Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಿಜೆಐಗೆ ಶೂ ಎಸೆದ ಕಿಡಿಗೇಡಿ ವಕೀಲನನ್ನು ತಕ್ಷಣ ಬಂಧಿಸಿ-ಸಿಎಂ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಸುಪ್ರೀಂ ಕೋರ್ಟ್ ಮುಖ್ಯನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರಿಗೆ ವಕೀಲನೊಬ್ಬ ಶೂ ಎಸೆದು ಅವಮಾನ ಮಾಡಿರುವ ಘಟನೆಯನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ. ಮುಖ್ಯನ್ಯಾಯಮೂರ್ತಿಗಳು ಮತ್ತು ನ್ಯಾಯಾಲಯಕ್ಕೆ ಅವಮಾನ ಮಾಡಿರುವ ಕಿಡಿಗೇಡಿ ವಕೀಲನನ್ನು ತಕ್ಷಣ ಬಂಧಿಸಿ ಕಾನೂನು ಕ್ರಮಕೈಗೊಳ್ಳಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಗ್ರಹಪಡಿಸಿದ್ದಾರೆ.


ದಲಿತ ಸಮುದಾಯಕ್ಕೆ ಸೇರಿರುವ ನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರು ಸಾಮಾಜಿಕ ಪ್ರತಿರೋಧಗಳನ್ನು ಎದುರಿಸಿ ಅರ್ಹತೆ ಮತ್ತು ಸಾಧನೆ ಮೂಲಕ ಉನ್ನತ ಸ್ಥಾನಕ್ಕೇರಿದವರು. ಜಾತಿ ಮೂಲದ ಅಸಮಾನತೆ ಮತ್ತು ಅಸಹನೆ ಸಂವಿಧಾನ ಜಾರಿಗೆ ಬಂದ 75 ವರ್ಷಗಳ ನಂತರವೂ ಮನುವಾದಿಗಳ ಮನಸ್ಸಲ್ಲಿ ಭಧ್ರವಾಗಿ ಉಳಿದುಕೊಂಡಿದೆ ಎನ್ನುವುದಕ್ಕೆ ಇಂದಿನ ಘಟನೆ ಸಾಕ್ಷಿಯಾಗಿದೆ.

ಗೌರವಾನ್ವಿತ ಮುಖ್ಯನ್ಯಾಯಮೂರ್ತಿಗಳಾದ ಬಿ.ಆರ್.ಗವಾಯಿ ಅವರು ಒಬ್ಬಂಟಿಯಲ್ಲ. ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಮೇಲೆ ನಂಬಿಕೆ ಇಟ್ಟಿರುವ ಕೋಟ್ಯಂತರ ಜಾತ್ಯತೀತ ಮನಸ್ಸುಗಳು ಅವರ ಬೆಂಬಲಕ್ಕೆ ಇವೆ ಎನ್ನುವುದನ್ನು ಅವರ ಗಮನಕ್ಕೆ ತರಬಯಸುತ್ತೇನೆ.

ಮುಖ್ಯನ್ಯಾಯಮೂರ್ತಿಗಳು ಯಾವುದೇ ಪಕ್ಷ ಇಲ್ಲವೇ ಧರ್ಮಕ್ಕೆ ಸೇರಿದವರಲ್ಲ. ಈ ದೃಷ್ಟಿಯಿಂದ ದೇಶದ ಎಲ್ಲ ಜಾತಿ, ಧರ್ಮ ಮತ್ತು ಪಕ್ಷಗಳ ಜನರು ಸುಪ್ರೀಂ ಕೋರ್ಟ್ ನಲ್ಲಿ ಇಂದು ನಡೆದಿರುವ ಘಟನೆಯನ್ನು ಒಕ್ಕೊರಲಿನಿಂದ ಖಂಡಿಸಬೇಕೆಂದು ಮನವಿ ಮಾಡುತ್ತೇನೆ.

ಜಾತಿ ಮತ್ತು ಧರ್ಮದ ಹೆಸರಲ್ಲಿ ಸಮಾಜವನ್ನು ಒಡೆದುಹಾಕಿ, ಪರಸ್ಪರ ದ್ವೇಷ ಮತ್ತು ಅಸಹನೆಯನ್ನು ಹುಟ್ಟುಹಾಕಿರುವ ಕಾರಣಕ್ಕಾಗಿಯೇ ರಾಕೇಶ್ ಕಿಶೋರ್ ನಂತಹ ಮನುವಾದಿ ಮನಸ್ಸುಗಳು ಸಮಾಜದಲ್ಲಿ  ಹುಟ್ಟಿಕೊಂಡಿವೆ ಎನ್ನುವುದನ್ನು ನಾವು ಮರೆಯಬಾರದು.

ನಾಥೂರಾಮ್ ಗೋಡ್ಸೆಯಂತಹ ಒಬ್ಬ ಕೊಲೆಗಡುಕನನ್ನು ದೇಶಪ್ರೇಮಿ ಎಂದು ಮೆರೆಸಲು ಹೊರಟಿರುವ ರೀತಿಯಲ್ಲಿಯೇ ಕೆಲವು ಪುಂಡರು ವಕೀಲನ ಕುಕೃತ್ಯವನ್ನು ಸಂಭ್ರಮಿಸುತ್ತಿರುವುದನ್ನು ಕಾಣುತ್ತಿದ್ದೇವೆ. ಇಂತಹವರ ವಿರುದ್ಧವೂ ಕಾನೂನು ಕ್ರಮ ಕೈಗೊಳ್ಳಬೇಕಾದ ಅಗತ್ಯ ಇದೆ ಎಂದು ಸಿದ್ದರಾಮಯ್ಯ ಆಗ್ರಹ ಮಾಡಿದ್ದಾರೆ.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ