Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಯುಪಿಎಸ್‌ಸಿ ಮಾದರಿಯಲ್ಲಿ ಕೆಪಿಎಸ್‌ಸಿ ಕಾರ್ಯನಿರ್ವಹಣೆಗೆ ಸಿಎಂ ಸೂಚನೆ

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
 ಕೆ.ಪಿ.ಎಸ್‌.ಸಿ.ಯಲ್ಲಿ ಯುಪಿಎಸ್‌ಸಿ ಮಾದರಿಯಲ್ಲಿ ನಿಗದಿತ ವೇಳಾಪಟ್ಟಿಯಂತೆ ಕಾರ್ಯನಿರ್ವಹಣೆ ಮಾಡುವ ಕುರಿತು ಸುಧಾರಣಾ ಕ್ರಮಗಳನ್ನು ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚಿಸಿದರು.

ಅವರು ಇಂದು ವಿಧಾನಸೌಧದಲ್ಲಿ ಸರ್ಕಾರದ ವತಿಯಿಂದ ವಿವಿಧ ನೇಮಕಾತಿ ಗಳ ಪ್ರಗತಿ ಪರಿಶೀಲನೆ ನಡೆಸಿದರು.

ನೇಮಕಾತಿ ಪ್ರಕ್ರಿಯೆಗಳ ವಿಳಂಬದ ಕುರಿತು, ಕಾನೂನು ತೊಡಕುಗಳ ಕುರಿತು ಹಾಗೂ 371 ಜೆ ಅಡಿ ಮೀಸಲಾತಿಗೆ ಸಂಬಂಧಿಸಿದ ಸವಾಲುಗಳ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.

ಪ್ರತಿವರ್ಷ ಎಲ್ಲ ಇಲಾಖೆಗಳ ನೇಮಕಾತಿಗೆ ಏಕಕಾಲಕ್ಕೆ ಅಧಿಸೂಚನೆ ಹೊರಡಿಸಲು ಅನುವಾಗುವಂತೆ ಎಲ್ಲ ಇಲಾಖೆಗಳು ನಿಗದಿತ ಗಡುವಿನೊಳಗೆ ನೇಮಕಾತಿ ಕುರಿತು ಪ್ರಸ್ತಾವನೆಗಳನ್ನು ಸಲ್ಲಿಸಲು ಸೂಚಿಸಿದರು. ಪರೀಕ್ಷಾ ವೇಳಾಪಟ್ಟಿಯಲ್ಲಿ ಫಲಿತಾಂಶ ಪ್ರಕಟಣೆಯ ದಿನಾಂಕ ನಿಗದಿಪಡಿಸಲು ಸೂಚಿಸಲಾಯಿತು.

ಸಿಬ್ಬಂದಿ ಕೊರತೆ, ವಿವಿಧ ನೇಮಕಾತಿ ಪ್ರಾಧಿಕಾರಗಳ ಪರೀಕ್ಷೆಗಳೊಂದಿಗೆ ದಿನಾಂಕ ಕ್ಲಾಷ್‌ಆಗದಂತೆ ನೋಡಿಕೊಳ್ಳುವುದು ಸವಾಲಿನ ಕೆಲಸವಾಗಿದೆ. ವಿವಿಧ ಇಲಾಖೆಗಳ ವೃಂದ ಮತ್ತು ನೇಮಕಾತಿ ನಿಯಮಗಳ ನ್ಯೂನ್ಯತೆಯೂ ನೇಮಕಾತಿ ವಿಳಂಬಕ್ಕೆ ಒಂದು ಕಾರಣ ಎಂದು ಸಭೆಗೆ ವಿವರಿಸಲಾಯಿತು.

ಕಲ್ಯಾಣ ಕರ್ನಾಟಕ ಅಭ್ಯರ್ಥಿಗಳ ನೇಮಕಾತಿಗೆ ಸಂಬಂಧಿಸಿದಂತೆ ಇರುವ ಗೊಂದಲಗಳ ಕುರಿತು ಸವಿಸ್ತಾರವಾಗಿ ಪರಿಶೀಲಿಸಿ, ಸಚಿವ ಸಂಪುಟ ಉಪಸಮಿತಿಯ ಆದೇಶಗಳ ಪಾಲನೆಯ ಕುರಿತು ಸಹ, ಸಚಿವ ಸಂಪುಟದ ಮುಂದೆ ವಿಷಯ ಮಂಡಿಸಲು ಸೂಚಿಸಿದರು.

ಸಚಿವ ಸಂಪುಟ ಉಪ ಸಮಿತಿಯ ಸೂಚನೆಗಳನ್ನು ಇಲಾಖಾ ಮುಖ್ಯಸ್ಥರು ಪಾಲಿಸಬೇಕು ಎಂದು ಮುಖ್ಯಮಂತ್ರಿಗಳು ಸೂಚಿಸಿದರು. ತಪ್ಪಿದಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ಪ್ರತಿ ನೇಮಕಾತಿ ಪ್ರಕ್ರಿಯೆಯು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಕಲ್ಯಾಣ ಕರ್ನಾಟಕ ಕೋಶದ ಸಹಮತಿಯೊಂದಿಗೆ ಅಧಿಸೂಚನೆ ಹೊರಡಿಸಬೇಕೆಂದು ಸೂಚನೆ ನೀಡಲಾಯಿತು.

ಅಂತಿಮ ಆಯ್ಕೆ ಪಟ್ಟಿ ಪ್ರಕಟವಾದ ನಂತರ ಸಿಂಧುತ್ವ ಪ್ರಮಾಣ ಪತ್ರ ನೀಡುವಲ್ಲಿ ವಿಳಂಬವಾಗುವುದರಿಂದ ನೇಮಕಾತಿ ಆದೇಶ ನೀಡುವಲ್ಲಿಯೂ ವಿಳಂಬವಾಗುತ್ತಿದೆ. ಈ ಹಿನ್ನೆಲೆಯಲ್ಲಿ ನೇಮಕಾತಿ ಬಗ್ಗೆ ಇಲಾಖಾ ಮುಖ್ಯಸ್ಥರು, ಪ್ರತಿ ವಾರ ಪರಿಶೀಲನೆ ಮಾಡಬೇಕು. ಸುತ್ತೋಲೆಗಳ ಕೈಪಿಡಿಗಳನ್ನು ಸಂಬಂಧಿಸಿದ ಅಧಿಕಾರಿಗಳಿಗೆ ಕಳುಹಿಸಲು ಸೂಚಿಸಿದರು.

ಮುಂದಿನ ವಾರ ಮತ್ತೊಮ್ಮೆ ಸಭೆ ಕರೆದು ಸಂಪೂರ್ಣ ಮಾಹಿತಿ ಪಡೆದು ಚರ್ಚಿಸುವುದಾಗಿ ತಿಳಿಸಿದರು.

ಸಭೆಯಲ್ಲಿ ಸಚಿವರಾದ ಡಾ. ಜಿ. ಪರಮೇಶ್ವರ, ಹೆಚ್.ಕೆ. ಪಾಟೀಲ, ಈಶ್ವರ್‌ಖಂಡ್ರೆ, ಕೆ. ಸುಧಾಕರ್‌, ಡಾ. ಎಂ.ಸಿ. ಸುಧಾಕರ್‌, ಎನ್.ಎಸ್. ಬೋಸರಾಜು, ರಹೀಂ ಖಾನ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್‌ಅಡ್ವೊಕೇಟ್‌ಜನರಲ್‌ಶಶಿಕಿರಣ್‌ಶೆಟ್ಟಿ ಹಾಗೂ ಸರ್ಕಾರದ ಇತರ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಿಕ್ಷಣಕ್ಕೆ ಹೆಚ್ಚಿನ ಒತ್ತು ಕೊಡಬೇಕು : ಜಿಲ್ಲಾ ಉಸ್ತುವಾರಿ ಸಚಿವರು ಟಿ ರಘುಮೂರ್ತಿಸಾಂಸ್ಕೃತಿಕ ನೆಲೆಗಟ್ಟಿನ ಮೇಲೆ ಕಾಡುಗೊಲ್ಲರ ಬದುಕು - ಸಣ್ಣಚಿತ್ತಯ್ಯ ಸಾರ್ವಜನಿಕ ಗಣೇಶೋತ್ಸವಕ್ಕೆ ಹಂದರಗಂಭ ಪೂಜೆನೂತನ ಬಸ್ ನಿಲ್ದಾಣ ಲೋಕಾರ್ಪಣೆ ನೆರವೇರಿಸಿದ ಸಚಿವ ಟಿ.ರಘುಮೂರ್ತಿ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಅತ್ಯಾಧುನಿಕ ಕ್ರೀಡಾ ಸೌಲಭ್ಯಗಳ ಉದ್ಘಾಟನೆಬೆಳೆ ಸಮೀಕ್ಷೆದಾರರ ಬೇಡಿಕೆ ಈಡೇರಿಕೆಗೆ ಕ್ರಮ: ಸರ್ಕಾರದೊಂದಿಗೆ ಚರ್ಚಿಸುವ ಭರವಸೆ ನೀಡಿದ ಸಚಿವ ರಘುಮೂರ್ತಿದೇವಾಲಯ ನಿರ್ಮಾಣ ಪವಿತ್ರ ಕಾರ್ಯ - ಟಿ. ರಘುಮೂರ್ತಿಡಾ.ಹೇಮಂತರಾಜು ರವರ ನಾನು ನೀನು ಮತ್ತು ಸ್ಕಿಜೋಫ್ರೇನಿಯಾ ಕವನ ಸಂಕಲನ ಲೋಕಾರ್ಪಣೆಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಇತಿಹಾಸ ಬರೆದ ಭಾರತದ ಶೂಟಿಂಗ್ ತಾರೆ ಮನು ಭಾಕರ್ಪ್ಯಾರಾ ಕಾಮನ್‌ವೆಲ್ತ್‌ನಲ್ಲಿ ಪದಕ ಗೆದ್ದು ಇತಿಹಾಸ ಬರೆದ ಕೆ.ಎಸ್. ಶಿಲ್ಪಾ