Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಾದಕ ಮುಕ್ತ, ಸ್ವಸ್ಥ ಸಮಾಜ ನಿರ್ಮಾಣಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಕರೆ

Advertisement
Advertisement

ಚಂದ್ರವಳ್ಳಿ ನ್ಯೂಸ್, ​ಬೆಂಗಳೂರು:
ಮಾದಕ ದ್ರವ್ಯ ಸೇವನೆ ಹಾಗೂ ಕಳ್ಳಸಾಗಣೆಯಂತಹ ಕಾನೂನು ಬಾಹಿರ ಕೃತ್ಯಗಳನ್ನು ಸಂಪೂರ್ಣವಾಗಿ ಮಟ್ಟಹಾಕಿ
, ಸ್ವಸ್ಥ ಹಾಗೂ ಸುರಕ್ಷಿತ ಸಮಾಜವನ್ನು ನಿರ್ಮಿಸಲು ನಾವೆಲ್ಲರೂ ಒಟ್ಟಾಗಿ ಶ್ರಮಿಸಬೇಕು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕರೆ ನೀಡಿದ್ದಾರೆ.

​ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ಆಯೋಜಿಸಿದ್ದ ಅಂತಾರಾಷ್ಟ್ರೀಯ ಮಾದಕ ವಸ್ತು ವ್ಯಸನ ಮತ್ತು ಕಳ್ಳಸಾಗಾಣಿಕೆ ವಿರೋಧಿ ದಿನ - 2026’ರ ವಿಶೇಷ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

​ಯುವ ಪೀಳಿಗೆಯನ್ನು ರಕ್ಷಿಸುವುದು ನಮ್ಮ ಕರ್ತವ್ಯ
​ಸಮಾಜವನ್ನು ಕಾಡುತ್ತಿರುವ ಡ್ರಗ್ಸ್ ಪಿಡುಗಿನ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಅಗತ್ಯವನ್ನು ಪ್ರತಿಪಾದಿಸಿದ ಡಿ.ಕೆ. ಶಿವಕುಮಾರ್ ಅವರು
, ಯುವ ಸಮುದಾಯವನ್ನು ಈ ವ್ಯಸನದಿಂದ ಮುಕ್ತಗೊಳಿಸಿ ಅವರ ಭವಿಷ್ಯವನ್ನು ಸುರಕ್ಷಿತವಾಗಿಸುವುದು ಸರ್ಕಾರದ ಆದ್ಯತೆಯಾಗಿದೆ ಎಂದು ತಿಳಿಸಿದರು.

ಮಾದಕ ದ್ರವ್ಯ ಜಾಲವನ್ನು ಬೇರುಸಹಿತ ಕಿತ್ತೊಗೆಯಲು ಪೊಲೀಸ್ ಇಲಾಖೆಯೊಂದಿಗೆ ಸಾರ್ವಜನಿಕರೂ ಕೈಜೋಡಿಸಬೇಕು ಎಂದು ಅವರು ಮನವಿ ಮಾಡಿದರು.

​​​ಈ ಮಹತ್ವದ ಜಾಗೃತಿ ಕಾರ್ಯಕ್ರಮದಲ್ಲಿ ಸರ್ಕಾರದ ಪ್ರಮುಖರು ಹಾಗೂ ಪೊಲೀಸ್ ಇಲಾಖೆಯ ಉನ್ನತಾಧಿಕಾರಿಗಳು ಉಪಸ್ಥಿತರಿದ್ದರು.

​ಗೃಹ ಸಚಿವ ಪ್ರಿಯಾಂಕ್ ಖರ್ಗೆ, ​ಶಾಸಕ ರಿಜ್ವಾನ್ ಅರ್ಷದ್, ​ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಎಂ.ಎ. ಸಲೀಂ, ​ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ರಾಜೇಂದರ್ ಕುಮಾರ್ ಕಟಾರಿಯಾ, ​ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್, ​ಎಡಿಜಿಪಿ ಆರ್. ಹಿತೇಂದ್ರ, ​ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳು ಹಾಗೂ ನೂರಾರು ಸಿಬ್ಬಂದಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾದಕ ಮುಕ್ತ ಸಮಾಜದ ನಿರ್ಮಾಣಕ್ಕಾಗಿ ಸಂಕಲ್ಪ ಮಾಡಿದರು.

 

 

 

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆಂಗಳೂರು ನಿಧಿ ಹಂಚಿಕೆಯಲ್ಲಿ ತಾರತಮ್ಯ: ಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧ ಆರ್‌ಅಶೋಕ್ ತೀವ್ರ ವಾಗ್ದಾಳಿ!ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಅಪಾರದರ್ಶಕತೆ: ಚುನಾವಣಾ ಆಯೋಗಕ್ಕೆ ಕರ್ನಾಟಕ ಸಚಿವ ಸಂಪುಟದ ಬಿಗಿ ಷರತ್ತುಗಳು!ಖ್ಯಾತ ಹಿರಿಯ ಚಿತ್ರ ಕಲಾವಿದ ಕೆ.ಟಿ ಶಿವಪ್ರಸಾದ್ ನಿಧನ!ಧರ್ಮಸ್ಥಳ ಮಂಜುನಾಥನ ಸನ್ನಿಧಿಯಲ್ಲಿ ಬೇಲೂರು ಶಾಸಕ ಆಣೆ ಪ್ರಮಾಣ!ಜಿಲ್ಲಾಸ್ಪತ್ರೆಯಲ್ಲಿ ಭೀಕರ ಸಿಲಿಂಡರ್ ಸ್ಫೋಟ: ಕೋಟ್ಯಂತರ ಮೌಲ್ಯದ ಸಲಕರಣೆ ಭಸ್ಮ, ಕೂದಲೆಳೆ ಅಂತರದಲ್ಲಿ ತಪ್ಪಿದ ಪ್ರಾಣಾಪಾಯ!ವಿಚಾರಣೆ ನೆಪದಲ್ಲಿ ಅಪ್ರಾಪ್ತರಿಗೆ ಲೈಂಗಿಕ ಕಿರುಕುಳ: ಪಿಎಸ್‌ಐ ಪೋಕ್ಸೋ ಕಾಯ್ದೆಯಡಿ ಬಂಧನ!ಬಿಡದಿ ಬೃಹತ್ ಉಪನಗರ ಯೋಜನೆಗೆ ಹೈಕೋರ್ಟ್ ಬ್ರೇಕ್? ಸರ್ಕಾರದ ವಿರುದ್ಧ ಸಲ್ಲಿಕೆಯಾಯ್ತು ಸಾರ್ವಜನಿಕ ಹಿತಾಸಕ್ತಿ ಅರ್ಜಿ!ಶತಮಾನದ ಸಾಮಾಜಿಕ ಅಂತರಕ್ಕೆ ಬ್ರೇಕ್: ಸೌಹಾರ್ದಯುತವಾಗಿ ದೇವಸ್ಥಾನ ಪ್ರವೇಶಿಸಿದ ದಲಿತರು!ಹದಿಹರೆಯ ವಯಸ್ಸಿನ ಆವೇಗಕ್ಕೆ ವಿವೇಕದ ಅಂಕುಶ ಅಗತ್ಯಅಂತರರಾಷ್ಟ್ರೀಯ ಚಿತ್ರಕಲಾವಿದ ಕೆ.ಟಿ ಶಿವಪ್ರಸಾದ್ ನಿಧನ