LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಬರಪೀಡಿತ ಪ್ರದೇಶಗಳಿಗೆ ಸಿಎಂ, ಡಿಸಿಎಂ ಭೇಟಿ; ಒಣಗಿದ ಬೆಳೆ ಹಾನಿ ವೀಕ್ಷಣೆ​

Advertisement
Advertisement

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ರಾಜ್ಯದಲ್ಲಿ ಮುಂಗಾರು ಮಳೆ ಅಭಾವದಿಂದಾಗಿ ಎದುರಾಗಿರುವ ತೀವ್ರ ಬರ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರು ಶನಿವಾರ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ವಿವಿಧ ಬರಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

​ತಾಲೂಕಿನ ಯರಬಳ್ಳಿ, ತಾಳವಟ್ಟಿ ಹಾಗೂ ವದ್ದಿಕೆರೆ ಗ್ರಾಮಗಳ ರೈತರ ಜಮೀನುಗಳಿಗೆ ಖುದ್ದಾಗಿ ತೆರಳಿದ ನಾಯಕರು, ಮಳೆ ಇಲ್ಲದೆ ಒಣಗಿಹೋಗಿರುವ ಬೆಳೆಗಳನ್ನು ವೀಕ್ಷಿಸಿದರು. ಇದೇ ವೇಳೆ ಸ್ಥಳೀಯ ರೈತರೊಂದಿಗೆ ಮಾತುಕತೆ ನಡೆಸಿ, ಅವರು ಎದುರಿಸುತ್ತಿರುವ ಸಂಕಷ್ಟ ಹಾಗೂ ಸಮಸ್ಯೆಗಳನ್ನು ಆಲಿಸಿದರು.

​ಈ ಪರಿಶೀಲನಾ ಭೇಟಿಯ ಸಂದರ್ಭದಲ್ಲಿ ಸಚಿವರಾದ ಈಶ್ವರ ಖಂಡ್ರೆ, ಚಳ್ಳಕೆರೆ ಶಾಸಕರಾದ ಟಿ. ರಘುಮೂರ್ತಿ, ಬಿ.ಜಿ. ಗೋವಿಂದಪ್ಪ, ಕೆ.ಸಿ. ವೀರೇಂದ್ರ (ಪಪ್ಪಿ) ಹಾಗೂ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಸೇರಿದಂತೆ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಿದ್ಯುತ್ ಕೊರತೆ ಹಾಗೂ ರೈತರ ಸಮಸ್ಯೆ:  ಕೆ.ಎಸ್. ನವೀನ್ ಕಳವಳಭದ್ರಾ ಜಲಾಶಯದಿಂದ ವೇದಾವತಿ ನದಿಗೆ ನೀರು ಹರಿಸಿ: ಶಾಸಕ ಬಿ.ಜಿ.ಗೋವಿಂದಪ್ಪಭದ್ರಾ ಮೇಲ್ದಂಡೆ ಯೋಜನೆಗೆ ಕೆ.ಎಂ.ಇ.ಆರ್.ಸಿ ಯಿಂದ ಅನುದಾನಕ್ಕೆ ಶಾಸಕ ಎನ್.ವೈ. ಗೋಪಾಲಕೃಷ್ಣಫಸಲ್ ಬಿಮಾ ಯೋಜನೆಗೆ ದಿನಾಂಕ ವಿಸ್ತರಣೆಗೆ ಶಾಸಕ ಟಿ.ರಘುಮೂರ್ತಿ ಮನವಿರಾಷ್ಟ್ರೀಯ ವಿಪತ್ತು ಎಂದು ಘೋಷಣೆಗೆ ಪ್ರಧಾನ ಮಂತ್ರಿಗೆ ಪತ್ರ- ಡಾ.ಜಿ.ಪರಮೇಶ್ವರ್ಸರ್ಕಾರಿ ಶಾಲೆಗಳ ದತ್ತು ದತ್ತು ಸ್ವೀಕಾರ ಎಲ್ಲ ಖಾಸಗಿ ಶಾಲೆಗಳಿಗೆ ಅನ್ವಯವಾಗುವುದಿಲ್ಲ-ಡಿ.ಕೆ.ಶಿವಕುಮಾರ್ಭಾನುವಾರ ಭೂತ ನೆರಿಗೆ ಹಬ್ಬ ಆಚರಣೆಹೋರಾಟಗಾರರ ಮೇಲೆ ಹಲ್ಲೆ ಖಂಡಿಸಿ ಕನ್ನಡ ಜಾಗೃತ ಪರಿಷತ್ ಪ್ರತಿಭಟನೆ ಯೋಗ ಚಾಂಪಿಯನ್ ಸ್ಪರ್ಧೆಯಲ್ಲಿ ಆದಿತ್ಯ ಶಾಲೆಯ ವಿದ್ಯಾರ್ಥಿಗಳಿಗೆ ಚಿನ್ನ, ಬೆಳ್ಳಿ ಪದಕವಿಜೃಂಭಣೆಯಿಂದ ನಡೆದ ಆಷಾಡ ಏಕಾದಶಿ ಪೂಜೆ