ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕ ಒಲಿಂಪಿಕ್ ಸಂಸ್ಥೆ (ಕೆಒಎ) ವತಿಯಿಂದ ಆಯೋಜಿಸಲಾಗಿರುವ ‘5ನೇ ಮಿನಿ ಕರ್ನಾಟಕ ಕ್ರೀಡಾಕೂಟ–2026’ಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಇಂದು ನಗರದ ಕಂಠೀರವ ಕ್ರೀಡಾಂಗಣದಲ್ಲಿ ಅಧಿಕೃತವಾಗಿ ಚಾಲನೆ ನೀಡಿದರು.
ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದ ಅವರು, ಪಂದ್ಯಾವಳಿಯಲ್ಲಿ ಭಾಗವಹಿಸಿರುವ ಎಲ್ಲಾ ಯುವ ಕ್ರೀಡಾಪಟುಗಳಿಗೆ ಶುಭ ಹಾರೈಸಿದರು.
ಈ ಉದ್ಘಾಟನಾ ಸಮಾರಂಭದಲ್ಲಿ ಸಚಿವರಾದ ಕೆ.ಎಂ. ಶಿವಲಿಂಗೇಗೌಡ, ವಿಧಾನ ಪರಿಷತ್ ಸದಸ್ಯರು ಹಾಗೂ ಕರ್ನಾಟಕ ಒಲಿಂಪಿಕ್ ಸಂಸ್ಥೆಯ (ಕೆಒಎ) ಅಧ್ಯಕ್ಷ ಕೆ. ಗೋವಿಂದರಾಜ್ ಮತ್ತು ಖ್ಯಾತ ಚಲನಚಿತ್ರ ನಟ ಪ್ರೇಮ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.




