ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ತುಮಕೂರಿನ ಶಿವಗಂಗೆಯ ಶ್ರೀ ಮಹಾಲಕ್ಷ್ಮೀ ತಿಗಳ ಮಹಾಸಂಸ್ಥಾನದ ಪೀಠಾಧ್ಯಕ್ಷರಾಗಿರುವ ಶ್ರೀ ಜ್ಞಾನಾನಂದಪುರಿ ಮಹಾಸ್ವಾಮಿಗಳವರ ನೇತೃತ್ವದ ಪ್ರಮುಖ ನಿಯೋಗವು ಸೋಮವಾರ ರಾಜ್ಯದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಗೃಹ ಕಚೇರಿ ‘ಕೃಷ್ಣಾ’ದಲ್ಲಿ ಭೇಟಿ ಮಾಡಿ, ಮಹತ್ವದ ಸಮಾಲೋಚನೆ ನಡೆಸಿತು.
ಶ್ರೀ ಮಹಾಲಕ್ಷ್ಮೀ ತಿಗಳ ಮಹಾಸಂಸ್ಥಾನ ಹಾಗೂ ಸಮುದಾಯದ ಅಭಿವೃದ್ಧಿ, ಸಾಮಾಜಿಕ ಮತ್ತು ಶೈಕ್ಷಣಿಕ ಪ್ರಗತಿಗೆ ಸಂಬಂಧಿಸಿದ ಹಲವು ಪ್ರಮುಖ ವಿಷಯಗಳ ಕುರಿತು ಸ್ವಾಮೀಜಿಗಳ ನೇತೃತ್ವದ ನಿಯೋಗವು ಮುಖ್ಯಮಂತ್ರಿಗಳೊಂದಿಗೆ ಸುದೀರ್ಘ ಚರ್ಚೆ ನಡೆಸಿತು.
ಈ ಸಂದರ್ಭದಲ್ಲಿ ಸಮುದಾಯದ ಪ್ರಮುಖ ಬೇಡಿಕೆಗಳು ಮತ್ತು ಧಾರ್ಮಿಕ ಸಂಸ್ಥೆಗಳ ಅಭಿವೃದ್ಧಿಗೆ ಸರ್ಕಾರದ ಸಹಕಾರದ ಅಗತ್ಯತೆಯ ಬಗ್ಗೆ ಗಮನ ಸೆಳೆಯಲಾಯಿತು.
ಈ ಸಂದರ್ಭದಲ್ಲಿ ಮಾಜಿ ಶಾಸಕ ನರೇಂದ್ರ ಬಾಬು ಸೇರಿದಂತೆ ಸಮುದಾಯದ ಪ್ರಮುಖ ಮುಖಂಡರು ಉಪಸ್ಥಿತರಿದ್ದರು. ಭೇಟಿಯ ಬಳಿಕ ಮಾತನಾಡಿದ ಮುಖ್ಯಮಂತ್ರಿಗಳು, ಸ್ವಾಮೀಜಿಗಳ ನೇತೃತ್ವದ ನಿಯೋಗದೊಂದಿಗೆ ಸಮಾಲೋಚನೆ ನಡೆಸಿರುವುದಾಗಿ ತಮ್ಮ ಸಾಮಾಜಿಕ ಜಾಲತಾಣದ ವೇದಿಕೆಯಲ್ಲಿ ಹಂಚಿಕೊಂಡಿದ್ದಾರೆ.



