ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ಪರಿಣಾಮಕಾರಿ ಅನುಷ್ಠಾನ ಹಾಗೂ ಪ್ರಗತಿ ಪರಿಶೀಲನೆಗೆ ಸಂಬಂಧಿಸಿದಂತೆ, ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಹೆಚ್. ಎಂ. ರೇವಣ್ಣ ಅವರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ವಿಧಾನಸೌಧದಲ್ಲಿ ಭೇಟಿಯಾಗಿ ಮಹತ್ವದ ಸಮಾಲೋಚನೆ ನಡೆಸಿದರು.
ಗ್ಯಾರಂಟಿ ಯೋಜನೆಗಳ ಪರಿಶೀಲನೆ: ರಾಜ್ಯಾದ್ಯಂತ ಗ್ಯಾರಂಟಿ ಯೋಜನೆಗಳು ತಲುಪುತ್ತಿರುವ ಕುರಿತು ಹಾಗೂ ಅರ್ಹ ಫಲಾನುಭವಿಗಳಿಗೆ ಯಾವುದೇ ಅಡೆತಡೆಯಿಲ್ಲದೆ ಸೌಲಭ್ಯ ಒದಗಿಸುವ ಸಂಬಂಧ ಪ್ರಾಧಿಕಾರದಿಂದ ಮಾಹಿತಿ ಪಡೆಯಲಾಯಿತು.
ಅಕ್ರಮ ತಡೆ ಮತ್ತು ಮರುಪರಿಶೀಲನೆ: ಯೋಜನೆಗಳ ದುರುಪಯೋಗವನ್ನು ತಡೆಗಟ್ಟುವುದು, ಅನರ್ಹರನ್ನು ಹೊರಗಿಟ್ಟು ನೈಜ ಫಲಾನುಭವಿಗಳಿಗೆ ಯೋಜನೆ ತಲುಪಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳುವ ಕುರಿತು ಚರ್ಚಿಸಲಾಯಿತು.
ಈ ಪ್ರಮುಖ ಸಭೆಯಲ್ಲಿ ಪ್ರಾಧಿಕಾರದ ಉಪಾಧ್ಯಕ್ಷ ಪಿ.ಟಿ. ಪರಮೇಶ್ವರ ನಾಯ್ಕ್, ಡಾ. ಪುಷ್ಪಾ ಅಮರನಾಥ್, ದಿನೇಶ್ ಗೂಳಿಗೌಡ ಹಾಗೂ ಪ್ರಜಾಸೇವಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಹರ್ಷಗುಪ್ತ್ ಸೇರಿದಂತೆ ಇಲಾಖೆಯ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.




