೆ ಲಕ್ಷ್ಮಣ್ಚಳವಳಿ ನೆನಪಾಗಿ ಉಳಿದ ‘ತೆಂಕ-ಬಡಗ’ಅಂತಾರಾಷ್ಟ್ರೀಯ ಶಾಂತಿ ದಿನ – ಮನದ ದ್ವೇಷ ಕರಗಿದಾಗಲೇ ಜಗದ ಶಾಂತಿ ಅರಳುವುದು!ಗಣಪತಿ ಮೆರವಣಿಗೆ ವೇಳೆ ಗಲಾಟೆ 7 ಯುವಕರ ವಿರುದ್ಧ ಸುಮೋಟೋ ಪ್ರಕರಣ ದಾಖಲು