ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬೆಂಗಳೂರಿನ ನೆಹರು ತಾರಾಲಯದ ಯು.ಆರ್. ರಾವ್ ಭವನದಲ್ಲಿ ಬಿಡಿಎ ಅಧ್ಯಕ್ಷ ಎನ್. ಎ. ಹ್ಯಾರಿಸ್ ಅವರ ನೇತೃತ್ವದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ, ಡಾ. ಕೆ. ಶಿವರಾಮ ಕಾರಂತ ಬಡಾವಣೆಗೆ ಭೂಮಿ ನೀಡಿದ ೬೦೦ಕ್ಕೂ ಹೆಚ್ಚು ಭೂಮಾಲೀಕರು ಹಾಗೂ ರೈತರಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನಿವೇಶನ ಹಂಚಿಕೆ ಪತ್ರಗಳನ್ನು ವಿತರಿಸಿದರು.
ವಿಸ್ತೀರ್ಣ ಹಾಗೂ ಹಳ್ಳಿಗಳು: ಉತ್ತರ ಬೆಂಗಳೂರಿನ ಆವಲಹಳ್ಳಿ, ರಾಮಗೊಂಡನಹಳ್ಳಿ, ಜಾರಕಬಂಡೆ ಕಾವಲ್ ಸೇರಿದಂತೆ ಒಟ್ಟು ೧೭ ಹಳ್ಳಿಗಳ ೩,೦೬೯ ಎಕರೆ ಪ್ರದೇಶದಲ್ಲಿ ಈ ಬೃಹತ್ ಬಡಾವಣೆಯನ್ನು ನಿರ್ಮಿಸಲಾಗಿದೆ.
ಭೂಮಾಲೀಕರ ಕೊಡುಗೆ: ಈ ಯೋಜನೆಗಾಗಿ ಒಟ್ಟು ೩,೨೦೦ ಭೂಮಾಲೀಕರು ಮತ್ತು ರೈತರು ತಮ್ಮ ಜಮೀನು ನೀಡಿದ್ದಾರೆ.
ನಿವೇಶನಗಳ ಸಂಖ್ಯೆ: ಬಡಾವಣೆಯಲ್ಲಿ ಒಟ್ಟು ೩೪,೯೯೨ ವಿವಿಧ ಅಳತೆಯ ನಿವೇಶನಗಳನ್ನು ನಿರ್ಮಿಸಲಾಗಿದ್ದು, ಈ ಪೈಕಿ ೧೮,೦೦೦ ನಿವೇಶನಗಳನ್ನು ಜಾಗ ನೀಡಿದ ರೈತರು ಹಾಗೂ ಭೂಮಾಲೀಕರಿಗೆ ಪರಿಹಾರ ರೂಪದಲ್ಲಿ ಮೀಸಲಿಡಲಾಗಿದೆ.
ಈ ಸಂದರ್ಭದಲ್ಲಿ ಬೆಂಗಳೂರು ನಗರಾಭಿವೃದ್ಧಿ ಸಚಿವರಾದ ಕೃಷ್ಣಬೈರೇಗೌಡ, ಶಾಸಕರಾದ ಎಸ್. ಮುನಿರಾಜು, ಎಸ್.ಆರ್. ವಿಶ್ವನಾಥ್ ಸೇರಿದಂತೆ ಹಲವು ಜನಪ್ರತಿನಿಧಿಗಳು ಹಾಗೂ ಬಿಡಿಎ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.




