Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ತಿರುಮಲ ಪ್ರಥಮ ಆರತಿ ಸ್ವೀಕಾರಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಅವರ ಹೊಸ ಶಿಷ್ಟಾಚಾರ ಪ್ರಸ್ತಾಪ ಸ್ವಾಗತಾರ್ಹ

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ತಿರುಮಲ ತಿರುಪತಿ ದೇವಸ್ಥಾನದಲ್ಲಿ ಶ್ರೀ ವೆಂಕಟೇಶ್ವರ ಸ್ವಾಮಿಗೆ ನೆರವೇರಿಸುವ *ಪ್ರಥಮ ಆರತಿ* ಸ್ವೀಕಾರಕ್ಕೆ ಸಂಬಂಧಿಸಿದಂತೆ *ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್* ಅವರು ಪ್ರಸ್ತಾಪಿಸಿರುವ ಹೊಸ ಶಿಷ್ಟಾಚಾರ ವ್ಯವಸ್ಥೆ ಐತಿಹಾಸಿಕ ಪರಂಪರೆಗೆ ಗೌರವ ಸಲ್ಲಿಸುವ ಮಹತ್ವದ ಹೆಜ್ಜೆಯಾಗಿದ್ದು, ಇದು ಸ್ವಾಗತಾರ್ಹ ಬೆಳವಣಿಗೆಯಾಗಿದೆ. ಆದರೆ, ಈ ಗೌರವವನ್ನು ಕೇವಲ ರಾಜಕೀಯ ಪ್ರತಿನಿಧಿಗಳಿಗೆ ಮಾತ್ರ ಸೀಮಿತಗೊಳಿಸದೆ, *ಆ ದಿನ ತಿರುಮಲದಲ್ಲಿ ಉಪಸ್ಥಿತರಿರುವ ಕರ್ನಾಟಕದ ಪ್ರಮುಖ ಗಣ್ಯರೊಬ್ಬರಿಗೆ* ಅವಕಾಶ ಕಲ್ಪಿಸುವ ರೀತಿಯಲ್ಲಿ ಶಿಷ್ಟಾಚಾರ ರೂಪಿಸುವುದು ಸೂಕ್ತ ಎಂದು *ಟಿಟಿಡಿ ಆಡಳಿತ ಮಂಡಳಿ ಸದಸ್ಯ ಎಸ್. ನರೇಶ್ ಕುಮಾರ್* ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ವಿಜಯನಗರ ಸಾಮ್ರಾಜ್ಯದ ನಂತರ ಮೈಸೂರು ಮಹಾರಾಜರು ತಿರುಪತಿ ದೇವಸ್ಥಾನಕ್ಕೆ ನೀಡಿದ ಸೇವೆಯ ಸ್ಮರಣಾರ್ಥ, *ಸುಪ್ರಭಾತ ಸೇವೆಯ ನಂತರ ನಡೆಯುವ ಪ್ರಥಮ ಆರತಿ ಹಾಗೂ ನಿತ್ಯಾರತಿ ಸ್ವೀಕರಿಸುವ ಗೌರವವನ್ನು ಐತಿಹಾಸಿಕವಾಗಿ ಮೈಸೂರು ಮಹಾರಾಜರಿಗೆ ನೀಡಲಾಗುತ್ತಿತ್ತು* . ಮೈಸೂರು ಸಂಸ್ಥಾನದ ಆಡಳಿತ ಅಂತ್ಯಗೊಂಡ ನಂತರ ಈ ಗೌರವ *ಕರ್ನಾಟಕ ರಾಜ್ಯದ ಹೆಸರಿನಲ್ಲಿ ಮುಂದುವರಿಯುತ್ತಿದ್ದು*, ಇಂದಿಗೂ ದೇವರ ಆರತಿಗೆ ಬಳಸುವ ದೀಪ ಮತ್ತು ತುಪ್ಪವನ್ನು ಮೈಸೂರು ಮಹಾರಾಜರ ಹೆಸರಿನಲ್ಲೇ ಸಮರ್ಪಿಸಲಾಗುತ್ತಿದೆ.

Advertisement

ಹಿಂದೆ ಮೈಸೂರು ಮಹಾರಾಜರು ದೇವಸ್ಥಾನಕ್ಕೆ ಆಗಮಿಸಲು ಸಾಧ್ಯವಾಗದ ಸಂದರ್ಭಗಳಲ್ಲಿ ಅವರ ಪರವಾಗಿ ದಿವಾನರು ಅಥವಾ ಸರ್ಕಾರದ ಹಿರಿಯ ಪ್ರತಿನಿಧಿಗಳು ಆರತಿಯಲ್ಲಿ ಪಾಲ್ಗೊಳ್ಳುತ್ತಿದ್ದರು. ಆದರೆ ಪ್ರಸ್ತುತ ಈ ಕುರಿತು ಯಾವುದೇ ಸ್ಪಷ್ಟ ಆಡಳಿತಾತ್ಮಕ ಶಿಷ್ಟಾಚಾರ ಇಲ್ಲದಿರುವುದರಿಂದ, ಮಹಾರಾಜರ ಅನುಪಸ್ಥಿತಿಯಲ್ಲಿ ಮುಜರಾಯಿ ಇಲಾಖೆಯ ಅಧಿಕಾರಿಗಳು ಆರತಿ ಸ್ವೀಕರಿಸುವ ವ್ಯವಸ್ಥೆ ಜಾರಿಯಲ್ಲಿದೆ.

ಈ ಹಿನ್ನೆಲೆಯಲ್ಲಿ, *ಈ ಶಿಷ್ಟಾಚಾರವನ್ನು ಮರುಪರಿಶೀಲಿಸುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಪ್ರಸ್ತಾಪ ಸ್ವಾಗತಾರ್ಹವಾಗಿದೆ. ಆದರೆ, ಈ ಐತಿಹಾಸಿಕ ಗೌರವವನ್ನು ಕೇವಲ ರಾಜಕೀಯ ಹುದ್ದೆಗಳಿಗೆ ಸೀಮಿತಗೊಳಿಸದೆ, ಆ ದಿನ ತಿರುಮಲದಲ್ಲಿ ಉಪಸ್ಥಿತರಿರುವ ರಾಜ್ಯದ ಪ್ರಮುಖ ಗಣ್ಯರೊಬ್ಬರಿಗೆ ರಾಜ್ಯದ ಪರವಾಗಿ ಆರತಿ ಸ್ವೀಕರಿಸುವ ಅವಕಾಶ ಕಲ್ಪಿಸುವ ರೀತಿಯಲ್ಲಿ ನಿಯಮ ರೂಪಿಸುವುದು ಹೆಚ್ಚು ಸೂಕ್ತವಾಗಲಿದೆ* ಎಂದು ನರೇಶ್ ಕುಮಾರ್ ಅಭಿಪ್ರಾಯಪಟ್ಟಿದ್ದಾರೆ.

*"ಕಾಂಗ್ರೆಸ್ ಪಕ್ಷದ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಇಂತಹ ಐತಿಹಾಸಿಕ ಸಂಪ್ರದಾಯಗಳು ಹಾಗೂ ಧಾರ್ಮಿಕ ಶಿಷ್ಟಾಚಾರಗಳ ಬಗ್ಗೆ ಆಸಕ್ತಿ ವಹಿಸಿ, ಅವುಗಳಿಗೆ ಸೂಕ್ತವಾದ ಆಡಳಿತಾತ್ಮಕ ವ್ಯವಸ್ಥೆ ಕಲ್ಪಿಸಲು ಮುಂದಾಗಿರುವುದು ಸ್ವಾಗತಾರ್ಹ ಬೆಳವಣಿಗೆಯಾಗಿದೆ,"* ಎಂದು ಅವರು ಹೇಳಿದ್ದಾರೆ.

ಇಂತಹ ಶಿಷ್ಟಾಚಾರದ ವ್ಯವಸ್ಥೆಯನ್ನು ಕೇವಲ ಟಿಟಿಡಿ ಅಧೀನದ ದೇವಾಲಯಗಳಿಗೆ ಮಾತ್ರ ಸೀಮಿತಗೊಳಿಸದೆ, *ಕರ್ನಾಟಕದ ಪ್ರಮುಖ ದೇವಾಲಯಗಳಲ್ಲಿಯೂ ಐತಿಹಾಸಿಕ ಸಂಪ್ರದಾಯಗಳಿಗೆ ಅನುಗುಣವಾಗಿ ಸೂಕ್ತ ಶಿಷ್ಟಾಚಾರ ರೂಪಿಸುವ ಕುರಿತು ಸರ್ಕಾರ ಚಿಂತನೆ ನಡೆಸಬೇಕಾಗಿದೆ* ಎಂದು ಅವರು ಸಲಹೆ ನೀಡಿದ್ದಾರೆ.

ಟಿಟಿಡಿ ಸದಸ್ಯ ಭಾನುಪ್ರಕಾಶ್ ಅವರು ಉಪಮುಖ್ಯಮಂತ್ರಿಗಳ ಹೇಳಿಕೆಯ ಹಿನ್ನೆಲೆಯನ್ನು ಸಮರ್ಪಕವಾಗಿ ಅರ್ಥೈಸಿಕೊಳ್ಳದೆ ಪ್ರತಿಕ್ರಿಯಿಸಿರುವುದು ಸರಿಯಲ್ಲ. ಕರ್ನಾಟಕ ಸರ್ಕಾರ ಈ ಕುರಿತು ಅಧಿಕೃತ ಪ್ರಸ್ತಾವನೆಯನ್ನು ಟಿಟಿಡಿ ಆಡಳಿತ ಮಂಡಳಿಗೆ ಸಲ್ಲಿಸಿದಲ್ಲಿ, ದೇವಸ್ಥಾನದ ಸಂಪ್ರದಾಯ, ಐತಿಹಾಸಿಕ ಹಿನ್ನೆಲೆ ಹಾಗೂ ಜಾರಿಯಲ್ಲಿರುವ ನಿಯಮಾವಳಿಗಳನ್ನು ಪರಿಗಣಿಸಿ ಟಿಟಿಡಿ ಆಡಳಿತ ಮಂಡಳಿ ಸಕಾರಾತ್ಮಕವಾಗಿ ಪರಿಶೀಲಿಸಲಿದೆ,"* ಎಂದು *ಎಸ್. ನರೇಶ್ ಕುಮಾರ್* ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಸಾಪ ಮಾಜಿ ಜಿಲ್ಲಾಧ್ಯಕ್ಷ, ಶಿಕ್ಷಣತಜ್ಞ ಡಾ. ಕೆ.ಎಂ. ವೀರೇಶ್ ಹೃದಯಾಘಾತದಿಂದ ನಿಧನದುರ್ಗಕ್ಕೆ ಹರಿದು ಬಂದ ಭದ್ರೆ- ಸೆ.24ರಂದು ಮುಖ್ಯಮಂತ್ರಿಗಳಿಂದ ಗಂಗಾಪೂಜೆ,  ಬೃಹತ್ ಸಾರ್ವಜನಿಕ ಸಮಾರಂಭಆರ್.ಎಲ್ ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ 22ನೇ ಘಟಿಕೋತ್ಸವ ಮತ್ತು ಪದವಿ ಪ್ರದಾನ ಕಾರ್ಯಕ್ರಮನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಬೈಕ್ ಸವಾರ ಸಾವುಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಸಭೆ ಹೋರಾಟಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಾತಿನಿಧ್ಯ ಕಡಿಮೆ- ಚಿಕ್ಕಪ್ಪನಹಳ್ಳಿ ಷಣ್ಮುಖಕುಂಚಿಟಿಗ ನೌಕರರ ಸಂಘಕ್ಕೆ ಸದಸ್ಯರಾಗಿ: ಎಸ್.ಕೆ ಲಕ್ಷ್ಮಣ್ಚಳವಳಿ ನೆನಪಾಗಿ ಉಳಿದ ‘ತೆಂಕ-ಬಡಗ’ಅಂತಾರಾಷ್ಟ್ರೀಯ ಶಾಂತಿ ದಿನ – ಮನದ ದ್ವೇಷ ಕರಗಿದಾಗಲೇ ಜಗದ ಶಾಂತಿ ಅರಳುವುದು!ಗಣಪತಿ ಮೆರವಣಿಗೆ ವೇಳೆ ಗಲಾಟೆ 7 ಯುವಕರ ವಿರುದ್ಧ ಸುಮೋಟೋ ಪ್ರಕರಣ ದಾಖಲು