Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಮಾಜದ ನಿರೀಕ್ಷೆಗಳಿಗೆ ಸೇವಾ ಸ್ಪಂದನೆ ಅಗತ್ಯ-ಸಿ.ಎಂ ನಾರಾಯಣಸ್ವಾಮಿ

Advertisement
ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಸಮಾಜದ ನಿರೀಕ್ಷೆಗಳಿಗೆ ಸೇವೆಯ ಮೂಲಕ ಸ್ಪಂದಿಸುವ ಆಶಯವನ್ನು ಲಯನ್ಸ್‌ಸಂಸ್ಥೆ ಹೊಂದಿದ್ದು
, ವಿಶ್ವಾದ್ಯಂತ ಅಸಂಖ್ಯಾತ ಚಟುವಟಿಕೆಗಳ ಮೂಲಕ ಸಾಮಾಜಿಕ ಸೇವೆಯಲ್ಲಿ ತೊಡಗಿದೆ ಎಂದು ಲಯನ್ಸ್‌ಜಿಲ್ಲೆ 317ಎಫ್‌ನ ಗೌರ್ನರ್‌ಸಿ.ಎಂ.ನಾರಾಯಣಸ್ವಾಮಿ ಹೇಳಿದರು.

ಇಲ್ಲಿನ ಲಯನ್ಸ್ ಕ್ಲಬ್ ಆಫ್ ದೊಡ್ಡಬಳ್ಳಾಪುರ ಆರ್.ಎಲ್.ಜಾಲಪ್ಪ ಇನ್‌ಸ್ಟಿಟ್ಯೂಷನ್ಸ್‌ಗೆ ಅಧಿಕೃತ ಭೇಟಿ ವೇಳೆ ವಿವಿಧ ಸೇವಾ ಚಟುವಟಿಕೆಗಳಲ್ಲಿ ಪಾಲ್ಗೊಂಡು, ಬಳಿಕ ನಡೆದ ಸರ್ವಸದಸ್ಯರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.

ಕಳೆದ ಮೂರೂವರೆ ವರ್ಷದ ಹಿಂದೆಯಷ್ಟೇ ಆರಂಭವಾದ ಆರ್.ಎಲ್.ಜಾಲಪ್ಪ ಲಯನ್ಸ್‌ಸಂಸ್ಥೆ ಸೇವಾ ಹಾಗೂ ಆಡಳಿತಾತ್ಮಕವಾಗಿ ಉತ್ತಮ ಕಾರ್ಯ ನಿರ್ವಹಿಸಿ, ಸತತವಾಗಿ ಜಿಲ್ಲೆಯಲ್ಲಿ ಮೊದಲ ಸ್ಥಾನ ಪಡೆದ ಹ್ಯಾಟ್ರಿಕ್ ಸಾಧನೆಯನ್ನು ಮಾಡಿರುವುದು ಇಲ್ಲಿನ ಸೇವಾ ಬದ್ದತೆಗೆ ಸಾಕ್ಷಿಯಾಗಿದೆ. ಈ ವರ್ಷ ಮೊದಲ 6 ತಿಂಗಳಲ್ಲೇ ದಾಖಲೆಯ 416 ಕಾರ್ಯಕ್ರಮಗಳನ್ನು ಆಯೋಜಿಸಿ ಸಮಾಜಮುಖಿ ಆಲೋಚನೆಯನ್ನು ಪ್ರತಿಪಾದಿಸಿದೆ ಎಂದರು.

ಸದಸ್ಯತ್ವ ದ್ವಿಗುಣ-ಶ್ಲಾಘನೀಯ:
ಲಯನ್ಸ್‌ಕ್ಲಬ್‌ನ ಸದಸ್ಯತ್ವ ಸಂಖ್ಯೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ದೊಡ್ಡಬಳ್ಳಾಪುರದ ಆರ್.ಎಲ್.ಜಾಲಪ್ಪ ಲಯನ್ಸ್‌ಸಂಸ್ಥೆ ಹೊಸ ಮೈಲುಗಲ್ಲನ್ನು ದಾಟಿದೆ. ಈ ವರ್ಷ ಬರೋಬ್ಬರಿ 50 ಹೊಸ ಸದಸ್ಯರನ್ನು ನೊಂದಾಯಿಸುವ ಮೂಲಕ ತನ್ನ ಸದಸ್ಯತ್ವದ ಬಲವನ್ನು 100ಕ್ಕೆ ವೃದ್ದಿಸಿಕೊಂಡಿರುವುದು ಶ್ಲಾಘನೀಯ ವಿಚಾರವಾಗಿದ್ದು, ಈ ನಿಟ್ಟಿನಲ್ಲಿ ಶ್ರಮಿಸಿದ ಗಣ್ಯರ ಪರಿಶ್ರಮ ಅಭಿನಂದನೀಯ ಎಂದರು.

ಇದೇ ವೇಳೆ ಅವರು ವಿವಿಧ ಪುರಸ್ಕಾರ-ಗೌರವಗಳನ್ನು ಕ್ಲಬ್‌ನ ಅಧ್ಯಕ್ಷರು, ಪದಾಧಿಕಾರಿಗಳಿಗೆ ಘೋಷಿಸಿದರು. ಕ್ಲಬ್‌ನ ತ್ರೈಮಾಸಿಕ ಹಾಗೂ ವಿಶೇಷ ಸುದ್ದಿಪತ್ರ ಅನಾವರಣ ಸಂಚಿಕೆಯನ್ನು ಲೋಕಾರ್ಪಣೆ ಮಾಡಿದರು.

ಲಯನ್ಸ್‌ಕ್ಲಬ್ ಅಧ್ಯಕ್ಷ ಜೆ.ಆರ್.ರಾಕೇಶ್ ಅಧ್ಯಕ್ಷತೆ ವಹಿಸಿದ್ದರು. ಶ್ರೀ ದೇವರಾಜ ಅರಸ್‌ಶಿಕ್ಷಣ ಸಂಸ್ಥೆ ಉಪಾಧ್ಯಕ್ಷ ಜೆ.ರಾಜೇಂದ್ರ, ಲಯನ್ಸ್‌ಜಿಲ್ಲಾ ಸಂಪುಟ ಕಾರ್ಯದರ್ಶಿ ಪ್ರಸನ್ನಕುಮಾರ್‌, ಖಜಾಂಚಿ ವಿಜಯಾ, ಪ್ರಾಂತೀಯ ಅಧ್ಯಕ್ಷ ನಾಗರಾಜ್, ವಲಯ ಅಧ್ಯಕ್ಷ ರಘುಬಾಬು, ಜಿಇಟಿ ಸಂಯೋಜಕ ಎಂ.ಆರ್.ಶ್ರೀನಿವಾಸ್, ಮಧುಮೇಹ ಸಂಯೋಜಕ ಎಲ್.ಎನ್.ಪ್ರದೀಪ್‌ಕುಮಾರ್, ಕ್ಲಬ್ ಕಾರ್ಯದರ್ಶಿ ಕೆ.ಸಿ.ನಾಗರಾಜ್, ಖಜಾಂಚಿ ರವಿಕುಮಾರ್, ಉಪಾಧ್ಯಕ್ಷರಾದ ಮುನಿರಾಮೇಗೌಡ, ಪ್ರೊ.ರವಿಕಿರಣ್, ನಿಕಟಪೂರ್ವ ಅಧ್ಯಕ್ಷ ಡಾ.ಶ್ರೀನಿವಾಸರೆಡ್ಡಿ, ಲಿಯೋ ಲಯನ್ಸ್‌ಕ್ಲಬ್ ಅಧ್ಯಕ್ಷ ಅಮಿತ್ ಸೇರಿದಂತೆ ಕ್ಲಬ್‌ನ ಪದಾಧಿಕಾರಿಗಳು, ಅಕ್ಷಯ ಲಿಯೋ ಕ್ಲಬ್, ಏಕಲವ್ಯ ಲಿಯೋ ಕ್ಲಬ್, ಆರ್ಯಭಟ ಲಿಯೋ ಲಯನ್ಸ್‌ಕ್ಲಬ್‌ನ ಸದಸ್ಯರು ಹಾಜರಿದ್ದರು.

ವಿವಿಧ ಸೇವಾ ಚಟುವಟಿಕೆಗಳಲ್ಲಿ ಭಾಗಿ:
ಗೌರ್ನರ್‌ಅಧಿಕೃತ ಭೇಟಿ ಹಿನ್ನಲೆ ಆಯೋಜಿಸಿದ್ದ ವಿವಿಧ ಸೇವಾ ಚಟುವಟಿಕೆಗಳಲ್ಲಿ ಅವರು ಭಾಗಿಯಾದರು. ಅಪೆರಲ್ ಪಾರ್ಕ್‌ಹೆಬ್ಬಾಗಿಲ ಬಳಿ ಆರ್.ಎಲ್.ಜಾಲಪ್ಪ ವೃತ್ತದ ನಾಮಫಲಕ ಅನಾವರಣ, ಬಸ್‌ನಿಲ್ದಾಣ ಮತ್ತು ರೈಲ್ವೇ ನಿಲ್ದಾಣ ವೃತ್ತದಲ್ಲಿ ಸಾರ್ವಜನಿಕರಿಗೆ ಮಧುಮೇಹ ತಪಾಸಣಾ ಶಿಬಿರ, ಬ್ಯಾಂಕ್‌ಆಫ್‌ಬರೋಡ ಸಮೀಪ ದೃಷ್ಟಿ ತಪಾಸಣೆ ಹಾಗೂ ಐಒಎಲ್‌ಕೇಂದ್ರದ ಉದ್ಘಾಟನೆ, ಮೆಳೇಕೋಟೆಯಲ್ಲಿ ಪಶು ಆರೋಗ್ಯ ತಪಾಸಣಾ ಶಿಬಿರ, ತೂಬಗೆರೆಯ ವೃದ್ದಾಶ್ರಮದಲ್ಲಿ ಹಸಿವು ನಿವಾರಣೆ ಸೇವಾ ಕಾರ್ಯ.



ಪಾಲನಜೋಗಿಹಳ್ಳಿ ಶಾಲೆಯಲ್ಲಿ ದಂತ ತಪಾಸಣೆ ಶಿಬಿರ-ಪೆನ್ಸಿಲ್‌ಬಾಕ್ಸ್‌ವಿತರಣೆ, ಲಿಟ್ಲ್‌ಮಾಸ್ಟರ್‌ಶಾಲೆ ಹಾಗೂ ದೇವಲ ಮಹರ್ಷಿ ಶಾಲೆಯಲ್ಲಿ ಕಣ್ಣಿನ ತಪಾಸಣೆ ಶಿಬಿರ, ಸಕ್ಕರೆಗೊಲ್ಲಹಳ್ಳಿ ವಸತಿ ಶಾಲೆಯಲ್ಲಿ ಪುಲ್‌ಓವರ್‌ಗಳ ವಿತರಣೆ, ದ್ವಿಚಕ್ರ ವಾಹನಗಳಿಗೆ ಉಚಿತ ಆಯಿಲ್ ಸರ್ವೀಸ್, ವಾಯುಮಾಲಿನ್ಯ ತಪಾಸಣೆ, ವೇದಿಕೆ ಕಾರ್ಯಕ್ರಮದಲ್ಲಿ ಹಲವು ಗಣ್ಯರಿಗೆ ಸನ್ಮಾನ,ಸೇವಾ ಕಾರ್ಯ ಸೇರಿದಂತೆ ಒಂದೇ ದಿನ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ