Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
National News

ಯುಕೆಪಿ ಯೋಜನೆಯ ಕಾಮಗಾರಿಗೆ ಪರಿಹಾರ ನಿಗದಿ-ಸಿಎಂ

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮಹತ್ವದ ಕೃಷ್ಣಾ ಮೇಲ್ದಂಡೆ (ಯುಕೆಪಿ) ಯೋಜನೆಯ 3ನೇ ಹಂತದ ಕಾಮಗಾರಿಗೆ ಅವಶ್ಯ ಇರುವ ಜಮೀನಿಗೆ ಪರಿಹಾರ ದರ ನಿಗದಿಗೊಳಿಸಿ ರಾಜ್ಯ ಸರ್ಕಾರ ಮಹತ್ವದ ತೀರ್ಮಾನ ಕೈಗೊಂಡಿದೆ. ನೀರಾವರಿ ಭೂಮಿಗೆ ಪ್ರತಿ ಎಕರೆಗೆ 40 ಲಕ್ಷ ರೂ. ಹಾಗೂ ಒಣ ಭೂಮಿಗೆ ಪ್ರತಿ ಎಕರೆಗೆ 30 ಲಕ್ಷ ರೂ. ದರ ನಿಗದಿ ಮಾಡಿ ಸಚಿವ ಸಂಪುಟ ಸಭೆ ನಿರ್ಣಯ ಕೈಗೊಂಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.


ವಿಧಾನಸೌಧದಲ್ಲಿ ಇಂದು ಸಿಎಂ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಕೃಷ್ಣಾ ಮೇಲ್ದಂಡೆ (ಯುಕೆಪಿ) ಯೋಜನೆ ಕುರಿತು ಸುದೀರ್ಘ ಚರ್ಚೆ ನಡೆಸಿ ಮಹತ್ವದ ನಿರ್ಧಾರ ತೆಗೆದುಕೊಳ್ಳಲಾಗಿದೆ. ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುತ್ತದೆ. ಯುಕೆಪಿ ಹಂತ 3 ಯೋಜನೆಯ ತ್ವರಿತ ಅನುಷ್ಠಾನಕ್ಕೆ ಸರ್ಕಾರ ಆದ್ಯತೆ ನೀಡಿದ್ದು, ಈ ದಿಸೆಯಲ್ಲಿ ರಾಜ್ಯಕ್ಕೆ ಸಮೃದ್ಧಿ ತರಬಲ್ಲ ಐತಿಹಾಸಿಕ ತೀರ್ಮಾನವನ್ನು ಕೈಗೊಳ್ಳಲಾಗಿದೆ ಎಂದು ಸಿಎಂ ತಿಳಿಸಿದರು.

ಜೀವನಮಟ್ಟ ಸುಧಾರಣೆ :
ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-3 ಮತ್ತು ನ್ಯಾಯಾಧೀಕರಣದ ತೀರ್ಪಿನಂತೆ ಆಲಮಟ್ಟಿ ಜಲಾಶಯದ ಎತ್ತರವನ್ನು 519.6 ಮೀ. ನಿಂದ 524.256 ಮೀ. ಗೆ ಏರಿಸಲು ಅನುಮತಿ ನೀಡಲಾಗಿದೆ. ಜಲಾಶಯದ ಎತ್ತರವನ್ನು ಹೆಚ್ಚಿಸುವುದರಿಂದ ಆಲಮಟ್ಟಿಯ ಹಿನ್ನೀರಿನಿಂದ ಸುಮಾರು 75,000 ಎಕರೆಗೂ ಹೆಚ್ಚು ಜಮೀನು ಮುಳುಗಡೆಯಾಗುವ ಸಂಭವವಿದೆ. ಇನ್ನು 5.94 ಲಕ್ಷ ಹೆಕ್ಟೇರ್ (ಸುಮಾರು 14 ರಿಂದ 15 ಲಕ್ಷ ಎಕರೆ) ಕ್ಕೂ ಹೆಚ್ಚು ಭೂಮಿಗೆ ನೀರಾವರಿ ಕಲ್ಪಿಸಬಹುದಾಗಿದೆ. ಯುಕೆಪಿ ಹಂತ 3 ಬೃಹತ್ ನೀರಾವರಿ ಯೋಜನೆಯಾಗಿದ್ದು
, ಈ ಭಾಗದ ರೈತರ ಜಮೀನಿಗೆ ನೀರೊದಗಿಸುವುದರಿಂದ ಅವರ ಜೀವನ ಮಟ್ಟದ ಸುಧಾರಣೆಯಾಗಲಿದೆ ಎಂದು ಸಿಎಂ ತಿಳಿಸಿದರು.

ಕಾಲುವೆ ನಿರ್ಮಾಣ: ಕಾಲುವೆ ತೋಡಲು ಸುಮಾರು 51,837 ಎಕರೆ ಬೇಕಾಗಿದ್ದು, ಇದರಲ್ಲಿ 23631 ಎಕರೆ ಭೂಮಿಯ ಸ್ವಾಧೀನ ಪ್ರಕ್ರಿಯೆ ನಡೆಸಿ, ಕಾಮಗಾರಿ ಕೈಗೊಳ್ಳಲಾಗಿದೆ. ಕಾಲುವೆ ನಿರ್ಮಾಣಕ್ಕಾಗಿ ಸ್ವಾಧೀನಪಡಿಸಿಕೊಂಡ ಭೂಮಿಗೆ ಸಂಬಂಧಿಸಿದಂತೆ ಒಣ ಭೂಮಿಯ ಎಕರೆಯೊಂದಕ್ಕೆ 25 ಲಕ್ಷ ಹಾಗೂ ನೀರಾವರಿ ಜಮೀನಿಗೆ ಎಕರೆಯೊಂದಕ್ಕೆ 30 ಲಕ್ಷ ಪರಿಹಾರ ಒದಗಿಸಲು ತೀರ್ಮಾನಿಸಲಾಗಿದೆ. ಕಾಲುವೆ ನಿರ್ಮಾಣದಲ್ಲಿ ಜಮೀನು ಕಳೆದುಕೊಂಡವರು ಯೋಜನೆಯ ಫಲಾನುಭವಿಗಳಾಗುತ್ತಾರೆ ಎಂದು ತಿಳಿಸಿದರು.


ಮೂರು ವರ್ಷದೊಳಗೆ ಪರಿಹಾರ:
ಭೂಸ್ವಾಧೀನ ಪಡಿಸಿಕೊಂಡ ಜಮೀನುಗಳಿಗೆ ಪರಿಹಾರವನ್ನು ಮೂರು ಆರ್ಥಿಕ ವರ್ಷದೊಳಗೆ ನೀಡಲು ತೀರ್ಮಾನಿಸಲಾಗಿದೆ. ಯೋಜನೆಗೆ ಭೂಸ್ವಾಧೀನಪಡಿಸಿಕೊಳ್ಳಲು ರೈತರ ಮನವೊಲಿಸುವುದಾಗಿ ಸಂಬಂಧಪಟ್ಟ ಸಚಿವರು
, ಶಾಸಕರು, ರೈತಮುಖಂಡರು ತಿಳಿಸಿದ್ದಾರೆ. ರಾಜ್ಯದ ಜನರಿಗೆ ಒಳಿತು ಮಾಡುವ ಈ ಸಾರ್ಥಕ ಯೋಜನೆಗೆ ಭೂಮಿ ನೀಡಲು ರೈತರು ಸಮ್ಮತಿಸಬಹುದೆಂಬ ಭರವಸೆಯಿದೆ. ಇದೊಂದು ಐತಿಹಾಸಿಕ ತೀರ್ಮಾನ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.


ಹಿಂದಿನ ಬಿಜೆಪಿ ಸರ್ಕಾರದಲ್ಲಿ ಪರಿಹಾರದ ಮೊತ್ತ ಕಡಿಮೆಯಿದ್ದುದ್ದರಿಂದ ಯಾವ ರೈತರೂ ಭೂಮಿ ನೀಡಲು ಒಪ್ಪಲಿಲ್ಲ ಹಾಗೂ ಯೋಜನೆಗೆ ಚಾಲನೆಯೂ ದೊರೆಯದೇ ನೆನೆಗುದಿಗೆ ಬಿದ್ದಿತ್ತು ಎಂದರು.


ಕೇಂದ್ರಕ್ಕೆ ಒತ್ತಾಯ:
ಬೆಳಗಾವಿಯಲ್ಲಿ ಉತ್ತರ ಕರ್ನಾಟಕದ ಶಾಸಕರು
, ರೈತಪ್ರತಿನಿಧಿಗಳೊಂದಿಗೆ ನಡೆದ ಸಭೆಯಲ್ಲಿ ಒಂದೇ ಬಾರಿಗೆ Consent award ನೀಡುವ ಬಗ್ಗೆ ಪರಿಗಣಿಸಿದ್ದರೂ, ಪರಿಹಾರ ಧನ ನಿಗದಿಯಾಗಿರಲಿಲ್ಲ. ಯೋಜನೆಗಳ ತ್ವರಿತ ಅನುಷ್ಠಾನಕ್ಕೆ ಸರ್ಕಾರ ಆದ್ಯತೆ ನಿಡುತ್ತದೆ. ಆದರೆ ಯೋಜನೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಇದುವರೆಗೂ ಅಧಿಸೂಚನೆ ಹೊರಡಿಸಿಲ್ಲ. ಯೋಜನೆಯ ತ್ವರಿತ ಅನುಷ್ಠಾನಕ್ಕೆ ಅನುಕೂಲವಾಗುವಂತೆ ಅಧಿಸೂಚನೆ ಹೊರಡಿಸಲು ಕೇಂದ್ರದವರನ್ನು ಹಲವು ಬಾರಿ ಭೇಟಿ ಮಾಡಿ ಅಧಿಸೂಚನೆ ಹೊರಡಿಸುವಂತೆ ಒತ್ತಾಯಿಸಲಾಗಿದೆ ಎಂದು ಸಿಎಂ ತಿಳಿಸಿದರು.

70 ಸಾವಿರ ಕೋಟಿ ವೆಚ್ಚ:
ಕೃಷ್ಣಾ ಮೇಲ್ದಂಡೆ 3ನೇ ಹಂತದ ಯೋಜನೆಯಡಿ ಮುಳುಗಡೆಯಾಗುವ ಪ್ರತಿ ಎಕರೆ ನೀರಾವರಿ ಜಮೀನಿಗೆ 40 ಲಕ್ಷ ರೂ. ಹಾಗೂ ಒಣ ಜಮೀನಿಗೆ ಪ್ರತಿ ಎಕರೆಗೆ 30 ಲಕ್ಷ ರೂ. ಮತ್ತು ಕಾಲುವೆಗಾಗಿ ಸ್ವಾಧೀನಪಡಿಸಿಕೊಳ್ಳುವ ಭೂಮಿ ಪೈಕಿ ನೀರಾವರಿ ಜಮೀನಿಗೆ ಪ್ರತಿ ಎಕರೆಗೆ 30 ಲಕ್ಷ ರೂ ಹಾಗೂ ಒಣ ಜಮೀನಿಗೆ ಪ್ರತಿ ಎಕರಿಗೆ 25 ಲಕ್ಷ ರೂ ಪರಿಹಾರ ನೀಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಮಾಹಿತಿ ನೀಡಿದರು.


ಈ ಯೋಜನೆಗೆ ಬೇಕಾಗಿರುವುದು 1,33,867 ಎಕರೆ ಜಮೀನು. 75,563 ಎಕರೆ ಜಮೀನು ಮುಳುಗಡೆಯಾಗಲಿದೆ. 51,837 ಎಕರೆ ಕಾಲುವೆ ನಿರ್ಮಾಣಕ್ಕೆ ಬೇಕಾಗಿದೆ. ರೈತರ ಪುನರ್ವಸತಿ ಹಾಗೂ ಪುನರ್ವವ್ಯಸ್ಥೆ ಕಾರ್ಯಗಳಿಗೆ 6469 ಎಕರೆಗಳ ಅವಶ್ಯಕತೆಯಿದೆ. ಇದರಿಂದ ಸುಮಾರು 20 ಗ್ರಾಮಗಳು ಕೆಲವು ಪಟ್ಟಣ ವಾರ್ಡ್​ಗಳು ಮುಳುಗಡೆಯಾಗುತ್ತಿದ್ದು, ಒಟ್ಟು 1,33,867 ಎಕರೆಗೆ ಭೂಸ್ವಾಧೀನ ಪರಿಹಾರ ನೀಡಲಾಗುತ್ತದೆ ಎಂದರು.
ಈ ಉದ್ದೇಶಕ್ಕಾಗಿ ಪ್ರತಿವರ್ಷ ಸುಮಾರು 15 ರಿಂದ 20 ಸಾವಿರ ಕೋಟಿ ರೂಗಳ ವೆಚ್ಚ ಬರಲಿದೆ. ಒಟ್ಟಾರೆ ಈ ಯೋಜನೆಗೆ ಸುಮಾರು 70 ಸಾವಿರ ಕೋಟಿ ರೂ. ವೆಚ್ಚವಾಗುವ ಅಂದಾಜು ಇದೆ ಎಂದು ಡಿಸಿಎಂ ವಿವರಿಸಿದರು.


ಸ್ಥಳೀಯ ಜನಪ್ರತಿನಿಧಿಗಳು, ರೈತರು, ಸಚಿವರ ಅಭಿಪ್ರಾಯ ಪಡೆದು ಈ ತೀರ್ಮಾನ ತೆಗೆದುಕೊಳ್ಳಲಾಗಿದೆ. ಪರಿಹಾರ ದರವು ಕೇವಲ ಕೃಷ್ಣಾ ಭಾಗ್ಯ ಜಲನಿಗಮ ವ್ಯಾಪ್ತಿಯ ಯುಕೆಪಿ 3ನೇ ಹಂತದ ಯೋಜನೆ ಪ್ರದೇಶಕ್ಕೆ ಮಾತ್ರ ಸೀಮಿತವಾಗಲಿದೆ. ಅಧಿಸೂಚನೆ ಹೊರಡಿಸುವುದು ತಡವಾಗುತ್ತಿರುವ ಹಿನ್ನೆಲೆಯಲ್ಲಿ ಇತರೆ ಪ್ರಕ್ರಿಯೆಗಳು ವಿಳಂಬವಾಗಬಾರದು ಎಂಬ ಕಾರಣಕ್ಕೆ ಸರ್ಕಾರ ಭೂಸ್ವಾಧೀನ ಪ್ರಕ್ರಿಯೆಗೆ ಮುಂದಾಗಿದೆ. ಈ ಯೋಜನೆಯಲ್ಲಿ 70 ಸಾವಿರ ಕೋಟಿ ಕೇವಲ ಭೂಸ್ವಾಧೀನ ಪ್ರಕ್ರಿಯೆಗೆ ವ್ಯಯವಾಗಲಿದೆ. ಈ ಪ್ರಕ್ರಿಯೆಯನ್ನು ರೈತರ ಒಪ್ಪಿಗೆ ಹಾಗೂ ನೇರವಾಗಿ ಖರೀದಿ ಮೂಲಕ 3 ವರ್ಷಗಳ ಅವಧಿಯಲ್ಲಿ ಮುಗಿಸಲು ತೀರ್ಮಾನಿಸಲಾಗಿದೆ ಎಂದು ಡಿಸಿಎಂ ಅವರು ತಿಳಿಸಿದರು.

ಯುಕೆಪಿ ಯೋಜನೆಯ ಭಾಗದಲ್ಲಿ ದಿನೇ ದಿನೆ ಭೂಮಿ ಬೆಲೆ ಏರಿಕೆಯಾಗುತ್ತಿದೆ. ಈ ಹಿಂದೆ ಬೊಮ್ಮಾಯಿ ಅವರ ಸರ್ಕಾರವು ನೀರಾವರಿ ಜಮೀನಿಗೆ ಪ್ರತಿ ಎಕರೆಗೆ 24 ಲಕ್ಷ ಹಾಗೂ ಒಣ ಭೂಮಿಗೆ 20 ಲಕ್ಷ ಪರಿಹಾರ ನಿಗದಿ ಮಾಡಿತ್ತು. ಈ ವಿಚಾರವಾಗಿ ಸಂಪುಟ ಉಪಸಮಿತಿ ರಚಿಸಲಾಗಿತ್ತಾದರೂ ರೈತರು ಈ ತೀರ್ಮಾನಕ್ಕೆ ಒಪ್ಪಿಗೆ ನೀಡಿರಲಿಲ್ಲ. ಹೀಗಾಗಿ ಈ ತೀರ್ಮಾನವನ್ನು ಜಾರಿಗೊಳಿಸಲು ಸಾಧ್ಯವಾಗಲಿಲ್ಲ. ಈ ಯೋಜನೆಯ ಎಲ್ಲಾ ಭೂಸ್ವಾಧೀನ ಪ್ರಕ್ರಿಯೆಯನ್ನು ಒಂದೇ ಹಂತದಲ್ಲಿ ಮಾಡಲು ತೀರ್ಮಾನಿಸಿದ್ದೇವೆ ಎಂದು ಹೇಳಿದರು.

ಈ ಯೋಜನೆಗೆ ಅಗತ್ಯವಿರುವ ಭೂಮಿಯನ್ನು 2013ರ ಭೂಸ್ವಾಧೀನ ಕಾಯ್ದೆ ಅನ್ವಯ ಸ್ವಾಧೀನಪಡಿಸಿಕೊಳ್ಳಲಾಗುವುದು. ಈ ಪ್ರಕ್ರಿಯೆಗೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ಅನೇಕ ಪ್ರಕರಣಗಳ ವಿಚಾರಣೆ ನಡೆಯುತ್ತಿದೆ. ಸುಮಾರು 20 ಸಾವಿರ ಪ್ರಕರಣಗಳು ನ್ಯಾಯಾಲಯದ ಮೆಟ್ಟಿಲೇರಿವೆ. ಈ ಕಾಯ್ದೆಯಲ್ಲಿ ನೀಡಲಾಗಿರುವ ಅವಕಾಶದ ಪ್ರಕಾರ ಈ ಪ್ರಕರಣಗಳನ್ನು ರಾಜಿ ಸಂಧಾನ ಕಾನೂನು ಪ್ರಕಾರ ಇತ್ಯರ್ಥ ಮಾಡಿಕೊಳ್ಳಲು ತೀರ್ಮಾನಿಸಲಾಗಿದೆ. ನ್ಯಾಯಾಲಯದಲ್ಲಿ ಪ್ರಕರಣವಿಲ್ಲದ ಜಮೀನುಗಳನ್ನು ರೈತರಿಂದ ನೇರವಾಗಿ ಖರೀದಿ ಮಾಡಲಾಗುವುದು ಎಂದು ಮಾಹಿತಿ ನೀಡಿದರು.

ಕೇಂದ್ರದ ಅಧಿಸೂಚನೆ ಬರುವ ಮುಂಚೆಯೇ , ಕಾಮಗಾರಿ ಪ್ರಾರಂಭಿಸಬಹುದೇ ಎಂಬುದಕ್ಕೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಅವರು, ಕಾಲುವೆ ನಿರ್ಮಾಣದ ಕೆಲಸ ಈಗಾಗಲೇ ಪ್ರಾರಂಭಿಸಲಾಗಿದ್ದು, ಅಧಿಸೂಚನೆಯಿಂದ ಯಾವುದೇ ತೊಂದರೆಯಾಗುವುದಿಲ್ಲ ಎಂದು ತಿಳಿಸಿದರು.

ಕಾನೂನು ಮತ್ತು ಪ್ರವಾಸೋದ್ಯಮ ಸಚಿವ ಹೆಚ್.ಕೆ.ಪಾಟೀಲ್ ಹಾಗೂ ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ್, ಜವಳಿ ಸಚಿವ ಶಿವಾನಂದ ಪಾಟೀಲ್ ಉಪಸ್ಥಿತರಿದ್ದರು.

 

 

 

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಸಾಪ ಮಾಜಿ ಜಿಲ್ಲಾಧ್ಯಕ್ಷ, ಶಿಕ್ಷಣತಜ್ಞ ಡಾ. ಕೆ.ಎಂ. ವೀರೇಶ್ ಹೃದಯಾಘಾತದಿಂದ ನಿಧನದುರ್ಗಕ್ಕೆ ಹರಿದು ಬಂದ ಭದ್ರೆ- ಸೆ.24ರಂದು ಮುಖ್ಯಮಂತ್ರಿಗಳಿಂದ ಗಂಗಾಪೂಜೆ,  ಬೃಹತ್ ಸಾರ್ವಜನಿಕ ಸಮಾರಂಭಆರ್.ಎಲ್ ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ 22ನೇ ಘಟಿಕೋತ್ಸವ ಮತ್ತು ಪದವಿ ಪ್ರದಾನ ಕಾರ್ಯಕ್ರಮನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಬೈಕ್ ಸವಾರ ಸಾವುಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಸಭೆ ಹೋರಾಟಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಾತಿನಿಧ್ಯ ಕಡಿಮೆ- ಚಿಕ್ಕಪ್ಪನಹಳ್ಳಿ ಷಣ್ಮುಖಕುಂಚಿಟಿಗ ನೌಕರರ ಸಂಘಕ್ಕೆ ಸದಸ್ಯರಾಗಿ: ಎಸ್.ಕೆ ಲಕ್ಷ್ಮಣ್ಚಳವಳಿ ನೆನಪಾಗಿ ಉಳಿದ ‘ತೆಂಕ-ಬಡಗ’ಅಂತಾರಾಷ್ಟ್ರೀಯ ಶಾಂತಿ ದಿನ – ಮನದ ದ್ವೇಷ ಕರಗಿದಾಗಲೇ ಜಗದ ಶಾಂತಿ ಅರಳುವುದು!ಗಣಪತಿ ಮೆರವಣಿಗೆ ವೇಳೆ ಗಲಾಟೆ 7 ಯುವಕರ ವಿರುದ್ಧ ಸುಮೋಟೋ ಪ್ರಕರಣ ದಾಖಲು