Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಐದು ವರ್ಷ ಸಿದ್ದರಾಮಯ್ಯನವರೇ ಸಿಎಂ

Advertisement
ಚಂದ್ರವಳ್ಳಿ ನ್ಯೂಸ್, ಮೈಸೂರು:
ಮುಖ್ಯಮಂತ್ರಿಗಳ ಬದಲಾವಣೆಗೆ ಗಡುವು ಕೊಟ್ಟಿಲ್ಲ. ಸಿಎಂ ಒಳ್ಳೆ ಕೆಲಸ ಮಾಡುತ್ತಿದ್ದಾರೆ. ಐದು ವರ್ಷ ಸಿದ್ದರಾಮಯ್ಯನವರೇ ಸಿಎಂ ಆಗಿ ಇರುತ್ತಾರೆ ಎಂದು ವಿಧಾನ ಪರಿಷತ್‌ ಸದಸ್ಯ ಯತೀಂದ್ರ ಸಿದ್ದರಾಮಯ್ಯ ತಿಳಿಸಿದರು.


ಜಿಲ್ಲಾ ಪಂಚಾಯಿತಿ ಕಚೇರಿ ಬಳಿ ಮಾಧ್ಯಗಳೊಂದಿಗೆ ಮಾತನಾಡಿದ ಅವರು, ನವೆಂಬರ್​ನಲ್ಲಿ ಮುಖ್ಯಮಂತ್ರಿ ಬದಲಾವಣೆಯಾಗುತ್ತಾರೆಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿ, ದೆಹಲಿಗೆ ಸಿಎಂ, ಡಿಸಿಎಂ ಹೋಗಿರುವುದು ಎಲ್ಲ ವಿಚಾರಗಳ ಬಗ್ಗೆ ಚರ್ಚೆ ಮಾಡಲು, ಮುಖ್ಯವಾಗಿ ಜಾತಿ ಗಣತಿ ಬಗ್ಗೆ ಚರ್ಚೆಯಾಗಿದೆ. ಮುಖ್ಯಮಂತ್ರಿ ಬದಲಾವಣೆಗೆ ಗಡುವು ಕೊಟ್ಟಿಲ್ಲ ಎಂದರು.

ಕಾಲ್ತುಳಿತ ಪ್ರಕರಣದಲ್ಲಿ ಬಿಜೆಪಿ ಪ್ರತಿಭಟನೆ ನಡೆಸುತ್ತಿರುವ ಬಗ್ಗೆ ಮಾತನಾಡಿ, ಬಿಜೆಪಿ ಅಧಿಕಾರದಲ್ಲಿರುವ ರಾಜ್ಯಗಳಲ್ಲಿ ಈ ರೀತಿ ಘಟನೆಗಳು ನಡೆದಾಗ ಯಾವುದೇ ಕ್ರಮ ಆಗಿಲ್ಲ. ನಾವು ಈಗಾಗಲೇ ನ್ಯಾಯಾಂಗ ತನಿಖೆಗೆ ಆದೇಶ ಮಾಡಿದ್ದೇವೆ. ಈ ಪ್ರಕರಣದಲ್ಲಿ ತಪ್ಪಿತಸ್ಥರ ವಿರುದ್ಧ ಕ್ರಮ ತೆಗೆದುಕೊಂಡಿದ್ದೇವೆ.

ಆದರೆ ಬಿಜೆಪಿ ಅಧಿಕಾರದಲ್ಲಿರುವ ರಾಜ್ಯಗಳಲ್ಲಿ ಅಂದರೆ ಉತ್ತರ ಪ್ರದೇಶದ ಕುಂಭಮೇಳ ಹಾಗೂ ಬಿಜೆಪಿ ಮಿತ್ರ ಪಕ್ಷವಿರುವ ತಿರುಪತಿಯಲ್ಲಿ ನಡೆದ ಘಟನೆಗಳ ಬಗ್ಗೆ ಯಾವುದೇ ಕ್ರಮ ಆಗಿಲ್ಲ. ಅಲ್ಲಿ ಯಾರು ರಾಜೀನಾಮೆ ತೆಗೆದುಕೊಂಡಿಲ್ಲ. ಇದು ಬರೀ ಅಪಪ್ರಚಾರದ ರಾಜಕೀಯ ಮಾಡುತ್ತಿದ್ದಾರೆ ಎಂದು ಯತೀಂದ್ರ ಬೇಸರ ವ್ಯಕ್ತಪಡಿಸಿದರು.

 ಕಾಲ್ತುಳಿತ ಪ್ರಕರಣದಲ್ಲಿ ಸಿಎಂ ತಪ್ಪಿಲ್ಲ, ಕ್ರೀಡಾಂಗಣದವರು ಅನುಮತಿ ಪಡೆದುಕೊಂಡಿಲ್ಲ. ಪೊಲೀಸರು ಸರಿಯಾಗಿ ಬಂದೋಬಸ್ತ್‌ ಮಾಡಿಲ್ಲ. ತನಿಖೆ ನಡೆಯುತ್ತಿದೆ, ವರದಿ ಬಂದ ಬಳಿಕ ತಪ್ಪಿತಸ್ಥರ ವಿರುದ್ಧ ಕ್ರಮ ಆಗಲಿದೆ. ಸಿಎಂ ಸ್ಥಾನಕ್ಕೆ ಯಾವುದೇ ಗಂಡಾಂತರ ಇಲ್ಲ ಎಂದು ಅವರು ತಿಳಿಸಿದರು.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ